ಚಿಕ್ಕೋಡಿ: ಮಹಿಳೆಯರಿಗೆ (Womens) ಗೌರವ ಕೊಡದೇ ಯಾವ ದೇವಸ್ಥಾನಕ್ಕೂ ಹೋದರೂ ದೇವರು ಒಲಿಯುವುದಿಲ್ಲ. ದೇವಿಯ ಅವತಾರವಾಗಿರುವ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಗೌರವಿಸಿದರೆ ಮಾತ್ರ ದೇವರು ಒಲಿಯುತ್ತಾನೆ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು (Chandrashekhar Shivacharya Mahaswamiji) ಹೇಳಿದರು.
Advertisement
ಪ್ರತಿವರ್ಷ ಅತ್ಯಂತ ಅದ್ಧೂರಿಯಾಗಿ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ನಡೆಯುತ್ತಿದ್ದ ಹಿರೇಮಠದ ದಸರಾ (Dasara) ಉತ್ಸವ ಈ ಬಾರಿ ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸರಳಾ ದಸರಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಶ್ರೀಗಳು, 9 ದಿನಗಳ ಕಾಲ ನಡೆಯುತ್ತಿದ್ದ ಹಿರೇಮಠ ದಸರಾ ಉತ್ಸವವನ್ನು ಕ್ಷೇತ್ರದ ಶಾಸಕ ಹಾಗೂ ಹಿರಿಯ ಸಚಿವ ಉಮೇಶ್ ಕತ್ತಿ ನಿಧನದಿಂದ ಸರಳವಾಗಿ ಆಚರಣೆ ನಡೆಸಲು ನಿರ್ಧರಿಸಲಾಗಿದೆ. ಶ್ರೀಮಠದ ಹಿಂದೆ ಹಾಕಿರುವ ಸರಳ ವೇದಿಕೆಯಲ್ಲಿ ನವದುರ್ಗೆಯರ ಮೂರ್ತಿ ಪ್ರತಿಷ್ಠಾಪನೆ ಮಾಡಿ ಚಂಡಿಕಾ ಯಾಗ ಮಾಡಿ ಆಚರಣೆ ಮಾಡಲಾಗುತ್ತಿದೆ. ಪ್ರತಿವರ್ಷ ಒಬ್ಬ ಸಾಧಕರ ಸಾಧನೆಯನ್ನು ಗುರುತಿಸಿ ಅವರಿಗೆ ಶ್ರೀಮಠದಿಂದ ರೇಣುಕಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿತ್ತು. ಆದರೆ ಈ ಬಾರಿ ಉಮೇಶ್ ಕತ್ತಿಯವರ (Umesh Katti) ಅಕಾಲಿಕ ನಿಧನದಿಂದ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ ಹಾಗೂ ಲೋಕ ಕಲ್ಯಾಣಕ್ಕಾಗಿ 9 ದಿನಗಳ ಕಾಲ ಚಂಡಿಕಾ ಯಾಗ ಆಯೋಜಿಸಲಾಗಿದೆ ಎಂದರು. ಇದನ್ನೂ ಓದಿ: ದೇಶದ ಬಹುದೊಡ್ಡ ಭಯೋತ್ಪಾದಕ ಸಂಘಟನೆ RSS : ಭಾಸ್ಕರ್ ಪ್ರಸಾದ್
Advertisement
Advertisement
ದಸರಾ ಉತ್ಸವಕ್ಕೆ ಬೆಂಗಳೂರಿನ ವಿಭೂತಿಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ಚಾಮೀಜಿ, ಹುಕ್ಕೇರಿ ತಹಶೀಲ್ದಾರ್ ಡಾ.ದೊಡ್ಡಪ್ಪ ಹೂಗಾರ ಹಾಗೂ ಸಿಪಿಐ ಮೊಹಮ್ಮದ್ ರಫೀಕ್ ಚಾಲನೆ ನೀಡಿದರು. ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ದಸರಾ ಉತ್ಸವ ನಡೆಯಲಿದೆ. ಇದನ್ನೂ ಓದಿ: ಮೋದಿ ಹೋದ ಕಡೆಯಲ್ಲಿ ಬಿಜೆಪಿ ಸೋತಿದೆ: ಸಿದ್ದರಾಮಯ್ಯ