ಬೆಂಗಳೂರು: ಎಲ್ಲರೂ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿ ಆಗಬೇಕು ಎಂದು ಸಿಎಂ ಸಮ್ಮುಖದಲ್ಲಿಯೇ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ (Chandrashekharnath Swamiji) ಹೇಳಿದ್ದಾರೆ.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಾ ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ. ಸ್ವಾಮೀಜಿ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಹೇಳುವಾಗ ಸಿಎಂ ಹಾಗೂ ಡಿಸಿಎಂ ಅಕ್ಕಪಕ್ಕದಲ್ಲೆ ಮೌನವಾಗಿ ಕುಳಿತಿದ್ದರು.
ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ಹೇಳಿದರು.
ಬೆಂಗಳೂರನ್ನ ವಿಭಾಗ ಮಾಡುವುದು ಬೇಡ. ಉತ್ತರ ಕರ್ನಾಟಕ ಬೇರೆ ದಕ್ಷಿಣ ಕರ್ನಾಟಕ ಬೇರೆ ಅಂತ ಡಿವೈಡ್ ಮಾಡಿದರೆ ಅಭಿವೃದ್ಧಿ ಆಗಲ್ಲ ಹಾಗೆಯೆ ಬೆಂಗಳೂರು ವಿಭಾಗ ಮಾಡುವುದು ಬೇಡ ಎಮದು ಇದೇ ವೇಳೆ ಸ್ವಾಮೀಜಿ ಮನವಿ ಮಾಡಿಕೊಂಡರು. ಇದನ್ನೂ ಓದಿ:ಚನ್ನಪಟ್ಟಣದಲ್ಲಿ ಡಿಕೆ ಬ್ರದರ್ಸ್ ಪೈಕಿ ಯಾರೇ ನಿಂತ್ರು ಸೋಲಿಸ್ತೀವಿ: ಆರ್.ಅಶೋಕ್