ನವದೆಹಲಿ: ಚಂದ್ರನ ದಕ್ಷಿಣ ಧ್ರುವದ (Moon South Pole) ಒರಟು, ಶೀತ (ತಾಪಮಾನವು ಮೈನಸ್ 230 ಡಿಗ್ರಿ ಸೆಂಟಿಗ್ರೇಡ್‌ಗೆ ಇಳಿಯಬಹುದು) ಮತ್ತು ಕಗ್ಗತ್ತಲು ಭೂಪ್ರದೇಶದ ಮೇಲೆ ಚಂದ್ರಯಾನ-3 ರ (Chandrayaan-3) ಲ್ಯಾಂಡರ್ ಮಾಡ್ಯೂಲ್ ಅನ್ನು ಯಶಸ್ವಿಯಾಗಿ ಇಳಿಸುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರನ ದಕ್ಷಿಣ ಧ್ರುವಕ್ಕೆ ಹೆಜ್ಜೆ ಇಟ್ಟ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ.
ರಷ್ಯಾದ ಲೂನಾ-25 (Luna-25) ಬಾಹ್ಯಾಕಾಶ ನೌಕೆ ಚಂದ್ರನ ಮೇಲೆ ಲ್ಯಾಂಡ್ ಆಗಿದ್ದರೆ, ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತಿತ್ತು. ಆದರೆ ಆಗಸ್ಟ್ 20 ರಂದು ಲೂನಾ-25 ಚಂದ್ರನ ಮೇಲೆ ಪ್ರೀ ಲ್ಯಾಂಡಿಂಗ್ ವೇಳೆ ವಿಫಲವಾಗಿ ಪತನವಾಯಿತು. ಇದರಿಂದ ಸಹಜವಾಗಿ ಭಾರತದ ಚಂದ್ರಯಾನ-3 ವಿಶ್ವದ ಗಮನ ಕೇಂದ್ರೀಕರಿಸಿತು. ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿದು ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಇದನ್ನೂ ಓದಿ: Chandrayaan-3 ಮಿಷನ್ ಸಕ್ಸಸ್: ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಕಾಲಿಟ್ಟ ವಿಕ್ರಮ್ ಲ್ಯಾಂಡರ್
Advertisement
Advertisement
ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡುವುದು ಸಾಧಾರಣ ಸಾಧನೆಯಲ್ಲ. ಚಂದ್ರನ ಮೇಲೆ ತಮ್ಮ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಇರಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಏಕೈಕ ನಾಲ್ಕು ದೇಶಗಳ ಸಾಲಿಗೆ ಭಾರತವೂ ಸೇರಿದೆ. ಚಂದ್ರನಲ್ಲಿ ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಯಶಸ್ವಿ ಕಾರ್ಯಾಚರಣೆ ನಡೆಸಿವೆ. ಇದರ ಜೊತೆಗೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಮತ್ತು ರೋವರ್ ಇಳಿಸಿದ ನಾಲ್ಕನೇ ದೇಶ ಎನಿಸಿಕೊಂಡಿದೆ ಭಾರತ. ಆದರೆ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಮೊದಲ ದೇಶವಾಗಿ ಭಾರತ ಹೆಸರಾಗಿದೆ.
Advertisement
Advertisement
ಈಗ ಭಾರತವು ಚಂದ್ರನ ಮೇಲೆ ಇಳಿಯುವಲ್ಲಿ ತನ್ನ ತಾಂತ್ರಿಕ ಪರಿಣತಿಯನ್ನು ಪ್ರದರ್ಶಿಸಿದೆ. ಇಸ್ರೇಲ್, ಜಪಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಂತಹ ಇತರ ದೇಶಗಳು ಈ ಹಿಂದೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿ ವಿಫಲವಾಗಿವೆ. ಇದನ್ನೂ ಓದಿ: ಇದು ನವಭಾರತದ ಉದಯ: ಇಸ್ರೋದ ಚಂದ್ರಯಾನ-3 ಯಶಸ್ಸಿಗೆ ಪ್ರಧಾನಿ ಮೋದಿ ಶುಭಾಶಯ
ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿದ್ದು, ಈಗ ಆರು ಚಕ್ರಗಳ ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಒಂದು ಚಂದ್ರನ ದಿನ (ಭೂಮಿಯ 14 ದಿನ) ಪ್ರಯೋಗಗಳನ್ನು ನಡೆಸಲಿದೆ.
Web Stories