ಉಡುಪಿ: ವಿಘ್ನ ವಿನಾಶಕನನ್ನು ನೂರೆಂಟು ಆಕಾರಗಳಲ್ಲಿ ಆರಾಧನೆ ಮಾಡಲಾಗುತ್ತದೆ. ದೇವಾಲಯಗಳ ನಗರಿ ಉಡುಪಿಯಲ್ಲಿ (Udupi) ವಿಭಿನ್ನ ಗಣಪತಿ (Chandrayaan-3) ಆರಾಧನೆ ನಡೆಯುತ್ತಿದೆ.
ಮಣಿಪಾಲದ (Manipal) ವೇಣುಗೋಪಾಲ ದೇವಸ್ಥಾನದಲ್ಲಿ ಚಂದ್ರಯಾನ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ರಾಘವೇಂದ್ರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಕಲಾವಿದರಾದ ಶ್ರೀನಾಥ ಮಣಿಪಾಲ ಮತ್ತು ರವಿ ಹಿರೇಬೆಟ್ಟು ಅವರ ಕಲ್ಪನೆಯಲ್ಲಿ ಈ ವಿಭಿನ್ನ ಗಣಪತಿ ಮೂಡಿ ಬಂದಿದೆ. ಚಂದ್ರಯಾನ ಗಣಪತಿ ದೇವಸ್ಥಾನಕ್ಕೆ ಬರುವ ಭಕ್ತರನ್ನು ಸೆಳೆಯುತ್ತಿದೆ. ಇದನ್ನೂ ಓದಿ: ತಲೆಮರೆಸಿಕೊಂಡಿದ್ದ ಹಾಲಶ್ರೀ ಒಡಿಸ್ಸಾದಲ್ಲಿ ಅರೆಸ್ಟ್
Advertisement
Advertisement
ಗಣಪನ ಬಲಗಡೆ ಭೂಮಿ ಮತ್ತು ಎಡಗಡೆ ಚಂದ್ರನ ಮಾದರಿ ಮಾಡಲಾಗಿದೆ. ಭೂಮಿಯಿಂದ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಚಂದ್ರನೆಡೆಗೆ ಹೊರಟಂತೆ ಮಾದರಿಯನ್ನು ರೂಪಿಸಲಾಗಿದೆ. ಇದರ ಜೊತೆಗೆ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ.
Advertisement
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯೋಜನೆಯು ಯಶಸ್ವಿಯಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿದಿದ್ದ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಉತ್ತಮ ರೀತಿಯಲ್ಲಿ ವೈಜ್ಞಾನಿಕ ಅಧ್ಯಯನ ನಡೆಸಿವೆ. ಇದನ್ನೂ ಓದಿ: ವರುಣಾ ಕ್ಷೇತ್ರದ ಮತದಾರರಿಗೆ ಎಲೆಕ್ಷನ್ ವೇಳೆ ಉಡುಗೊರೆ ಕೊಟ್ಟಿದ್ರು ಸಿದ್ದು – ತಂದೆ ಗಿಫ್ಟ್ ಬಗ್ಗೆ ಯತೀಂದ್ರ ಮಾಹಿತಿ
Advertisement
ಇಸ್ರೋದ ಈ ಮಹತ್ತರ ಸಾಧನೆಗೆ ಇಡೀ ಜಗತ್ತೇ ಮೆಚ್ಚುಗೆ ವ್ಯಕ್ತಪಡಿಸಿದೆ. ವಿಜ್ಞಾನ ಲೋಕದಲ್ಲಿ ಇದೊಂದು ಐತಿಹಾಸಿಕ ಸಾಧನೆ ಎಂದು ಕೊಂಡಾಡಿವೆ. ಇದರ ಬೆನ್ನಲ್ಲೇ ಈಗ ಸೂರ್ಯನ ಅಧ್ಯಯನಕ್ಕೆ ಆದಿತ್ಯ ಎಲ್1 ನೌಕೆಯನ್ನು ಇಸ್ರೋ ಉಡಾವಣೆ ಮಾಡಿದ್ದು, ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ.
Web Stories