ಬೆಂಗಳೂರು: ಚಂದ್ರಯಾನ-3 (Chandrayaan-3) ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್ ಆಗಿದ್ದು, ಚಂದ್ರಯಾನ ಯಶಸ್ಸಿನ ಬಳಿಕ ನಾಸಾ (NASA) ಆಡಳಿತಾಧಿಕಾರಿ ಬಿಲ್ ನಲ್ಸೆನ್ (Bill Nelson) ಟ್ವೀಟ್ (Tweet) ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಇಸ್ರೋ (ISRO) ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿ ಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ (Vikram Lander) ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿತು. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು. ಇದನ್ನೂ ಓದಿ: ಸಾಫ್ಟ್ ಲ್ಯಾಂಡಿಂಗ್ ಸುಲಭ ಇರಲಿಲ್ಲ: ಇಸ್ರೋ ಅಧ್ಯಕ್ಷ
Advertisement
Congratulations @isro on your successful Chandrayaan-3 lunar South Pole landing! And congratulations to #India on being the 4th country to successfully soft-land a spacecraft on the Moon. We’re glad to be your partner on this mission! https://t.co/UJArS7gsTv
— Bill Nelson (@SenBillNelson) August 23, 2023
Advertisement
ಸಂಜೆ 6:04ರ ಹೊತ್ತಿಗೆ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿದ್ದು, ಪ್ರತಿಯೊಬ್ಬ ಭಾರತೀಯ ಪ್ರಜೆ ಹೆಮ್ಮೆ ಪಡುವ ಕ್ಷಣ ಇದಾಗಿದೆ. ಈ ಕುರಿತು ನಾಸಾ ಆಡಳಿತಾಧಿಕಾರಿ ಬಿಲ್ ನಲ್ಸೆನ್ ಟ್ವೀಟ್ ಮಾಡಿ ಇಸ್ರೋ ತಂಡಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಇದು ನವಭಾರತದ ಉದಯ: ಇಸ್ರೋದ ಚಂದ್ರಯಾನ-3 ಯಶಸ್ಸಿಗೆ ಪ್ರಧಾನಿ ಮೋದಿ ಶುಭಾಶಯ
Advertisement
Advertisement
ಟ್ವೀಟ್‌ನಲ್ಲಿ ಏನಿದೆ?: ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ 4ನೇ ರಾಷ್ಟ್ರವಾಗಿರುವ ಭಾರತಕ್ಕೆ ಅಭಿನಂದನೆಗಳು. ಈ ಕಾರ್ಯಾಚರಣೆಯಲ್ಲಿ ನಿಮ್ಮ ಪಾಲುದಾರರಾಗಲು ನಮಗೆ ಸಂತೋಷವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Chandrayaan-3 ಮಿಷನ್ ಸಕ್ಸಸ್: ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಕಾಲಿಟ್ಟ ವಿಕ್ರಮ್ ಲ್ಯಾಂಡರ್
Web Stories