ನವದೆಹಲಿ: ಚಂದ್ರಯಾನ-3ರ ಯಶಸ್ಸಿನ ಕುರಿತು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ (S Somanath) ಅವರಿಗೆ ಕಾಂಗ್ರೆಸ್‌ನ (Congress) ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ (Sonia Gandhi) ಗುರುವಾರ ಪತ್ರ (Letter) ಬರೆಯುವ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಬಾಹ್ಯಾಕಾಶ ಸಂಸ್ಥೆಯ ಅತ್ಯುತ್ತಮ ಸಾಮರ್ಥ್ಯಗಳನ್ನು ದಶಕಗಳಿಂದ ನಿರ್ಮಿಸಲಾಗಿದೆ ಮತ್ತು 1960ರ ದಶಕದಿಂದ ಆರಂಭಗೊಂಡ ಇಸ್ರೋ (ISRO) ಈಗ ಸ್ವಾವಲಂಬನೆ ಸಾಧಿಸಿರುವುದು ಅದರ ಯಶಸ್ಸಿಗೆ ಕೊಡುಗೆ ನೀಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲೆ ನಡೆದಾಡಿದ ಪ್ರಗ್ಯಾನ್ ರೋವರ್ – ವಿಕ್ರಮ್ ಲ್ಯಾಂಡರ್‌ನಿಂದ ಹೊರಬರಲು ತಡವಾಗಿದ್ಯಾಕೆ?
ಪತ್ರದಲ್ಲಿ ಏನಿದೆ?
ಬುಧವಾರ ಸಂಜೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅದ್ಭುತ ಸಾಧನೆಯಿಂದ ನಾನು ಎಷ್ಟು ರೋಮಾಂಚನಗೊಂಡಿದ್ದೇನೆ ಎಂಬುದನ್ನು ತಿಳಿಸಲು ಪತ್ರ ಬರೆದಿದ್ದು, ಇದು ಎಲ್ಲಾ ಭಾರತೀಯರಿಗೆ, ವಿಶೇಷವಾಗಿ ಯುವ ಪೀಳಿಗೆಗೆ ಬಹಳ ಹೆಮ್ಮೆ ಮತ್ತು ಉತ್ಸಾಹದ ವಿಷಯವಾಗಿದೆ. ಇದನ್ನೂ ಓದಿ: ಚಂದ್ರಯಾನ-3 ರಾಷ್ಟ್ರದ ಮೆರವಣಿಗೆಯಲ್ಲಿ ಒಂದು ಮೈಲಿಗಲ್ಲನ್ನು ಪ್ರತಿನಿಧಿಸುತ್ತದೆ: ಡಿ.ವೈ ಚಂದ್ರಚೂಡ್
ಇಡೀ ಇಸ್ರೋ ಭ್ರಾತೃತ್ವಕ್ಕೆ ನಾನು ಶುಭ ಹಾರೈಸುತ್ತೇನೆ ಮತ್ತು ಈ ಮಹತ್ವದ ಸಂದರ್ಭದಲ್ಲಿ ಅದರ ಪ್ರತಿಯೊಬ್ಬ ಸದಸ್ಯರಿಗೂ ನನ್ನ ಆತ್ಮೀಯ ಶುಭಾಶಯಗಳನ್ನು ತಿಳಿಸುತ್ತೇನೆ ಎಂದು ಬರೆಯುವ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಯುವ ಕನಸುಗಾರರ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ- ಚಂದ್ರಯಾನ ಯಶಸ್ಸಿಗೆ ರಾಗಾ ಶ್ಲಾಘನೆ
ಭಾರತದ ಚಂದ್ರಯಾನ-3 ಮಿಷನ್ ಬುಧವಾರ ಸಂಜೆ 6:04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಆಗಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಮಾಡಿದ ಮೊದಲ ದೇಶ ಭಾರತ ಎಂಬ ಹೆಗ್ಗಳಿಕೆ ಗಳಿಸಿದೆ. ರಷ್ಯಾದ ಲ್ಯಾಂಡರ್ ಅಪಘಾತಕ್ಕೀಡಾದ ಒಂದು ವಾರದ ಬಳಿಕ ವಿಕ್ರಂ ಲ್ಯಾಂಡರ್ (Vikram Lander) ಚಂದ್ರನ ಮೇಲೆ ಲ್ಯಾಂಡ್ ಆಗಿದ್ದು, ಚಂದ್ರನ ಮೇಲೆ ಕಾಲಿಟ್ಟ ನಾಲ್ಕನೇ ದೇಶ ಭಾರತವಾಗಿದೆ. ಇದನ್ನೂ ಓದಿ: ಚಂದ್ರಯಾನದ ಯಶಸ್ಸು ಸಂಭ್ರಮಿಸಿದ ಟೀಂ ಇಂಡಿಯಾ
ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಬಳಿಕ ಹಲವು ಗಂಟೆಗಳ ನಂತರ ವಿಕ್ರಮ್ ಲ್ಯಾಂಡರ್‌ನಿಂದ ರೋವರ್ ಹೊರಬಂದಿದ್ದು, ಚಂದ್ರನ ಮೇಲೆ ವೈಜ್ಞಾನಿಕ ಅಧ್ಯಯನ ಆರಂಭಿಸಿದೆ. ಇದನ್ನೂ ಓದಿ: Chandrayaan-3: ಚಂದ್ರನ ದಕ್ಷಿಣ ಧ್ರುವದಲ್ಲಿ ಹೆಜ್ಜೆ ಇಟ್ಟ ಮೊದಲ ದೇಶ ಭಾರತ
Web Stories