ಬೆಂಗಳೂರು: ಚಂದ್ರಯಾನ-3 (Chandrayaan-3) ಕುರಿತಂತೆ ಟ್ವೀಟ್ (Tweet) ಮಾಡಿ ವಿವಾದ (Controversy) ಮೈಮೇಲೆ ಎಳೆದುಕೊಂಡಿದ್ದ ದಕ್ಷಿಣ ಭಾರತದ ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj) ಮತ್ತೊಂದು ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ. ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ, ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ, ಬಾಲಿಶವಾಗಿ ವರ್ತಿಸುವುದನ್ನ ನಿಲ್ಲಿಸಿ ಎಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಚಂದ್ರಯಾನ ಇದೀಗ ಕಳುಹಿಸಿರುವ ಫೋಟೋ ಎಂದು ಕ್ಯಾಪ್ಷನ್ ನೀಡಿ ‘ಚಾಯ್ ವಾಲಾ’ ಫೋಟೋ ಹಾಕಿದ್ದ ಅವರ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
Advertisement
Hate sees only Hate.. i was referring to a joke of #Armstrong times .. celebrating our kerala Chaiwala .. which Chaiwala did the TROLLS see ?? .. if you dont get a joke then the joke is on you .. GROW UP #justasking https://t.co/NFHkqJy532
— Prakash Raj (@prakashraaj) August 21, 2023
Advertisement
ಇಡೀ ದೇಶವೇ ಹೆಮ್ಮೆ ಪಡುವಂತೆ ನಿಮ್ಮ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಜಗತ್ತೇ ಈ ಕೆಲಸಕ್ಕಾಗಿ ಕೊಂಡಾಡುತ್ತಿದೆ. ಆದರೆ ಪ್ರಕಾಶ್ ರೈ ಈ ರೀತಿ ಗೇಲಿ ಮಾಡುವುದು ಸರಿಯಲ್ಲ. ಭಾರತದ ಅಸ್ಮಿತೆಯನ್ನೇ ಪ್ರಶ್ನೆ ಮಾಡುವ ನಟನಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವುದನ್ನು ನೋಡಲು ಕಾಯುತ್ತಿದ್ದೇನೆ- ಕರೀನಾ ಕಪೂರ್
Advertisement
Advertisement
ಪ್ರಕಾಶ್ ರೈ ಅವರ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಹೆಸರಾಂತ ನಟನಾಗಿ ಯಾವ ರೀತಿಯಲ್ಲಿ ನಡೆದುಕೊಳ್ಳಬೇಕು ಎನ್ನುವುದನ್ನು ಕಲಿಸಬೇಕಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಪ್ರಕಾಶ್ ರೈ ಪರವಾಗಿ ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ನ್ಯೂಯಾರ್ಕ್ನ 41ನೇ ಇಂಡಿಯಾ ಡೇ ಪರೇಡ್ನಲ್ಲಿ ಭಾಗಿಯಾದ ಸಮಂತಾ
ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಪ್ರಕಾಶ್ ರಾಜ್, ʻದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ. ನಾನು ಉಲ್ಲೇಖಿಸಿದ್ದು ನಮ್ಮ ಕೇರಳದ ಚಾಯ್ವಾಲಾರನ್ನ ವಿಜೃಂಭಿಸುವ ಆರ್ಮ್ಸ್ಟ್ರಾಂಗ್ ಕಾಲದ ಜೋಕ್. ಟ್ರೋಲಿಗರ ಕಣ್ಣಿಗೆ ಕಾಣಿಸಿದ ಚಾಯ್ವಾಲಾ ಯಾರು? ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ. ಬಾಲಿಶವಾಗಿ ವರ್ತಿಸುವುದನ್ನು ನಿಲ್ಲಿಸಿʼ ಎಂದು ಸ್ಪಷ್ಟನೆ ನೀಡಿದ್ದಾರೆ.
Web Stories