ಬೆಂಗಳೂರು: ಬದಲಾವಣೆಯೇ ಬೆಳಕು, ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ (D K Shivakumar) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರೇ ಬದಲಾವಣೆ ಬಯಸಿದ್ದಾರೆ. ನಮ್ಮ ರಾಜ್ಯದಿಂದ ಕಾರ್ಯಕ್ರಮಗಳು ಆರಂಭವಾಗಿವೆ. ಮುಂದೆ ಮಹಾರಾಷ್ಟ್ರ ಚುನಾವಣೆ ಇದೆ. ನಾವು ಜನರ ಪರ ಕಾರ್ಯಕ್ರಮ ಕೋಟ್ಟಿದ್ದೇವೆ. ಭಾವನೆ ಬೇಡ ಎಂದು ಬದುಕಿಗಾಗಿ ಕಾರ್ಯಕ್ರಮ ಕೊಟ್ಟಿದ್ದೇವೆ. ಜನರ ಭಾವನೆಯೇ ಇದು. ನಾನು ಇದನ್ನು ಮುಂದಿನ ರಾಜ್ಯಗಳ ಚುನಾವಣೆಗೆ ದಿಕ್ಸೂಚಿ ಎಂದು ಹೇಳುತ್ತಿಲ್ಲ. ಬದಲಾವಣೆಯೇ ಬೆಳಕು ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಎಂದು ಹೇಳಿದರು. ಇದನ್ನೂ ಓದಿ: Haryana Results| ಮಾಜಿ ಕುಸ್ತಿಪಟು ವಿನೇಶ್ ಫೋಗಟ್‌ಗೆ ಹಿನ್ನಡೆ
- Advertisement
ದೇಶದಲ್ಲಿ ಎಲ್ಲದಕ್ಕೂ ಒಂದೊಂದು ಕಾಲ ಇರುತ್ತೆ. 12 ವರ್ಷ ಎನ್‌ಡಿಎಗೆ ದೊಡ್ಡ ಅವಕಾಶ ಕೊಟ್ಟಿದ್ದಾರೆ. ಈಗ ಜನರು ಬದಲಾವಣೆ ಬಯಸಿದ್ದಾರೆ. ಅದರ ಫಲವಾಗಿ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ಎಂದರು. ಇದನ್ನೂ ಓದಿ: ವಕ್ಫ್ ಆಸ್ತಿ ದೇವರ ಆಸ್ತಿ, ಕಬಳಿಕೆ ಆಗಬಾರದು ರಕ್ಷಣೆ ಮಾಡಬೇಕು; ಸಚಿವ ಜಮೀರ್ ಕರೆ
- Advertisement
ಹರಿಯಾಣದಲ್ಲಿ ಹಾವು-ಏಣಿ ಆಟ:
ಜಮ್ಮು ಮತ್ತು ಕಾಶ್ಮೀರ, ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಹರ್ಯಾಣದಲ್ಲಿ (Haryana Election Results) ಹಾವು ಏಣಿ ಆಟ ಆರಂಭವಾಗಿದೆ. ಆರಂಭದಲ್ಲಿ ಕಾಂಗ್ರೆಸ್ (Congress) ಮುನ್ನಡೆಯಲ್ಲಿದ್ದರೆ ಈಗ ಬಿಜೆಪಿ (BJP) ಮುನ್ನಡೆ ಸಾಧಿಸಿದೆ. ಬೆಳಗ್ಗಿನ 9 ಗಂಟೆಯ ಟ್ರೆಂಡ್ ವೇಳೆ ಕಾಂಗ್ರೆಸ್ ಮುನ್ನಡೆಯಲ್ಲಿತ್ತು. ಆದರೆ ಬೆಳಗ್ಗೆ 10 ಗಂಟೆಯ ಟ್ರೆಂಡ್ ವೇಳೆ ಬಿಜೆಪಿ ಮುನ್ನಡೆ ಸಾಧಿಸಿದೆ. ಸದ್ಯ ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ 41 ಇತರರು 03 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇದನ್ನೂ ಓದಿ: ಹರ್ಯಾಣದಲ್ಲಿ ಹಾವು ಏಣಿ ಆಟ ಆರಂಭ – ಬಿಜೆಪಿಗೆ ಅಲ್ಪ ಮುನ್ನಡೆ
ಹರ್ಯಾಣದಲ್ಲಿ (Haryana) ಒಟ್ಟು 90 ಕ್ಷೇತ್ರಗಳಿದ್ದು ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಬಿಜೆಪಿ 2014 ರಿಂದ ಅಧಿಕಾರದಲ್ಲಿತ್ತು. 2014ರ ಚುನಾವಣೆಯಲ್ಲಿ ಬಿಜೆಪಿ 47 ರಲ್ಲಿ ಜಯಗಳಿಸಿದರೆ ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು. ಇದನ್ನೂ ಓದಿ: ಲಂಚದ ಆರೋಪ – ರಾಜ್ಯಾದ್ಯಂತ ವಿವಿಧೆಡೆ RTO ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ