ವಿಜಯನಗರ: ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಶನಿವಾರ ಬೆಳಗ್ಗೆ ವಿಜಯನಗರ ಜಿಲ್ಲೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರನ್ನು ಅದಲು ಬದಲು ಮಾಡಿ ಆದೇಶ ಹೊರಡಿಸಿತ್ತು. ಆದರೆ ಅದೇ ಆದೇಶವನ್ನು ಸರ್ಕಾರ ಸಂಜೆ ವಾಪಸ್ ಪಡೆದಿದೆ.
ನೂತನ ವಿಜಯನಗರ ಜಿಲ್ಲೆ ಉದಯವಾದ ಬಳಿಕ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆನಂದ್ ಸಿಂಗ್ ನೇಮಕವಾಗಿದ್ದರು. ಆದರೆ ಬಳಿಕ ಆನಂದ್ ಸಿಂಗ್ ಅವರನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿತ್ತು. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಕಗೊಂಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿಂದು 1,886 ಕೊರೊನಾ ಕೇಸ್ ಪತ್ತೆ – ಸೋಂಕಿಗೆ ಓರ್ವ ಬಲಿ
Advertisement
Advertisement
ಸ್ವಂತ ಜಿಲ್ಲೆಯ ಸಚಿವರುಗಳಿಗೆ ಬೇರೆ ಜಿಲ್ಲೆ ಉಸ್ತುವಾರಿ ನೀಡಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹಿನ್ನೆಲೆ ಇಂದು ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಅದಲು ಬದಲು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಸಂಜೆ ವೇಳೆಗೆ ಬೆಳಗ್ಗೆ ನೀಡಿದ್ದ ಆದೇಶವನ್ನು ತಡೆ ಹಿಡಿದು, ಯಥಾಸ್ಥಿತಿ ಕಾಪಾಡಲು ಸರ್ಕಾರ ಸೂಚನೆ ನೀಡಿದೆ. ಇದನ್ನೂ ಓದಿ: ಗೃಹ ಸಚಿವರ ಮನೆಗೆ ಮುತ್ತಿಗೆ ಪ್ರಕರಣ – ಇಬ್ಬರು ಪೊಲೀಸರು ಅಮಾನತು
Advertisement
ಸರ್ಕಾರ ಬೆಳಗ್ಗೆ ನೀಡಿದ್ದ ಆದೇಶದಿಂದ ಸಚಿವರ ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಪಟ್ಟಿದ್ದರು. ಆದರೆ ಸಂಜೆ ಸರ್ಕಾರ ಆದೇಶ ಹಿಂಪಡೆದ ಹಿನ್ನೆಲೆ ಆನಂದ್ ಸಿಂಗ್ ಅಭಿಮಾನಿಗಳಿಗೆ ನಿರಾಶೆ ತಂದಿದೆ.