ಮಂಡ್ಯ: ಉತ್ತರಾಯಣಕ್ಕೆ ಸೂರ್ಯ ಪಥ ಬದಲಿಸಿದ ಹಿನ್ನೆಲೆ ಮಂಡ್ಯದ (Mandya) ಕಾಶಿ ಚಂದ್ರಮೌಳೇಶ್ವರ ಸ್ವಾಮಿ ದೇಗುಲದಲ್ಲಿ (Kashi Chandramouleshwara Temple) ಸೂರ್ಯ ರಶ್ಮಿ ಸ್ಪರ್ಶವಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ (Srirangapatna) ಚಂದ್ರವನ (Chandravana) ಆಶ್ರಮದಲ್ಲಿರುವ ಈ ದೇವಾಲಯದ ಗರ್ಭಗುಡಿಯ ಲಿಂಗದ ಮೇಲೆ ಸೂರ್ಯ ರಶ್ಮಿ ಸ್ಪರ್ಶವಾಗಿದೆ. ಶ್ರೀರಂಗಪಟ್ಟಣದ ದಕ್ಷಿಣ ಕಾವೇರಿ ತೀರದಲ್ಲಿರುವ ಶಿವನ ದೇವಾಲಯ ಇದಾಗಿದ್ದು, ಶಿವಲಿಂಗದ ಜೊತೆಗೆ ಪಾರ್ವತಿ ದೇವಿ ವಿಗ್ರಹದ ಮೇಲೂ ಸೂರ್ಯ ರಶ್ಮಿ ಸ್ಪರ್ಶವಾಗಿದೆ. ಬೆಳಗ್ಗೆ 7:50ಕ್ಕೆ ಸೂರ್ಯನ ಕಿರಣಗಳು ದೇವಾಲಯವನ್ನು ಸ್ಪರ್ಶಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಮಿಲಿಂದ್ ದಿಯೋರಾ ರಾಜೀನಾಮೆ ನೀಡಿದ್ದು ಯಾಕೆ?
Advertisement
Advertisement
ಶಿವಲಿಂಗದ ಮೇಲೆ ಸೂರ್ಯ ರಶ್ಮಿ ಸ್ಪರ್ಶವಾದ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಮುಂಜಾನೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭಗೊಂಡಿದ್ದು, ವಿವಿಧ ಅಭಿಷೇಕ, ಮಂಗಳಾರತಿ ಸೇರಿದಂತೆ ಹಲವು ಪೂಜೆ ಪುನಸ್ಕಾರಗಳನ್ನು ಮಾಡಲಾಗಿದೆ. ಚಂದ್ರವನ ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ನೇತೃತ್ವದಲ್ಲಿ ಪೂಜೆ ನೆರೆವೇರಿಸಲಾಗಿದೆ. ಈ ಕೌತುಕವನ್ನು ಕಣ್ತುಂಬಿಕೊಳ್ಳಲು ಮುಂಜಾನೆಯಿಂದಲೇ ಭಕ್ತರು ಕಾಯುತ್ತಿದ್ದು, ಸೂರ್ಯ ರಶ್ಮಿ ಸ್ಪರ್ಶದ ಅದ್ಭುತ ಕ್ಷಣಗಳನ್ನು ಕಣ್ತುಂಬಿಕೊಂಡು ಪುನೀತರಾಗಿದ್ದಾರೆ. ಇದನ್ನೂ ಓದಿ: ನಾಡಿನೆಲ್ಲೆಡೆ ಸಂಕ್ರಾಂತಿ ಸಂಭ್ರಮ – ಕನ್ನಡದಲ್ಲೇ ಪ್ರಧಾನಿ ಮೋದಿ ವಿಶ್
Advertisement