ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದ ಹಾಡಿನ ಬಗ್ಗೆ ಈವರೆಗೂ ವಿವಾದ ಎದ್ದಿತ್ತು. ಈ ಬಾರಿ ಟೈಟಲ್ ಬಗ್ಗೆಯೂ ಅಪಸ್ವರ ಶುರುವಾಗಿದೆ. ಈ ಟೈಟಲ್ ಇಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೂಡಲೇ ಈ ಶೀರ್ಷಿಕೆಯನ್ನು ಬದಲಾಯಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Advertisement
ಮುಸ್ಲಿಂ ಸಮುದಾಯದಲ್ಲಿ ಪಠಾಣರು ಎಂದರೆ ಗೌರವದಿಂದ ಇರುವವರು ಎಂದರ್ಥ. ಆದರೆ, ಈ ಸಿನಿಮಾದಲ್ಲಿ ಅದನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಯತ್ನ ಮಾಡಲಾಗಿದೆ. ಕೂಡಲೇ ಶೀರ್ಷಿಕೆಯನ್ನು ಬದಲಾಯಿಸಿ ಎಂದು ಹಲವು ಮುಸ್ಲಿಂ ಸಂಘಟನೆಗಳು ಒತ್ತಾಯಿಸಿವೆ. ಅಲ್ಲದೇ, ಈ ಟೈಟಲ್ ಇಟ್ಟುಕೊಂಡು ನಾಯಕಿಗೆ ಬಿಕಿನಿ ಹಾಕಿಸುವ ಮೂಲಕ ಗೌರವವನ್ನು ಕಳೆಯುವ ಪ್ರಯತ್ನ ಮಾಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಮಗು ಯಾವ ಧರ್ಮಕ್ಕೆ ಸೇರುತ್ತೆ ಎಂದು ಕೇಳಿದವರಿಗೆ ಖಡಕ್ ಉತ್ತರ ಕೊಟ್ಟ ನಟಿ ದೆವೊಲೀನಾ
Advertisement
Advertisement
ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.
Advertisement
ಪಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಜೋರಾಗಿದೆ.