ಬೆಳಗಾವಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ (Assembly Election) ಕಾಂಗ್ರೆಸ್ (Congress) ಪಕ್ಷಕ್ಕೆ ಅಭೂತಪೂರ್ವ ಜಯ ಸಿಕ್ಕಾಗ ನಮಗೆ ಗಾಬರಿ ಆಗಿತ್ತು. ಆದರೆ ಕಳೆದ ಇಪ್ಪತ್ತು ದಿನಗಳಲ್ಲಿಯೇ ಬದಲಾವಣೆ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.
ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿರುವ ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಶಿಕ್ಷಣ ವರ್ಗ ಯಶಸ್ವಿಯಾಗಿ ನಡೆಯುತ್ತಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ (BJP) ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಮತ್ತೊಂದೆಡೆ ನಾವು ನಿರೀಕ್ಷೆ ಮಾಡದ ರೀತಿಯಲ್ಲಿ ಕರ್ನಾಟಕದಲ್ಲಿ ನಮಗೆ ಹಿನ್ನಡೆ ಆಗಿದೆ. ಪಕ್ಷದ ಕಾರ್ಯಕರ್ತರಲ್ಲೂ ನಿರುತ್ಸಾಹ, ಆಕ್ರೋಶ ಇತ್ತು. ಮುಂದಿನ ಲೋಕಸಭಾ ಚುನಾವಣೆ ಯಶಸ್ವಿಯಾಗಿ ನಡೆಸಬೇಕಿದೆ. ಜಿ.ಪಂ, ತಾ.ಪಂ ಚುನಾವಣೆ ಬರುತ್ತದೆ. ಅದನ್ನು ಯಶಸ್ವಿಯಾಗಿ ಮಾಡಬೇಕು ಎಂದರು. ಇದನ್ನೂ ಓದಿ: ಹಾಸನ ಅಕ್ರಮ ಗೋ ಸಾಗಾಣಿಕೆಯಲ್ಲಿ ಪೊಲೀಸರೇ ಕಿಂಗ್ ಪಿನ್ : ಸೂರಜ್ ರೇವಣ್ಣ
ಕಳೆದ ಆರು ತಿಂಗಳಿನಿಂದ ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಕಳೆದ ನಾಲ್ಕು ವರ್ಷಗಳ ಕಾಲ ಕಟೀಲ್ ಪಕ್ಷಕ್ಕೆ ಸಂಘಟನೆ ಶಕ್ತಿ ಕೊಟ್ಟರು. ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಚರ್ಚೆ ಜೊತೆಗೆ ಆಡಳಿತ ಪಕ್ಷದ ನಾಯಕರಿಂದ ಟೀಕೆ ಆಗುತ್ತಿತ್ತು. ನಂತರ ರಾಷ್ಟ್ರೀಯ ನಾಯಕರು ನನಗೆ ದೊಡ್ಡ ಜವಾಬ್ದಾರಿ ವಹಿಸಿದ್ದಾರೆ.ವಿಧಾಸಭಾ ಚುನಾವಣೆ ಆದ ನಂತರ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಜಯ ಸಿಕ್ಕಾಗ ನಮಗೆ ಗಾಬರಿ ಆಗಿತ್ತು. ಆದರೆ ಕಳೆದ ಇಪ್ಪತ್ತು ದಿನಗಳಿಂದ ಯಾವ ರೀತಿ ಬದಲಾವಣೆ ಆಗಿದೆ ಎಂಬುದನ್ನು ನೋಡಿ ಎಂದರು. ಇದನ್ನೂ ಓದಿ: ರೇವಂತ್ ರೆಡ್ಡಿಗೆ ಶುಭಕೋರಿ ಬೆಂಬಲದ ಭರವಸೆ ಕೊಟ್ಟ ಪ್ರಧಾನಿ ಮೋದಿ
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ ಸಿಕ್ಕಿದೆ. ಪಂಚರಾಜ್ಯ ಚುನಾವಣೆ ಮುನ್ನ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಇಂಡಿಯಾ ಒಕ್ಕೂಟ ಹೇಳಿತ್ತು. ಚುನಾವಣೆ ನಂತರ ಬಿಜೆಪಿಗೆ ಆನೆಬಲ ಬಂದರೆ ಕಾಂಗ್ರೆಸ್ ಪಕ್ಷಕ್ಕೆ ಟಯರ್ ಪಂಚರ್ ಆಗಿರುವ ಭಾಸ ಆಗುತ್ತಿದೆ. ಪಂಚರಾಜ್ಯಗಳ ಫಲಿತಾಂಶ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಕೇಂದ್ರದಲ್ಲಿ ನರೇಂದ್ರ ಮೋದಿ ಬೇಕು ಎನ್ನುವ ಸಂದೇಶ ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ನಮಗೆ ನಿಜವಾಗಲೂ ಹಿನ್ನಡೆ ಆಗಿದೆ. ಕಳೆದೊಂದು ತಿಂಗಳಿನಿಂದ ಬದಲಾವಣೆ ಆಗಿದೆ. ಕರ್ನಾಟಕದ 28 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ. ಕಾಂಗ್ರೆಸ್‌ನವರು ಆತಂಕದಲ್ಲಿ ಇದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮುಸ್ಲಿಮರಿಗೆ 10 ಸಾವಿರ ಕೋಟಿ ಹೇಳಿಕೆಗೆ ಸಿದ್ದರಾಮಯ್ಯ ವಿವರಣೆ ನೀಡಬೇಕು: ಶ್ರೀನಿವಾಸ ಪೂಜಾರಿ
ಹೊಸ ಸರ್ಕಾರ ಬಂದಾಗ ಜನರು ಸಕಾರಾತ್ಮಕವಾಗಿ ಮಾತನಾಡುತ್ತಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಾಕೆ ಅಧಿಕಾರಕ್ಕೆ ಬಂತು ಎಂದು ಶಾಪ ಹಾಕುತ್ತಿದ್ದಾರೆ. ಆರೇ ತಿಂಗಳಲ್ಲಿ ಕಾಂಗ್ರೆಸ್ ಜನಪ್ರಿಯತೆ ಕಳೆದುಕೊಂಡಿದೆ. ರಾಜ್ಯದಲ್ಲಿ ಬಿಜೆಪಿ ಪರವಾಗಿ ವಾತಾವರಣ ನಿರ್ಮಾಣವಾಗುತ್ತಿದೆ. ಬರಗಾಲ ಇದ್ದರೂ ಸರ್ಕಾರ ಪರಿಹಾರ ನೀಡುತ್ತಿಲ್ಲ. ರೈತರಪರವಾದ ಚಿಂತನೆ ರಾಜ್ಯ ಸರ್ಕಾರಕ್ಕಿಲ್ಲ. ಜಾನುವಾರುಗಳಿಗೆ ಹಾಕುವ ಮೇವಿನ ಬೆಲೆ ಏರಿಕೆ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಗೆ ಬರುವ ಹಣ ಬಂದ್ ಮಾಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್ ರೆಡ್ಡಿ
ನಮ್ಮ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಕೈಬಲಪಡಿಸುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕು. ಆಗ ಪ್ರಧಾನಿ ನರೇಂದ್ರ ಮೋದಿ ತಡೆಯುವ ಶಕ್ತಿ ಯಾರಿಗೂ ಇರಲ್ಲ. ನಮ್ಮ ಜವಾಬ್ದಾರಿ ಅರಿತು ಪಕ್ಷ ಸಂಘಟನೆ ಮಾಡಬೇಕು ಎಂದರು. ಇದನ್ನೂ ಓದಿ: ‘ಮೋದಿ ಜೀ’ ಕರೆದು ಸಾರ್ವಜನಿಕರಿಂದ ನನ್ನ ದೂರ ಮಾಡ್ಬೇಡಿ: ಪ್ರಧಾನಿ ಮನವಿ
ಬೆಳಗಾವಿಯಲ್ಲಿ ನಗರಸೇವಕನ ಮೇಲೆ ಹಲ್ಲೆಯಾಗಿದ್ದರೂ ಯಾವ ರೀತಿ ಡಿಸ್ಚಾರ್ಜ್ ಮಾಡಿದ್ದಾರೆ. ಕಾಂಗ್ರೆಸ್ ಪುಡಾರಿಗಳು ಏನು ಮಾಡಿದ್ದಾರೆ ಅನೋದನ್ನ ನೋಡಿದ್ದೇನೆ. ಪೃಥ್ವಿ ಸಿಂಗ್ ಮೇಲೆ ಪ್ರಭಾವಿ ಸಚಿವೆ ಸಹೋದರ, ಎಂಎಲ್ಸಿ ಇಂದ ಹಲ್ಲೆ ಆಗಿದೆ. ರಾಜ್ಯ ಸರ್ಕಾರದ ಅಧಿಕಾರ ಧರ್ಮ ಇದರಲ್ಲಿ ಎದ್ದು ತೋರಿಸುತ್ತದೆ. ನಾವು ಬಿಜೆಪಿ ಕಾರ್ಯಕರ್ತರ ರಕ್ಷಣೆಗೆ ಬರುತ್ತೇವೆ. ಬೆಳಗಾವಿ ರಾಜಕೀಯ ಪರಿಸ್ಥಿತಿ ಏನು ಅಂತಾ ಗೊತ್ತಿದೆ. ನಮ್ಮ ಶಾಸಕರ, ಕಾರ್ಯಕರ್ತರ ಜೊತೆ ಕುಳಿತು ಚರ್ಚೆ ಮಾಡುತ್ತೇನೆ. ಬಿಜೆಪಿ ಕಾರ್ಯಕರ್ತರು ಗೌರವದಿಂದ ಓಡಾಡುವಂತಹ ವಾತಾವರಣ ಮಾಡುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸುದ್ದಿಗೋಷ್ಠಿಗೆ ಮುನ್ನವೇ ಮಣಿಕಂಠ್ ರಾಠೋಡ್‌ನ ವಶಕ್ಕೆ ಪಡೆದ ಕಲಬುರಗಿ ಪೊಲೀಸರು