ಬೆಂಗಳೂರು: ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ? ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ದೇಶದ ಹೆಸರನ್ನು ಇಂಡಿಯಾ (INDIA) ಬದಲು ಭಾರತ ಎಂದು ಬದಲಿಸೋದು ಮುಖ್ಯ ಅಲ್ಲಾ. ದೇಶದ ಎಲ್ಲಾ ಜನರಿಗೂ ಅನ್ನ, ಉದ್ಯೋಗ, ಮನೆ ಸಿಕ್ಕರೆ ಅದನ್ನು ಬದಲಾವಣೆ ಎನ್ನಬಹುದು. ಕಳೆದ 9 ವರ್ಷಗಳಲ್ಲಿ ಜನರ ಆದಾಯ ದುಪಟ್ಟಾಯಿತೇ? 15 ಲಕ್ಷ ರೂ. ಹಣ ಬ್ಯಾಂಕ್ ಖಾತೆಗೆ ಬಂದಿದೆಯೇ? ಇಲ್ಲ. ಒಂದೇ ಒಂದು ಅಕ್ಕಿಕಾಳು ಕಡಿಮೆ ಕೊಟ್ಟರೂ ಬಿಡುವುದಿಲ್ಲ ಎಂದು ಬಿಜೆಪಿಯವರು (BJP) ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರು. ಆದರೆ ಅವರು ಕೊಟ್ಟ ಮಾತನ್ನು ಒಂದಾದರೂ ಉಳಿಸಿಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸೂರ್ಯ, ಚಂದ್ರ, ಭೂಮಿ ಯಾವಾಗ ಹುಟ್ಟಿದೆ ಅಂತ ಕೇಳೋಕೆ ಆಗುತ್ತಾ? – ಪರಂ ವಿರುದ್ಧ ಮುತಾಲಿಕ್ ಕಿಡಿ
Advertisement
Advertisement
ಶ್ರೀಮಂತರು, ದೊಡ್ಡ ಉದ್ಯಮಿಗಳು ದೇಶಬಿಟ್ಟು ಹೋಗುತ್ತಿದ್ದಾರೆ. 12 ಲಕ್ಷ ಪಾಸ್‌ಪೋರ್ಟ್‌ಗಳನ್ನು ಸರ್ಕಾರದ ವಶಕ್ಕೆ ನೀಡಿ ಈ ದೇಶದ ಕೋಟ್ಯಾಧಿಪತಿಗಳು ಬೇರೆ ದೇಶದ ಪೌರತ್ವವನ್ನು ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಹಣ ಹೊರಗಡೆ ಹೋಗುತ್ತಿದೆ. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ. ನಮ್ಮ ಆಚಾರ- ವಿಚಾರ ಬದಲಾವಣೆಯಾಗಬೇಕು. ಸರ್ಕಾರ ಜನರ ಕಲ್ಯಾಣ ಮಾಡುವ ಹೊಸ ಕಾನೂನುಗಳನ್ನು ತರಬೇಕು. ನಮ್ಮ ಯುಪಿಎ ಸರ್ಕಾರ ಇದ್ದಾಗ ಮಾಹಿತಿ ಹಕ್ಕು, ಆರ್‌ಟಿಐ, ನರೇಗಾ, ಆಹಾರ ಭದ್ರತಾ ಕಾಯ್ದೆಗಳನ್ನು ಜಾರಿಗೆ ತಂದೆವು. ಇಂತಹ ಯೋಜನೆಗಳು ಬಿಜೆಪಿಯವರಿಗೆ ಬರುವುದಿಲ್ಲವೇ ಎಂದು ಕಿಡಿಕಾರಿದರು. ಇದನ್ನೂ ಓದಿ: ಶಾಸಕರ ಅನಗತ್ಯ ಪತ್ರ ವ್ಯವಹಾರಕ್ಕೆ ಸಿಎಂ ಬ್ರೇಕ್?
Advertisement
Advertisement
ಗೃಹ ಸಚಿವರಾದ ಪರಮೇಶ್ವರ್ (G Parameshwar) ಅವರು ಹಿಂದೂ ಧರ್ಮಕ್ಕೆ ಅಪ್ಪ-ಅಮ್ಮ ಯಾರು ಇಲ್ಲ ಎಂದು ಹೇಳಿದ್ದು ಗೊತ್ತಿಲ್ಲ. ಹಿಂದೂವಾಗಿರುವುದ್ದಕ್ಕೆ ಹೆಮ್ಮೆ ಪಡುತ್ತೇನೆ ಎಂದು ತಿಳಿಸಿದರು. ಇನ್ನು ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡಿನ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಮುಂದೂಡಿರುವ ಬಗ್ಗೆ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರವಾಗಿ ನಡೆಯುತ್ತಿರುವ ವಿಚಾರಣೆಯ ಜೂಮ್ ಲಿಂಕ್ (Zoom Link) ಅನ್ನು ನನಗೆ ಕಳುಹಿಸಿದ್ದರು. ನಾನು ವಿಚಾರಣೆಯನ್ನು ನೋಡಲು ಕಾಯುತ್ತಿದ್ದೆ. ಆದರೆ ವಿಚಾರಣೆಯನ್ನು ಸುಪ್ರೀಂಕೋರ್ಟಿನವರು ಮುಂದಕ್ಕೆ ಹಾಕಿದ್ದಾರೆ. ಕಳೆದೆರಡು ದಿನಗಳಲ್ಲಿ ಮಳೆ ಬರುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು. ಮಳೆಯಾಗಿಲ್ಲ. ಹೀಗಾಗಿ ನಾವು ಮತ್ತೆ ಕಾಯಬೇಕು ಎಂದರು. ಇದನ್ನೂ ಓದಿ: ಮಾಜಿ ಶಾಸಕ ಗುರುಸಿದ್ದನಗೌಡ, ಕುಟುಂಬವನ್ನು ಉಚ್ಛಾಟಿಸಿದ ಬಿಜೆಪಿ
Web Stories