ಮೈಸೂರು: ಚನ್ನಗಿರಿ (Channagiri) ಲಾಕಪ್ ಡೆತ್ (Lockup Death) ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದು, ಅದು ಲಾಕಪ್ ಡೆತ್ ಅಲ್ಲ. ಅವನಿಗೆ ಮೂರ್ಛೆ ರೋಗ ಇತ್ತು. ಆ ರೋಗದಿಂದ ಆತ ಮೃತಪಟ್ಟಿದ್ದಾನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ಎಫ್‌ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಆದೇಶ ಮಾಡಿದ್ದೇನೆ. ಆದರೆ ಇದು ಲಾಕಪ್ ಡೆತ್ ಅಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ ಎಂದರು. ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯಗೆ ಪರಿಷತ್ ಸ್ಥಾನಕ್ಕಾಗಿ ಒಪ್ಪಂದ ಆಗಿತ್ತು: ರಹಸ್ಯ ಬಹಿರಂಗಪಡಿಸಿದ ಸತೀಶ್ ಜಾರಕಿಹೊಳಿ
Advertisement
Advertisement
ರಾಕೇಶ್ ಸಿದ್ದರಾಮಯ್ಯ ವಿಚಾರದ ಕುರಿತು ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ. ಈಗ ಆ ವಿಚಾರವನ್ನು ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮೂರ್ಖತನ. ಅವರ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್ ವಿಚಾರಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪ್ರಬುದ್ಧಾ ಹತ್ಯೆಯನ್ನು ಆತ್ಮಹತ್ಯೆ ಅಂತಾ ಬಿಂಬಿಸಲು ಪ್ಲಾನ್- ಕುತ್ತಿಗೆ, ಕೈಯಲ್ಲಿದ್ದ ಕಲೆಗಳನ್ನೇ ಬಂಡವಾಳ ಮಾಡಿಕೊಂಡಿದ್ದ ಅಪ್ರಾಪ್ತ
Advertisement
ಇನ್ನು ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ವಿಚಾರದ ಕುರಿತು ಸರ್ಕಾರದಿಂದ ಕೇಂದ್ರಕ್ಕೆ ತಡವಾಗಿ ಪತ್ರ ಬಂತು ಎಂಬ ಕೇಂದ್ರ ಸಚಿವರ ಹೇಳಿಕೆ ಕುರಿತು ಮಾತನಾಡಿ, ಇದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಅಷ್ಟೇ. ನಾನು 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಪತ್ರ ಬರೆದರೂ ನನಗೆ ಉತ್ತರ ಬಂದಿಲ್ಲ. ಒಂದು ವೇಳೆ ನಾನು ಪತ್ರ ಬರೆದದ್ದು ತಡವೇ ಅಂದುಕೊಳ್ಳಿ. ಈಗ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಹೇಳಿ. ಸುಮ್ಮನೇ ಕಾಲ ಕಳೆಯುವುದನ್ನು ಬಿಡಬೇಕು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ- ಆರೋಪಿ ಅಪ್ರಾಪ್ತನ ಅಜ್ಜ ಅರೆಸ್ಟ್
Advertisement
ರೇಪ್‌ಗಿಂತ ಅದರ ವೀಡಿಯೋ ಹಂಚಿದ್ದು ದೊಡ್ಡ ಅಪರಾಧ ಎಂಬ ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರೇಪ್‌ಗಿಂತ ವೀಡಿಯೋ ಹಂಚಿದ್ದು ದೊಡ್ಡ ಅಪರಾಧ ಅಂಥ ಯಾವ ಕಾನೂನಿನಲ್ಲಿದೆ ಹೇಳಿ? ಕುಮಾರಸ್ವಾಮಿ ಏನಾದರೂ ಸೆಕ್ಷನ್ ಹೇಳಿದ್ದರಾ? ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ? ಅಥವಾ ಇವರೇ ಬರೆದುಕೊಂಡ ಕಾನೂನಿನಲ್ಲಿ ಇದೆಯಾ ಹೇಳಿ. ನಾನು ಹಾಗಂತ ವೀಡಿಯೋ ವಿತರಣೆ ಸಮರ್ಥನೆ ಮಾಡುತ್ತಿಲ್ಲ. ಆದರೆ ರೇಪ್‌ಗಿಂತ ವೀಡಿಯೋ ಹಂಚಿದ್ದು ಮಹಾ ಅಪರಾಧ ಎನ್ನುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಚನ್ನಗಿರಿಯಲ್ಲಿ ಲಾಕಪ್ ಡೆತ್ ಆರೋಪ- ಕುಟುಂಬಸ್ಥರಿಂದ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ