ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ (By Election) ಕಾವು ಜೋರಾಗಿದ್ದು ಅದರಲ್ಲೂ ಚನ್ನಪಟ್ಟಣ (Channapatna) ವಿಧಾನಸಭಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿದೆ.
ಕಾಂಗ್ರೆಸ್ (Congress) ಹಾಗೂ ದೋಸ್ತಿ ಪಡೆಗೆ ಪ್ರತಿಷ್ಠೆಯ ಕಣವಾಗಿರುವ ಕಾರಣ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್‌ಗೆ (CP Yogeshwar) ಜೆಡಿಎಸ್ ಮತ್ತೊಂದು ಕೊನೆಯ ಅವಕಾಶ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ.
ಸಿಪಿ ಯೋಗೇಶ್ವರ್ ಅವರನ್ನು ಜೆಡಿಎಸ್‌ನಿಂದಲೇ ಸ್ಪರ್ಧೆ ಮಾಡಲು ಮನವೊಲಿಸಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ನಾಯಕರ ಮೂಲಕ ಯೋಗೇಶ್ವರ್ ಮನವೊಲಿಕೆಗೆ ಜೆಡಿಎಸ್ ಕಸರತ್ತು ನಡೆಸಿದೆ. ನಾಮಪತ್ರ ಸಲ್ಲಿಕೆ 3 ದಿನ ಇರುವಾಗಲೂ ಯೋಗೇಶ್ವರ್‌ಗೆ ಜೆಡಿಎಸ್‌ನಿಂದ ಸ್ಪರ್ಧಿಸಲು ಒತ್ತಡ ಹಾಕಲಾಗ್ತಿದೆ.
- Advertisement
ಕಾಂಗ್ರೆಸ್ ಇನ್ನೂ ಅಭ್ಯರ್ಥಿಯ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಈ ಕಾರಣಕ್ಕೆ ದಿನದಿಂದ ದಿನಕ್ಕೆ ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ಬದಲಾಗಿದೆ.
- Advertisement
ದೋಸ್ತಿಗಳ ಮಧ್ಯೆ ಇರೋ ಆಯ್ಕೆಗಳೇನು?
ಜೆಡಿಎಸ್ ಚಿಹ್ನೆಯಿಂದ ಸಿಪಿವೈ ಸ್ಪರ್ಧೆ ಮಾಡಿಸುವುಂತೆ ಜೆ.ಪಿ ನಡ್ಡಾ, ಜೋಷಿ ಮೂಲಕ ಸಿಪಿವೈ ಮನವೊಲಿಕೆಗೆ ಯತ್ನ ನಡೆಯುತ್ತಿದೆ. ಜೆಡಿಎಸ್‌ನಿಂದ ಸ್ಪರ್ಧಿಸದೇ ಇದ್ದರೆ ಬಿಜೆಪಿಯಿಂದಲೇ ಟಿಕೆಟ್ ನೀಡಲು ಒಪ್ಪಿಗೆ ನೀಡುವುದು. ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಮುಖಭಂಗ ಮಾಡಲು ಬಿಜೆಪಿಗೆ ಕ್ಷೇತ್ರ ಬಿಟ್ಟುಕೊಡುವುದು.
ಜೆಡಿಎಸ್‌ನಿಂದ ಇಳಿಯುತ್ತಾರಾ?
ಈ ಹಿಂದೆ ಜೆಡಿಎಸ್‌ನಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಈಗಾಗಲೇ ನನ್ನನ್ನು ಪಕ್ಷಾಂತರಿ ಎಂದು ಕರೆಯುತ್ತಿದ್ದಾರೆ. ಮತ್ತೆ ನಾನು ಬೇರೆ ಪಕ್ಷದ ಚಿಹ್ನೆಯ ಅಡಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಯೋಗೇಶ್ವರ್ ನಿರ್ಣಯ ಏನಿರಬಹುದು ಎಂಬ ಕುತೂಹಲ ಹೆಚ್ಚಾಗಿದೆ.
ಯೋಗೇಶ್ವರ್ ಪ್ರಭಾವಿಯೇ?
1999ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಯೋಗೇಶ್ವರ್ 2004 ಮತ್ತು 2008 ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು. 2013 ರಲ್ಲಿ ಸಮಾಜವಾದಿ ಪಕ್ಷದಿಂದ ಆಯ್ಕೆಯಾಗಿದ್ದ ಯೋಗೇಶ್ವರ್ 2018 ಮತ್ತು 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ವಿರುದ್ಧ ಸೋತಿದ್ದರು. 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ 96,592 ಮತಗಳನ್ನು ಪಡೆದರೆ ಯೋಗೇಶ್ವರ್ 80,677 ಮತಗಳನ್ನು ಪಡೆದಿದ್ದರು.
2018ರ ಚುನಾವಣೆಯಲ್ಲಿ ಕುಮಾರಸ್ವಾಮಿ 21,53 ಮತಗಳ ಅಂತರದಿಂದ ಜಯಗಳಿಸಿದ್ದರೆ 2023 ರಲ್ಲಿ 15,915 ಮತಗಳ ಅಂತರದಿಂದ ಗೆದ್ದಿದ್ದರು.