ಬೆಂಗಳೂರು: ಲೋಕಸಭೆಯಲ್ಲಿ ಜನ ಎಂಥ ತೀರ್ಪು ಕೊಟ್ಟಿದ್ದಾರೆ ಅಂತ ಗೊತ್ತಿದ್ರೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಾಲಿ ಶಾಸಕರಾಗಿದ್ರೂ ಚನ್ನಪಟ್ಟಣದಲ್ಲಿ ಸ್ಪರ್ಧೆಗೆ (Contest In Channapatna) ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಲೇವಡಿ ಮಾಡಿದ್ದಾರೆ.
ಬೆಂಗಳೂರಿನ (Bengaluru) ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತಾಡಿದ ವಿಜಯೇಂದ್ರ, ಡಿಕೆಶಿ (DK Shivakumar) ಅವರು ಈಗಾಗಲೇ ಶಾಸಕರು ಇದ್ದಾರೆ. ಆದರೂ ಚನ್ನಪಟ್ಟಣದಲ್ಲಿ ಸ್ಪರ್ಧೆಯ ಅಭಿಲಾಷೆ ವ್ಯಕ್ತಪಡಿಸಿದ್ದಾರೆ .ಇದು ಅವರ ಪಕ್ಷದ ತೀರ್ಮಾನ. ಆದರೂ ಜನರ ಮನದಾಳದಲ್ಲಿ ಏನಿದೆ ಅನ್ನೋದು ಇನ್ನೂ ನಿಗೂಢವಾಗಿದೆ. ಬೆಂಗಳೂರು ಗ್ರಾಮೀಣ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸೋರೇ ಇಲ್ಲ ಅಂತ ಅವರು ಅನ್ಕೊಂಡಿದ್ರು. ಆದರೆ ಜನರ ತೀರ್ಪು ಏನಿತ್ತು ಅಂತ ಎಲ್ರೂ ನೋಡಿದ್ದೀರಿ ಅಂತ ಕಾಲೆಳೆದರು.
ಇದೇ ವೇಳೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಯಾರಾಗಬೇಕು ಅಂತ ನಾವು ಮತ್ತು ಜೆಡಿಎಸ್ ನಾಯಕರು ಅತೀ ಶೀಘ್ರದಲ್ಲೇ ತೀರ್ಮಾನ ಮಾಡುತ್ತೇವೆ ಅಂತ ವಿಜಯೇಂದ್ರ ತಿಳಿಸಿದರು. ಇದನ್ನೂ ಓದಿ: ಗಣಿ ನಾಡಿನಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಸಿಎಂ ಯೋಗ – ನಟಿ ಶ್ರೀಲೀಲಾ ಸಾಥ್
ಪಕ್ಷದ ಶಾಸಕರಿಗೆ ವಿಜಯೇಂದ್ರ ತಾಕೀತು:
ದಾವಣಗೆರೆ ಸೋಲಿಗೆ ಯಡಿಯೂರಪ್ಪ, ವಿಜಯೇಂದ್ರ ಕಾರಣ ಎಂಬ ಹರಿಹರ ಶಾಸಕ ಬಿ.ಪಿ ಹರೀಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ನಮ್ಮ ಶಾಸಕ ಮಿತ್ರ ಹರೀಶ್ ಆಗಲೀ ಅಥವಾ ಬೇರೆ ಯಾರೇ ಆಗಲೀ ಅವರಿಗೆ ಒಂದು ಮಾತು ಹೇಳ್ತೇನೆ. ಬಹಿರಂಗವಾಗಿ ಹೇಳಿಕೆ ಕೊಡೋದ್ರಿಂದ ಸಮಸ್ಯೆಗೆ ಪರಿಹಾರ ಸಿಗುತ್ತೆ ಅಂದ್ರೆ ಮಾತಾಡಲಿ, ನನ್ನದೇನೂ ತಕರಾರಿಲ್ಲ. ಆದರೆ ನಾನು ರಾಜ್ಯಾಧ್ಯಕ್ಷ ಆಗಿ ಮನವಿ ಮಾಡೋದಿಷ್ಟೇ, ಏನೇ ಸಮಸ್ಯೆ ಇದ್ರೂ ಪಕ್ಷದ ಕಚೇರಿಗೆ ಬಂದು ಚರ್ಚೆ ಮಾಡಿ ಈ ರೀತಿ ಹೇಳಿಕೆ ಕೊಡೋದರಿಂದ ಅದು ಪಕ್ಷಕ್ಕೂ ಲಾಭ ಆಗಲ್ಲ. ಸಂಘಟನೆಗೂ ಲಾಭ ಆಗಲ್ಲ ಅಂತ ರೆಬೆಲ್‌ಗಳಿಗೆ ಪರೋಕ್ಷ ಎಚ್ಚರಿಕೆ ನೀಡಿದರು.
ಇನ್ನು ಬಿಜೆಪಿಯಲ್ಲಿ ಗುಂಪುಗಾರಿಕೆ ಜಾಸ್ತಿ ಆಗುತ್ತಿಲ್ಲ, ಎಲ್ಲವನ್ನೂ ಸರಿ ಮಾಡುತ್ತೇವೆ ಅಂತ ಇದೇ ವೇಳೆ ವಿಜಯೇಂದ್ರ ಹೇಳಿದರು. ಇದನ್ನೂ ಓದಿ: ವಿಧಾನಸೌಧದ ಎದುರು ಡಿಕೆಶಿ ಯೋಗ – ನಟಿ ಅನು ಪ್ರಭಾಕರ್, ಕ್ರಿಕೆಟಿಗ ಮನಿಷ್ ಪಾಂಡೆ ಸಾಥ್
ಶನಿವಾರ ನೂತನ ಕೇಂದ್ರ ಸಚಿವರು, ಸಂಸದರಿಗೆ ಸನ್ಮಾನ:
ಶನಿವಾರ (ಜೂ.22) ದಿನ ಬೆಂಗಳೂರು ಅರಮನೆ ಮೈದಾನದಲ್ಲಿ ನಮ್ಮ ರಾಜ್ಯದಿಂದ ಬಿಜೆಪಿ ಜೆಡಿಎಸ್ ನಿಂದ ಆಯ್ಕೆ ಆಗಿರುವ 19 ಸಂಸದರಿಗೆ ಸನ್ಮಾನ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈವಿಜಯೇಂದ್ರ ಹೇಳಿದರು. ಕೇಂದ್ರದ ಸಚಿವ ಸಂಪುಟಕ್ಕೆ ರಾಜ್ಯದಿಂದ ಆಯ್ಕೆಯಾದ ಸಚಿವರಿಗೆ ಅಭಿನಂದನಾ ಕಾರ್ಯಕ್ರಮವೂ ಇರಲಿದೆ ಎಂದು ವಿಜಯೇಂದ್ರ ತಿಳಿಸಿದರು.