ನವದೆಹಲಿ: ಚನ್ನಪಟ್ಟಣ (Channapatna) ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ (New Delhi) ಮಹತ್ವದ ಚರ್ಚೆ ನಡೆದಿದೆ. ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ ದೆಹಲಿಯಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಜೊತೆಗೂ ಮಾತುಕತೆ ನಡೆಸಿದ್ದಾರೆ.
ಈ ನಡುವೆ ಟಿಕೆಟ್ ಆಕಾಂಕ್ಷಿ, ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ (CP Yogeshwar) ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಬಿಜೆಪಿ ಹಿರಿಯ ನಾಯಕರನ್ನು ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ಟಿಕೆಟ್‌ಗಾಗಿ ಅವರು ಲಾಬಿ ನಡೆಸುತ್ತಿದ್ದಾರೆ ಎಂದು ಆಪ್ತ ಮೂಲಗಳು ಹೇಳಿವೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್
Advertisement
Advertisement
ಕೇಂದ್ರ ನಾಯಕರ ಭೇಟಿ ಬಳಿಕ ಮಾತನಾಡಿದ ಬಿ.ವೈ ವಿಜಯೇಂದ್ರ, ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಲ್ಲುವ ಧೈರ್ಯ ಡಿ.ಕೆ ಶಿವಕುಮಾರ್ ಮಾಡುವುದಿಲ್ಲ. ಲೋಕಸಭೆ ಚುನಾವಣೆಯಲ್ಲೂ ಚನ್ನಪಟ್ಟಣದಲ್ಲಿ ಬಿಜೆಪಿಗೆ ಲೀಡ್ ಬಂದಿದೆ. ಅವರದೇ ಪಕ್ಷದಲ್ಲಿ ಅವರನ್ನು ಸದೆಬಡಿಯುವ ಪ್ರಯತ್ನ ನಡೆಯುತ್ತಿದೆ. ಈ ಹಂತದಲ್ಲಿ ರಿಸ್ಕ್ ತೆಗೆದುಕೊಳ್ಳುವುದಿಲ್ಲ. ಅಭ್ಯರ್ಥಿ ಆಯ್ಕೆ ಬಗ್ಗೆ ಅಮಿತ್ ಶಾ ಮತ್ತು ಕುಮಾರಸ್ವಾಮಿ ಜೊತೆಗೆ ಚರ್ಚಿಸಿದ್ದೇನೆ. ಒಮ್ಮತದ ಅಭ್ಯರ್ಥಿಯನ್ನು ಹಾಕಲಿದ್ದೇವೆ ಎಂದರು. ಇದನ್ನೂ ಓದಿ: ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ ನಾನು ಗಂಭೀರವಾಗಿ ಪರಿಗಣಿಸಲ್ಲ: ಹೆಚ್‌ಡಿಕೆ
Advertisement
ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ಚುನಾವಣೆಗೆ ಇನ್ನೂ ಸಾಕಷ್ಟು ಸಮಯ ಇದೆ. ಯಾರು ಸ್ಪರ್ಧಿಸಬೇಕು ಎನ್ನುವುದು ನಿರ್ಧಾರ ಮಾಡುತ್ತೇವೆ. ಬಿಜೆಪಿ -ಜೆಡಿಎಸ್ ಅನ್ನೋ ವಿಚಾರ ಅಲ್ಲಿ ಬರುವುದಿಲ್ಲ. ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮೊದಲ ಕೇಸ್‌ನಲ್ಲೇ ಪ್ರಜ್ವಲ್ ರೇವಣ್ಣಗೆ ಶಾಕ್ – ಹೊಳೆನರಸೀಪುರ ಪ್ರಕರಣದ ಜಾಮೀನು ಅರ್ಜಿ ವಜಾ
Advertisement
ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಮಾತನಾಡಿ, ಉಪ ಚುನಾವಣೆ ಹಿನ್ನೆಲೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಕೇಂದ್ರ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ. ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡಲು ಇನ್ನು ಕಾಲಾವಕಾಶ ಬೇಕು. ಅಲ್ಲಿವರೆಗೂ ಗೆಲುವಿಗೆ ನಾವು ತಯಾರಿ ಮಾಡಿಕೊಳ್ಳುತ್ತೇವೆ. ಸ್ಪರ್ಧೆ ಬಗ್ಗೆ ಬಹುಪಾಲು ನಿರ್ಣಯ ಕುಮಾರಸ್ವಾಮಿ ಮಾಡುತ್ತಾರೆ. ಅವರ ಆಶೀರ್ವಾದ ಇಲ್ಲದೆ ಏನು ಆಗಲ್ಲ ಎಂದರು. ಇದನ್ನೂ ಓದಿ: ಮೋದಿಯವರ ಸುಳ್ಳಾಟ ಬಯಲಿಗೆ ಎಳೆಯಲು ಒಳ್ಳೆಯ ಅವಕಾಶವಿದೆ: ಸಂತೋಷ್ ಲಾಡ್
ನನಗೆ ಜೆಡಿಎಸ್ ಸಿಂಬಲ್ ಸ್ಪರ್ಧೆ ಮಾಡಿ ಎಂದು ಯಾರೂ ಕೇಳಿಲ್ಲ. ಎರಡೂ ಪಕ್ಷದ ನಾಯಕರು ಚರ್ಚೆ ಮಾಡಬೇಕು. ಪಕ್ಷದಿಂದ ಟಿಕೆಟ್ ಸಿಗದೆ ಇದ್ದರೂ ಎನ್‌ಡಿಎಗೆ ನನ್ನ ಬೆಂಬಲವಿದೆ. ವರಿಷ್ಠರು ಏನು ಹೇಳುತ್ತಾರೆ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೋದಾದರೆ ನನ್ನ ಸಂಪೂರ್ಣ ಬೆಂಬಲ ಇದೆ. ನಾನು ಯಾವುದೇ ಒಳಸಂಚು ಮಾಡುವುದಿಲ್ಲ. ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ಹನಿಟ್ರ್ಯಾಪ್ ನಡೆದಿಲ್ಲ: ಶಾಸಕ ಹರೀಶ್ ಗೌಡ ಸ್ಪಷ್ಟನೆ
ಕಾಂಗ್ರೆಸ್‌ನಿಂದ ಡಿಕೆ ಶಿವಕುಮಾರ್ ಕುಟುಂಬದವರೇ ನಿಲ್ಲುತ್ತಾರೆ ಎಂಬುದು ನಮ್ಮ ಅಭಿಪ್ರಾಯ. ಅವರ ಕುಟುಂಬ ಸ್ಪರ್ಧಿಸಿದರೆ ದೊಡ್ಡ ಹೋರಾಟ ನಡೆಯಲಿದೆ. ಈ ನಡುವೆ ವಾರದಲ್ಲಿ ಎರಡು ದಿನ ಚನ್ನಪಟ್ಟಣದಲ್ಲಿ ಶಿವಕುಮಾರ್ ಠಿಕಾಣಿ ಹೂಡುತ್ತಿದ್ದಾರೆ. ಹಿಂದೆ ಚನ್ನಪಟ್ಟಣಕ್ಕೆ ತಿರುಗಿ ನೋಡದವರು ಮತ್ತೆ ಬಂದಿದ್ದಾರೆ. ಚನ್ನಪಟ್ಟಣದ ಮತದಾರರು, ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಅಸಮಾಧಾನ ಇದೆ. ಅದನ್ನು ಬಿಟ್ಟು ಚನ್ನಪಟ್ಟಣಕ್ಕೆ ಬಂದು ಉಪಚುನಾವಣೆ ಗೆದ್ದು ರಾಜ್ಯ ಗೆಲ್ಲಬೇಕು ಎಂದುಕೊಂಡಿದ್ದಾರೆ. ಅದು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಉಸಿರಾಡುವ ಗಾಳಿಗೊಂದು ಟ್ಯಾಕ್ಸ್ ಹಾಕೋದು ಬಾಕಿ ಇದೆ: ಸಿ.ಟಿ ರವಿ ಕಿಡಿ