ಬೆಂಗಳೂರು: ಚನ್ನಪಟ್ಟಣದಲ್ಲಿ ಆಪರೇಷನ್ ಸಕ್ಸಸ್ ಆಗಿದ್ದು ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
Advertisement
ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದರು. ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿ ಜೊತೆಯಾಗಿ ಸಿಎಂ ನಿವಾಸಕ್ಕೆ ಆಗಮಿಸಿದ್ದರು.
Advertisement
Advertisement
ಸಿಪಿ ಯೋಗೇಶ್ವರ್ ಅವರನ್ನು ಜೆಡಿಎಸ್ನಿಂದಲೇ ಸ್ಪರ್ಧೆ ಮಾಡಿಸಲು ಬಿಜೆಪಿ ಮುಂದಾಗಿತ್ತು. ಬಿಜೆಪಿ ರಾಷ್ಟ್ರೀಯ ನಾಯಕರ ಮೂಲಕ ಯೋಗೇಶ್ವರ್ ಮನವೊಲಿಕೆಗೆ ಜೆಡಿಎಸ್ ಸಹ ಕಸರತ್ತು ನಡೆಸಿತ್ತು.
Advertisement
ಈ ಹಿಂದೆ ಜೆಡಿಎಸ್ನಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಈಗಾಗಲೇ ನನ್ನನ್ನು ಪಕ್ಷಾಂತರಿ ಎಂದು ಕರೆಯುತ್ತಿದ್ದಾರೆ. ಮತ್ತೆ ನಾನು ಬೇರೆ ಪಕ್ಷದ ಚಿಹ್ನೆಯ ಅಡಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಯೋಗೇಶ್ವರ್ ನಿರ್ಣಯ ಏನಿರಬಹುದು ಎಂಬ ಕುತೂಹಲ ಹೆಚ್ಚಾಗಿತ್ತು.
ಯೋಗೇಶ್ವರ್ ಪ್ರಭಾವಿಯೇ?
1999ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಯೋಗೇಶ್ವರ್ 2004 ಮತ್ತು 2008 ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆದ್ದಿದ್ದರು. 2013 ರಲ್ಲಿ ಸಮಾಜವಾದಿ ಪಕ್ಷದಿಂದ ಆಯ್ಕೆಯಾಗಿದ್ದ ಯೋಗೇಶ್ವರ್ 2018 ಮತ್ತು 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ವಿರುದ್ಧ ಸೋತಿದ್ದರು. 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ 96,592 ಮತಗಳನ್ನು ಪಡೆದರೆ ಯೋಗೇಶ್ವರ್ 80,677 ಮತಗಳನ್ನು ಪಡೆದಿದ್ದರು.
2018ರ ಚುನಾವಣೆಯಲ್ಲಿ ಕುಮಾರಸ್ವಾಮಿ 21,53 ಮತಗಳ ಅಂತರದಿಂದ ಜಯಗಳಿಸಿದ್ದರೆ 2023 ರಲ್ಲಿ 15,915 ಮತಗಳ ಅಂತರದಿಂದ ಗೆದ್ದಿದ್ದರು.