ರಾಮನಗರ: ಚನ್ನಪಟ್ಟಣ ಉಪಚುನಾವಣೆ (Channapatna Byelection) ಕಣ ರಂಗೇರಿದ್ದು, ಬೊಂಬೆನಗರಿಯನ್ನು ಕೈವಶ ಮಾಡಿಕೊಳ್ಳಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮಾಸ್ಟರ್ ಪ್ಲಾನ್ ಮಾಡಿದ್ದಾರೆ.
ಚನ್ನಪಟ್ಟಣ ಕ್ಷೇತ್ರಕ್ಕೆ ಸಚಿವರ ದಂಡನ್ನೇ ಕರೆತಂದು ಸಾರ್ವಜನಿಕ ಸಮಸ್ಯೆಗಳನ್ನ ಬಗೆಹರಿಸುವ ಮೂಲಕ ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಮುಂದಾಗಿದ್ದಾರೆ. ಶೀಘ್ರದಲ್ಲೇ ವಿವಿಧ ಇಲಾಖೆಗಳ ಮಂತ್ರಿಗಳನ್ನು ಚನ್ನಪಟ್ಟಣ ಕ್ಷೇತ್ರಕ್ಕೆ ಕರೆತಂದು ಸಾರ್ವಜನಿಕರ ಕುಂದುಕೊರತೆ ಆಲಿಸಿ ವೋಟ್ ಬ್ಯಾಂಕ್ ಗಟ್ಟಿಗೊಳಿಸಲು ತಂತ್ರಗಾರಿಕೆ ನಡೆಸಿದ್ದಾರೆ.
Advertisement
Advertisement
ಹಲವು ಸಚಿವರ ಪ್ರವಾಸದ ಮೂಲಕ ಆಯಾ ಸಮುದಾಯದ ಕರೆತಂದು ಓಲೈಕೆಗೂ ಫ್ಲಾನ್ ಮಾಡಿರೋ ಡಿಕೆಶಿ, ಈ ಮೂಲಕ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಸಿಪಿ ಯೋಗೇಶ್ವರ್‌ಗೆ ಟಕ್ಕರ್ ಕೊಡಲು ಮುಂದಾಗಿದ್ದಾರೆ. ಚನ್ನಪಟ್ಟಣ ಕ್ಷೇತ್ರವನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡು ಮತ್ತೊಮ್ಮೆ ಹೈಕಮಾಂಡ್ ಮುಂದೆ ತಮ್ಮ ಸಾಮರ್ಥ್ಯ ತೋರಿಸಲು ಡಿಕೆಶಿ ಪ್ರಯತ್ನ ಮಾಡ್ತಿದ್ದಾರೆ. ಇದನ್ನೂ ಓದಿ: ಕೆಇಎ ಪರೀಕ್ಷಾ ಅಕ್ರಮ – ಆರ್.ಡಿ.ಪಾಟೀಲ್‌ಗೆ ಜಾಮೀನು ನಿರಾಕರಣೆ