ಬೆಂಗಳೂರು: ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆಯಲ್ಲೂ ಚನ್ನಪಟ್ಟಣ (Channapatna) ಅಭ್ಯರ್ಥಿ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumraswamy) ರಹಸ್ಯ ಕಾಯ್ದುಕೊಂಡಿದ್ದಾರೆ.
ಇಂದು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚನಾವಣೆಯ ಸಂಬಂಧವಾಗಿ ಚನ್ನಪಟ್ಟಣ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಜೊತೆ ಹೆಚ್‌ಡಿಕೆ ಜೆಪಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸಭೆ ನಡೆಸಿದರು.
ಸಿಪಿ ಯೋಗೇಶ್ವರ್ (CP Yogeshwar) ವಿಚಾರದಲ್ಲೂ ಯಾವುದೇ ಸ್ಪಷ್ಟತೆ ಕೊಡದ ಹೆಚ್‌ಡಿಕೆ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲಾಗುತ್ತದೆ ಅಂತಷ್ಟೇ ಹೇಳಿದರು. ಆದರೆ ಸಿಪಿವೈ ಜತೆಗೂ ಚರ್ಚೆ ನಡೆಸುವಂತೆ ಹೇಳುವ ಮೂಲಕ ಕುತೂಹಲ ಮೂಡಿಸಿದರು. ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣದಲ್ಲಿ ಸರ್ಕಾರ ವಿಫಲ: ಶೋಭಾ ಕರಂದ್ಲಾಜೆ ಕಿಡಿ
ಈ ವೇಳೆ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಅಭ್ಯರ್ಥಿ ಯಾರೇ ಆದರೂ ಅವರು ಎನ್‌ಡಿಎ (NDA) ಮೈತ್ರಿ ಅಭ್ಯರ್ಥಿ ಆಗಿರುತ್ತಾರೆ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಎಲ್ಲರೂ ಒಮ್ಮತವಾಗಿ, ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: BMW ಡಿಕ್ಕಿ ಹೊಡೆದು ಮಹಿಳೆ ಸಾವು – ಸಿಎಂ ಏಕನಾಥ್ ಶಿಂಧೆ ಬಣದ ನಾಯಕನ ಪುತ್ರ ಆರೋಪಿ
ಮೈತ್ರಿ ಅಭ್ಯರ್ಥಿ ಗೆಲ್ಲಬೇಕು ಎನ್ನುವುದು ನಮ್ಮೆಲ್ಲರ ಗುರಿ ಆಗಬೇಕು. ಪ್ರಮುಖ ಮುಖಂಡರೆಲ್ಲ ಖುದ್ದು ಭೇಟಿ ಮಾಡಿ ಸಿ.ಪಿ.ಯೋಗೇಶ್ವರ್ ಜೊತೆಗೂ ಚರ್ಚಿಸಬೇಕು. ಯೋಗೇಶ್ವರ್ ಅವರನ್ನು ಎಲ್ಲಾ ಹಂತಗಳಲ್ಲಿಯೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಅವರ ಮಾರ್ಗದರ್ಶನ ಪಡೆಯಬೇಕು ಎಂದು ಹೇಳಿದರು.
ಮುಂದಿನ ವಾರ ನಾನು ಮತ್ತೆ ಬೆಂಗಳೂರಿಗೆ ಬರುತ್ತೇನೆ. ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅಭ್ಯರ್ಥಿ ಬಗ್ಗೆ ಬಿಜೆಪಿಯ ರಾಜ್ಯ, ರಾಷ್ಟ್ರೀಯ ನಾಯಕರ ಜತೆ ಸಮಾಲೋಚನೆ ನಡೆಸಲಾಗುವುದು ಎಂದು ಸಭೆಯಲ್ಲಿ ಹೆಚ್‌ಡಿಕೆ ತಿಳಿಸಿದರು.
ಈ ಸಭೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಉಪಸ್ಥಿತರಿದ್ದರು.