ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna By Election) ಮೈತ್ರಿ ಅಭ್ಯರ್ಥಿಯಾಗಿ ಆಯ್ಕೆಯಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ನಿರ್ಧಾರ ಮುಖ್ಯ ಎಂದು ಮಾಜಿ ಶಾಸಕ ಸಿಪಿ ಯೋಗೇಶ್ವರ್ (CP Yogeshwara) ಹೇಳಿದ್ದಾರೆ.
ತಾನು ಆಕಾಂಕ್ಷಿ ಎಂಬ ವಿಚಾರಕ್ಕೆ ಸ್ವತ: ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಅಭ್ಯರ್ಥಿ ಆಯ್ಕೆ ಬಗ್ಗೆ ನಮ್ಮ ಪಕ್ಷ ತೀರ್ಮಾನ ಮಾಡುತ್ತದೆ. ಎರಡೂ ಪಕ್ಷ ತೀರ್ಮಾನ ಮಾಡಿ ಯಾರೇ ಅಭ್ಯರ್ಥಿಯಾದರೂ ನಾನು ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: PublicTV Explainer: ದರ್ಶನ್ ಗ್ಯಾಂಗ್ ಕ್ಲೀನ್ ಮಾಡಿದ್ದ ರಕ್ತದ ಕಲೆ ಪತ್ತೆಗೆ ಲೂಮಿನಲ್ ಟೆಸ್ಟ್; ಏನಿದು ಪರೀಕ್ಷೆ?
ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕುಮಾರಸ್ವಾಮಿ ಅವರ ನಿರ್ಧಾರ ಮುಖ್ಯ. ಅವರ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.
ಈ ಕ್ಷೇತ್ರದಲ್ಲಿ ಸ್ಥಳೀಯ ಮುಖಂಡರು ಸೇರಿ ಡಿಕೆ ಸುರೇಶ್ (DK Suresh) ನಿಂತರೂ ಸೋಲುತ್ತಾರೆ. ಹೀಗಾಗಿ ಡಿಕೆ ಶಿವಕುಮಾರ್ (DK Shivakumar) ತಾನೇ ಬಂದು ವಾಮಾಮಾರ್ಗದಲ್ಲಿ ಚುನಾವಣೆ (Election) ಮಾಡಲು ಮುಂದಾಗಿದ್ದಾರೆ ಎಂದು ಸಿಪಿವೈ ತಿಳಿಸಿದರು.
ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಸಮಿತಿ ರಚನೆ ವಿಚಾರ ಕುರಿತು ಮಾತನಾಡಿದ ಅವರು, ಚಲುವರಾಯಸ್ವಾಮಿ ಯಶಸ್ವಿಯಾಗಿ ಮಂಡ್ಯ ಚುನಾವಣೆ ಮಾಡಿದ್ದಾರೆ. ಮಂಡ್ಯದಲ್ಲಿ (Mandya) ಉತ್ತಮ ರಿಸಲ್ಟ್ ಕೊಟ್ಟಿದ್ದಾರೆ. ಹಾಗಾಗಿ ಅವರಿಗೆ ಈ ಕ್ಷೇತ್ರದ ಜವಾಬ್ದಾರಿ ಕೊಟ್ಟಿರಬಹುದು ಎಂದು ವ್ಯಂಗ್ಯವಾಡಿದರು.
ಪಾಪ ಇಲ್ಲಿನ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರು ಸಮಿತಿಯಲ್ಲಿ ಸ್ಥಾನ ಪಡೆದಿಲ್ಲ. ಅವರು ಹಿಂದೆ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಅಂತವರನ್ನು ಕಡೆಗಣಿಸಿದ್ದಾರೆ. ಅವರು ಯಾವ ಸಮಿತಿ ಮಾಡಿ, ಏನು ಮಾಡುತ್ತಾರೋ ಮಾಡಲಿ ಎಂದರು.