ಬೆಂಗಳೂರು: ಮರಳಿ ನಾನು ಮನೆಗೆ ಬಂದಿದ್ದೇನೆ ಎಂದು ಸಿಪಿ ಯೋಗೇಶ್ವರ್ (CP Yogeshwar) ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ನಂತರ ಮಾತನಾಡಿದ ಅವರು, ಕೆಲವೊಮ್ಮೆ ನಾವೇ ಕಟ್ಟಿದ ಮನೆಯಲ್ಲಿ ನಾವು ಇರಲು ಸಾಧ್ಯವಾಗುವುದಿಲ್ಲ. ಕಳೆದ ಕೆಲ ದಿನಗಳಿಂದ ಸಾಕಷ್ಟು ಬೆಳವಣಿಗೆ ಆಗಿವೆ. ಬಿಜೆಪಿಯಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ (Congress) ಸೇರ್ಪಡೆ ಆಗಿದ್ದೇನೆ ಎಂದರು. ಇದನ್ನೂ ಓದಿ: ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು, ಇದು ಸಾಧ್ಯತೆಯ ಕಲೆ: ಡಿಕೆ ಶಿವಕುಮಾರ್
ರಾಜಕೀಯ ಜೀವನವನ್ನು ಇದೇ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಶುರು ಮಾಡಿದ್ದೆ. ಹೋದೆ ಬಂದೆ ಮತ್ತೆ ಬಂದಿದ್ದೇನೆ. ಮುಂದಿನ ರಾಜಕೀಯ ಜೀವನ ಇಲ್ಲೆ ಕಳೆಯುತ್ತೇನೆ ಎಂದುಕೊಂಡಿದ್ದೇನೆ ಎಂದು ಹೇಳಿದರು.
ರಾಜಕೀಯವಾಗಿ ನಮ್ಮೆಲ್ಲರ ಟೀಕೆ ಟಿಪ್ಪಣಿಗಳು ಅಭಿವೃದ್ಧಿಗೆ ಪೂರಕವಾಗಿದ್ದವು. ಅವೆಲ್ಲವನ್ನು ಮರೆತು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಸಿಪಿ ಯೋಗೇಶ್ವರ್ ಗುರುವಾರ ಚನ್ನಪಟ್ಟಣ ಕ್ಷೇತ್ರದ (Channapatna By Election) ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.