ಬೆಂಗಳೂರು: ಚನ್ನಪಟ್ಟಣ (Channapatna) ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಯೋಗೇಶ್ವರ್ (CP Yogeshwar) ಹೇಳಿಕೆ ನೀಡಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಉಪಚುನಾವಣೆಗೆ (By Election)ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ. ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣ ಎಂದು ತಿಳಿಸಿದರು. ಇದನ್ನೂ ಓದಿ: ಬಿಎಸ್‌ವೈ ಬಂಧನಕ್ಕೆ ತಡೆ – ಹೈಕೋರ್ಟ್ ಆದೇಶ ತೆರವಿಗೆ ಸರ್ಕಾರ ಪ್ಲ್ಯಾನ್
ನನ್ನ ತಾಲೂಕಿನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವುದೇ ಚಿನ್ಹೆಯ ಅಡಿ ನಿಂತರೂ ಗೆಲ್ಲಿಸುತ್ತಾರೆ. ಕ್ಷೇತ್ರದ ಸಮಾನ ಮನಸ್ಕ ವೇದಿಕೆಯಿಂದಲೂ ಸ್ಪರ್ಧೆಗೆ ಒತ್ತಾಯ ಇದೆ ಎಂದರು.
ನಾನು ಕಾಂಗ್ರೆಸ್‌ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತ ಗೊತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಸುಳ್ಳು ವರದಿ ಪ್ರಕಟಿಸಿದ್ರೆ ಮಾಧ್ಯಮಗಳನ್ನು ಮುಚ್ಚುತ್ತೇವೆ: ಬಾಂಗ್ಲಾ ಸರ್ಕಾರ ಬೆದರಿಕೆ
ನನಗೂ ಕುಮಾರಸ್ವಾಮಿಯವರಿಗೂ ಭಿನ್ನಾಭಿಪ್ರಾಯ ಏನಿದೆ? ನಮ್ಮ ಮಧ್ಯೆ ಬಿರುಕು ಮೂಡಿಸುವ ಪ್ರಯತ್ನವನ್ನು ಡಿಕೆಶಿ ಮಾಡ್ತಿದ್ದಾರೆ. ಕುಮಾರಸ್ವಾಮಿ ಅವರು ಮನಸ್ಸು ಬದಲಾಯಿಸಬಹುದು. ಕುಮಾರಸ್ವಾಮಿ ಒಪ್ಪದಿದ್ದರೆ ಮುಂದಿನ ದಾರಿ ನೋಡೋಣ ಎಂದು ತಿಳಿಸಿದರು.