ಹಾವೇರಿ: ಸಿಪಿ ಯೋಗೇಶ್ವರ್ (CP Yogeshwar) ಮನವೊಲಿಸಲು ಬಹಳ ಪ್ರಯತ್ನ ಮಾಡಿದ್ದೇವೆ. ಆದರೆ ಆಗಲಿಲ್ಲ. ಅವರು ಕಾಂಗ್ರೆಸ್ (Congress) ಸೇರಿರೋದು ದುರ್ದೈವದ ಸಂಗತಿ. ಕಾಂಗ್ರೆಸ್‌ಗೆ ಅಲ್ಲಿ ಅಭ್ಯರ್ಥಿಯೇ ಇರಲಿಲ್ಲ. ಅಲ್ಲಿ ಸುಲಭವಾಗಿ ಗೆಲ್ಲಬಹುದಿತ್ತು. ಆದರೂ ಚೆನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರ (HD Kumaraswamy) ದೊಡ್ಡ ಪ್ರಭಾವ ಇದೆ ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಈ ಕುರಿತು ಮಾತನಾಡಿದ ಅವರು, ಕಳೆದ ಬಾರಿ ಅಲ್ಲಿ ತ್ರಿಕೋನ ಸ್ಪರ್ಧೆ ಇದ್ದರೂ ಕುಮಾರಸ್ವಾಮಿ ಗೆದ್ದಿದ್ದರು. ಖಂಡಿತವಾಗಿ ಅಲ್ಲಿ ಜೆಡಿಎಸ್ ಅಭ್ಯರ್ಥಿಯೇ ಗೆಲ್ಲುತ್ತಾರೆ. ಮೈತ್ರಿ ಅಭ್ಯರ್ಥಿ ಯಾರು ಅಂತ ನೀವು ಕುಮಾರಸ್ವಾಮಿಯವರನ್ನೇ ಕೇಳಬೇಕು. ಡಿಕೆ ಸುರೇಶ್ ಕಣಕ್ಕೆ ಇಳಿಸುವ ಬಗ್ಗೆ ಏನು ಗೊತ್ತಿಲ್ಲ. ಆದರೆ ಕಾಂಗ್ರೆಸ್‌ಗೆ ಅಲ್ಲಿ ಬೇಸ್ ಇಲ್ಲ ಅನ್ನೋದಂತೂ ಸ್ಪಷ್ಟ ಎಂದರು. ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಕೊಡದಿದ್ದಕ್ಕೆ ಪತ್ನಿಯನ್ನು ವಿದ್ಯುತ್ ತಂತಿಗೆ ನೂಕಿ ಹತ್ಯೆ ಆರೋಪ
Advertisement
Advertisement
ವಿನಯ್ ಕುಲಕರ್ಣಿ ಪುತ್ರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿ, ಯಾರೇ ಆಗಲಿ ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿನೇ. ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿಯೇ ಎದುರಿಸುತ್ತೇವೆ. ಸೌಹಾರ್ದ ಚುನಾವಣೆ ಮಾಡುತ್ತೇವೆ. ಅಸಮಾಧಾನ ಪ್ರತಿ ಚುನಾವಣೆಯಲ್ಲಿ ಇರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ತುಮಕೂರು| ಮಳೆಗೆ ಮನೆಗೋಡೆ ಕುಸಿದು ಬಿದ್ದು ಮಹಿಳೆ ಸಾವು
Advertisement
Advertisement
ಬಿಜೆಪಿಯಲ್ಲಿ ಯಾವ ಬಂಡಾಯವೂ ಇಲ್ಲ. ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ವೇಳೆ ಯಡಿಯೂರಪ್ಪ ಬರುತ್ತಾರೆ. ಅಲ್ಲದೇ ರಾಜ್ಯ ಬಿಜೆಪಿ ನಾಯಕರೂ ಬರುತ್ತಾರೆ. ಮೆರವಣಿಗೆ ಮೂಲಕ ಅಕ್ಟೋಬರ್ 25 ರಂದು ನಾಮಪತ್ರ ಸಲ್ಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಯೋಗೇಶ್ವರ್ ನಮ್ಮನ್ನು ಬಿಡುವುದಿಲ್ಲ ಎನ್ನುವ ವಿಶ್ವಾಸವಿತ್ತು: ಕೋಟ ಶ್ರೀನಿವಾಸ ಪೂಜಾರಿ ಬೇಸರ