ಬೆಂಗಳೂರು: ಈ ಬಾರಿ ರಾಮನಗರ (Ramanagara) ಜಿಲ್ಲೆಯಲ್ಲಿ ಆಪರೇಷನ್ ಆಲೌಟ್ ಜೆಡಿಎಸ್ (JDS) ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಸಿಎಂ ಮುಂದೆ ಶಪಥ ಮಾಡಿದ್ದಾರೆ.
ಸಿಪಿ ಯೋಗೇಶ್ವರ್ (CP Yogeshwar ) ಅವರನ್ನು ಸಿಎಂ ನಿವಾಸಕ್ಕೆ ಕರೆ ತಂದ ಬಳಿಕ ಡಿಕೆಶಿ, ಈ ಚುನಾವಣೆ ನನ್ನ ಸೋಲು ಗೆಲುವು ಅಲ್ಲ, ಇದು ಆಪರೇಷನ್ ಆಲೌಟ್ ಎಂದು ಹೇಳಿದ್ದಾರೆ. ಈ ಮೂಲಕ ರಾಮನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಜೆಡಿಎಸ್ ಆಲೌಟ್ ಮಾಡುವ ಬಗ್ಗೆ ಮಾತನಾಡಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಸಲ ಆಲೌಟ್ ಬಿಡಿ ಎಂದು ಧ್ವನಿಗೂಡಿಸಿದ್ದಾರೆ. ಇದನ್ನೂ ಓದಿ: ಮಿಡ್‌ನೈಟ್ ಆಪರೇಷನ್ ಸಕ್ಸಸ್: ಕಾಂಗ್ರೆಸ್‌ಗೆ ಯೋಗೇಶ್ವರ್ ಸೇರ್ಪಡೆ
Advertisement
Advertisement
ರಾಮನಗರದಲ್ಲಿ ಒಟ್ಟು 4 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಕನಕಪುರದಲ್ಲಿ ಡಿಕೆ ಶಿವಕುಮಾರ್, ಮಾಗಡಿಯಲ್ಲಿ ಬಾಲಕೃಷ್ಣ, ರಾಮನಗರದಲ್ಲಿ ಇಕ್ಬಾಲ್ ಹುಸೇನ್ ಇದ್ದಾರೆ. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಇರುವ ಕಾರಣ ಈ ಕೋಟೆಯನ್ನು ಒಡೆಯಲು ಡಿಕೆಶಿಗೆ ಸಾಧ್ಯವಾಗಿರಲಿಲ್ಲ.
Advertisement
2018ರ ಚುನಾವಣೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿ ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರದಲ್ಲಿ ಗೆದ್ದ ಬಳಿಕ ರಾಮನಗರ ಕ್ಷೇತ್ರಕ್ಕೆ ಹೆಚ್‌ಡಿಕೆ ರಾಜೀನಾಮೆ ನೀಡಿದ್ದರು, ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಜಯಗಳಿಸಿದ್ದರು. 2023ರ ಚುನಾವಣೆಯಲ್ಲಿ ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿ ಸೋತಿದ್ದರು.
Advertisement