– ಕಣ್ಣೀರು ಹಾಕಿ ನಾಟಕ ಮಾಡಲು ನನಗೆ ಬರಲ್ಲ ಎಂದ ಯೋಗೇಶ್ವರ್
ರಾಮನಗರ: ಕಣ್ಣೀರು ಹಾಕಲು ನನಗೆ ಬರಲ್ಲ. ನಾನು ಕಣ್ಣಿರು ಹಾಕಲ್ಲ. ನನಗೆ ನಾಟಕ ಮಾಡಲು ಬರಲ್ಲ ಎಂದು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ (CP Yogeshwar) ಪರೋಕ್ಷವಾಗಿ ಹೆಚ್‌ಡಿಕೆಗೆ ಟಾಂಗ್ ಕೊಟ್ಟಿದ್ದಾರೆ.
ಕೋಡಂಬಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಸಮನ್ವಯ ಸಭೆ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ ತಾಲೂಕಿನಲ್ಲಿ ಇದು ನನ್ನ 10ನೇ ಚುನಾವಣೆ. ಈ ಉಪಚುನಾವಣೆ ಬರುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಕುಮಾರಸ್ವಾಮಿ (HD Kumaraswamy) ರಾಜಕೀಯ ಮಹತ್ವಾಕಾಂಕ್ಷೆಯಿಂದ ಬೈ ಎಲೆಕ್ಷನ್ ಬಂತು. ಎಂಎಲ್‌ಎ ಆಗಿ ಅವರು ಒಮ್ಮೆಯೂ ಕ್ಷೇತ್ರಕ್ಕೆ ಬಂದಿಲ್ಲ. ಮೊನ್ನೆ 150 ಕೆರೆ ತುಂಬಿಸಿದ್ದೇವೆ ಎನ್ನುತ್ತಿದ್ದರು. ಅವರಿಗೆ ಚನ್ನಪಟ್ಟಣದಲ್ಲಿ (Channapatna) ಎಷ್ಟು ಕೆರೆ ಇದೆ ಅಂತ ಗೊತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ತೇಜಸ್ವಿ ಸೂರ್ಯ ಈಗ ಐರನ್ ಮ್ಯಾನ್ – 70.3 ರೇಸ್‌ನಲ್ಲಿ ವಿಜೇತರಾದ ಪ್ರಥಮ ಜನಪ್ರತಿನಿಧಿ!
ನಾನು, ಸುರೇಶ್ ಸೇರಿ ಒಂದು ಹೊಸ ಯೋಜನೆ ಬಗ್ಗೆ ಆಲೋಚನೆ ಮಾಡಿದ್ದೇವೆ. ಕೆಆರ್‌ಎಸ್‌ನಿಂದ ಮಾರ್ಕೋನಹಳ್ಳಿ ಡ್ಯಾಂಗೆ ನೀರು ತಂದು ಅದನ್ನು ಕಣ್ವ, ಇಗ್ಗಲೂರು ಡ್ಯಾಂಗೆ ತರಬಹುದು. ಕುಮಾರಸ್ವಾಮಿ ಎರಡು ಬಾರಿ ಗೆದ್ದರೂ ಒಂದು ಕೆರೆ ತುಂಬಿಸಲಿಲ್ಲ. ಶಿವಲಿಂಗೇಗೌಡರಿಗೆ ಅವರ ಎಲ್ಲಾ ಮರ್ಮಗಳು ಗೊತ್ತು. ಅವರ ಪ್ಲಾನ್‌ಗಳು ನಮ್ಮ ಬಹುತೇಕ ನಾಯಕರಿಗೆ ಗೊತ್ತು. ನನ್ನ ಮೇಲೆ ಅವರ ಮನೆಯವರು ಯಾಕೆ ಹೀಗೆ ಮುಗಿಬೀಳುತ್ತಿದ್ದಾರೋ ಗೊತ್ತಿಲ್ಲ. ನಾನೇನು ತಪ್ಪು ಮಾಡಿದ್ದೀನಿ? ನನ್ನ ಮೇಲೆ ಯಾಕೆ ಹೀಗೆ ಬೀಳ್ತಾರೆ? ಕುಮಾರಸ್ವಾಮಿ ಬಂದ್ರು, ಅವರ ಪತ್ನಿ ಬಂದ್ರು ಈಗ ಮಗ ಬಂದ್ರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಕ್ಫ್ ಆಸ್ತಿ ವಿವಾದ | 1964-1974ರ ದಾಖಲೆ ಪರಿಶೀಲಿಸಿ ಕ್ರಮವಹಿಸಲು ಟಾಸ್ಕ್ ಫೋರ್ಸ್ ರಚನೆ
ಮೊನ್ನೆ 500 ಬಸ್ ಮಾಡಿ ಜನ ಸೇರಿಸಿ ನಾಮಪತ್ರ ಸಲ್ಲಿಕೆ ಮಾಡಿದರು. ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ಎಷ್ಟಾದ್ರೂ ಹಣ ತಂದು ಚುನಾವಣೆ ಮಾಡೋಕೆ ನಿಂತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕೇಳಿದೆ. ಈಗ ಚುನಾವಣಾ ಆಯೋಗ ಕೇಸ್ ಹಾಕಿ 96 ಬಸ್ ಸೀಜ್ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಯೂಟ್ಯೂಬ್‌ನಲ್ಲಿ ಸಕ್ರಿಯವಾಗಿದ್ದ ಕೇರಳ ದಂಪತಿ ಮನೆಯಲ್ಲಿ ಶವವಾಗಿ ಪತ್ತೆ; ಕಾರಣ ನಿಗೂಢ
ಯಥೇಚ್ಛವಾಗಿ ಹಣ ಸುರಿದು ಚುನಾವಣೆ ಮಾಡೋದು ಕುಮಾರಸ್ವಾಮಿಗೆ ಇರುವ ಒಂದೇ ಅಸ್ತ್ರ. ನನ್ನ ಬಳಿ ಅಷ್ಟು ಹಣ ಇಲ್ಲ, ಎರಡು ಬಾರಿ ಸೋತಿದ್ದೇನೆ. ಜನರೇ ನನ್ನ ಪರವಾಗಿ ಚುನಾವಣೆ ಮಾಡುತ್ತಾರೆ. ನನ್ನ ಎಲ್ಲರೂ ಪಕ್ಷಾಂತರಿ ಎನ್ನುತ್ತಾರೆ. ಯಾಕೆ ಕಾಂಗ್ರೆಸ್ ಬಿಟ್ಟು ಹೋಗಿದ್ರಿ ಎಂದು ಕೇಳುತ್ತಾರೆ. ಅವತ್ತು ನೀರಾವರಿ ಯೋಜನೆಗಾಗಿ ಪಕ್ಷ ಬಿಟ್ಟು ಹೋಗಿದ್ದೆ. ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಪಕ್ಷಾಂತರ ಮಾಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಇಸ್ರೇಲ್‌ಗೆ ನಮ್ಮ ಶಕ್ತಿ ಏನೆಂದು ತೋರಿಸಬೇಕು: ಮತ್ತೆ ಯುದ್ಧದ ಎಚ್ಚರಿಕೆ ನೀಡಿದ ಇರಾನ್ ಸುಪ್ರೀಂ ಲೀಡರ್
ಸರ್ಕಾರದಲ್ಲಿ ನಾನು ಶಾಸಕನಾಗಿ ಸೇರಿಕೊಂಡ ನಂತರ ದಿನಗಳಲ್ಲಿ ಡಿಕೆ ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದಾರೆ. ನಾನು ಡಿಕೆ ಸುರೇಶ್ ಸೇರಿಕೊಂಡು ನೀರಾವರಿ ಯೋಜನೆಗೆ ಹೆಚ್ಚು ಒತ್ತು ಕೊಡುತ್ತೇವೆ. ನಾನು ಎರಡು ಬಾರಿ ಸೋತು ಸುಣ್ಣ ಆಗಿದ್ದೇನೆ. ಹಾಗಾಗಿ ನೀವು ಈ ಬಾರಿ ನನಗೆ ಆಶೀರ್ವಾದ ಮಾಡಬೇಕು. ನನ್ನ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ