ರಾಮನಗರ: ಚನ್ನಪಟ್ಟಣ ಉಪಚುನಾವಣೆಯ (Channapatna By Election) ಟಿಕೆಟ್ ಗೊಂದಲಕ್ಕೆ ಇಂದು ಬಿಜೆಪಿ ಹೈಕಮಾಂಡ್ (BJP High Command) ತೆರೆ ಎಳೆಯುವ ಸಾಧ್ಯತೆಯಿದೆ.
ದೆಹಲಿಯಲ್ಲಿ ಚನ್ನಪಟ್ಟಣ ಉಪಚುನಾವಣೆ ಮೈತ್ರಿ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ಸಭೆ ನಡೆಯಲಿದೆ. ಅಧ್ಯಕ್ಷ ಜಿ.ಪಿ.ನಡ್ಡಾ (JP Nadda) ನೇತೃತ್ವದಲ್ಲಿ ನಡೆಯುವ ಸಭೆ ಮಾಜಿ ಸಚಿವ ಸಿಪಿ ಯೋಗೇಶ್ವರ್ (CP yogeshwar) ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಇದನ್ನೂ ಓದಿ: ತುಂಗಭದ್ರಾ ಡ್ಯಾಂ ವಾರ್ಷಿಕ ನಿರ್ವಹಣಾ ಗುತ್ತಿಗೆಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ? – ಜನಾರ್ದನ ರೆಡ್ಡಿ ಪ್ರಶ್ನೆ
ಉಪಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಸ್ಪರ್ಧೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಸಮಾವೇಶ ನಡೆಸಲು ಸಿಪಿವೈ ಮುಂದಾಗಿದ್ದರು. ಸಿಪಿವೈ ಬಂಡಾಯಕ್ಕೂ ಮುನ್ನ ಎಚ್ಚೆತ್ತ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ಸೂಚನೆ ನೀಡಿದೆ.
ಸಿಪಿವೈಗೆ ಟಿಕೆಟ್ ನೀಡಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಠಕ್ಕರ್ ಕೊಡಲು ಬಿಜೆಪಿ ಹೈಕಮಾಂಡ್ ತಂತ್ರಗಾರಿಕೆ ನಡೆಸಿದೆ ಎನ್ನಲಾಗಿದೆ. ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಕೆಲ ಷರತ್ತುಗಳ ಮೇಲೆ ಸಿಪಿವೈಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ. ಉಪಚುನಾವಣೆಯಲ್ಲಿ ಸಿಪಿವೈ, ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್‌ಗೆ (Nikhil Kumaraswamy) ಅವಕಾಶ ಸಿಗಬಹುದು ಎನ್ನಲಾಗುತ್ತಿದೆ.