ಬೆಂಗಳೂರು: ಕರ್ನಾಟಕದ ಮೂವರ ರಾಜೀನಾಮೆಯಿಂದ ತೆರವಾದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದರೂ ರಾಜ್ಯದ ಮಟ್ಟಿಗೆ ಹೆಚ್ಚು ಸದ್ದು ಮಾಡಿದ್ದು ಹೈವೋಲ್ಟೇಜ್ ಕಣ ಚನ್ನಪಟ್ಟಣ. ತುರುಸಿನ ಸ್ಪರ್ಧೆಯಲ್ಲಿ ಎಲ್ಲರ ಲೆಕ್ಕಾಚಾರಗಳನ್ನು ತಲೆ ಕೆಳಗೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ (CP Yogeshwar) ಗೆಲುವಿನ ನಗಾರಿ ಬಾರಿಸಿದ್ದಾರೆ.
ಕಾಂಗ್ರೆಸ್ ರೂಪಿಸಿದ ಚಕ್ರವ್ಯೂಹ ಬೇಧಿಸುವಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) 3ನೇ ಬಾರಿ ವಿಫಲರಾಗಿದ್ದಾರೆ. ಈ ಪ್ರತಿಷ್ಠೆಯ ರಾಜಕೀಯ ಆಟದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೈ ಮೇಲಾಗಿದೆ. ಸ್ವಂತ ಕ್ಷೇತ್ರದಲ್ಲಿ ಪುತ್ರನನ್ನು ಗೆಲ್ಲಿಸಲಾಗದೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮುಜುಗರ ಅನುಭವಿಸಿದ್ದಾರೆ.
ದೇವೇಗೌಡರು (Devegowda) ನಿರಂತರ 10 ದಿನ ಪ್ರಚಾರ ನಡೆಸಿ ಅಬ್ಬರಿಸಿದರೂ, ಬಿಜೆಪಿ ನಾಯಕರು ಬಂದು ಸಂಘಟಿತವಾಗಿ ಪ್ರಚಾರ ನಡೆಸಿದ್ರೂ, ಅದು ನಿಖಿಲ್‌ಗೆ ಗೆಲುವು ತಂದುಕೊಡಲಿಲ್ಲ. ಮತ ಎಣಿಕೆಯ ಮೊದಲ ಸುತ್ತಲ್ಲಿ ಕಾಂಗ್ರೆಸ್ ಅಲ್ಪಮತಗಳ ಮುನ್ನಡೆ ಸಿಕ್ಕಿತ್ತು. ನಂತರದ 4 ಸುತ್ತುಗಳಲ್ಲಿ ನಿಖಿಲ್ ಮುನ್ನಡೆ ಸಿಕ್ಕಿದರೂ ಹೀಗೆ ಮುಂದುವರೆಯಲಿಲ್ಲ. ಆರನೇ ಸುತ್ತಿನಿಂದ ಆರಂಭವಾದ ಯೋಗೇಶ್ವರ್ ಜೈತ್ರಯಾತ್ರೆ ಕೊನೆವರೆಗೂ ನಿಲ್ಲಲಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಲ್ಲಿ ಮುಳುಗಿದರೆ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಮೌನಕ್ಕೆ ಶರಣಾದ್ರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ? ಆರ್‌ಎಸ್‌ಎಸ್ ಏನೇನು ಕಾರ್ಯತಂತ್ರ ಮಾಡಿತ್ತು?
ಚನ್ನಪಟ್ಟಣ ಫಲಿತಾಂಶ
* ಯೋಗೇಶ್ವರ್ – 1,12,642 ಮತ
* ನಿಖಿಲ್ – 87,229 ಮತ
* ಕಾಂಗ್ರೆಸ್ ಗೆಲುವಿನ ಅಂತರ – 25,413 ಮತ
ಚನ್ನಪಟ್ಟಣ ರಿಸಲ್ಟ್ ಟ್ರೆಂಡ್ಸ್
* 1ನೇ ಸುತ್ತು – ಯೋಗೇಶ್ವರ್‌ಗೆ 49 ಮತಗಳ ಮುನ್ನಡೆ (ಗ್ರಾಮೀಣ)
* 2ನೇ ಸುತ್ತು – ನಿಖಿಲ್‌ಗೆ 135 ಮತಗಳ ಮುನ್ನಡೆ (ಗ್ರಾಮೀಣ)
* 5ನೇ ಸುತ್ತು – ನಿಖಿಲ್‌ಗೆ 1306 ಮತಗಳ ಮುನ್ನಡೆ (ಗ್ರಾಮೀಣ)
* 6ನೇ ಸುತ್ತು – ಯೋಗೇಶ್ವರ್‌ಗೆ 783 ಮತಗಳ ಮುನ್ನಡೆ (ನಗರ)
* 10ನೇ ಸುತ್ತು – ಯೋಗೇಶ್ವರ್‌ಗೆ 19,799 ಮತಗಳ ಮುನ್ನಡೆ (ನಗರ)
* 20ನೇ ಸುತ್ತು – 25,515 ಮತಗಳ ಅಂತರದಿಂದ ಯೋಗೇಶ್ವರ್ ಗೆಲುವು
ಇದನ್ನೂ ಓದಿ: ರಾಹುಲ್ ದಾಖಲೆ ಬ್ರೇಕ್ – ಪ್ರಿಯಾಂಕಾಗೆ 4 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು
ಗೆದ್ದಿದ್ದು ಹೇಗೆ?
* ಯೋಗೇಶ್ವರ್ ಕೈ ಹಿಡಿದ ಮುಸ್ಲಿಂ ಮತ
* ಯೋಗೇಶ್ವರ್ ಕೈ ಹಿಡಿದ `ಪಟ್ಟಣ’ದ ಮತ
* ಒಕ್ಕಲಿಗ ಮತ ವಿಭಜನೆ- ನಿಖಿಲ್ ಸೋಲು
* ಯೋಗೇಶ್ವರ್ ಕೈ ಹಿಡಿದ `ಗೃಹಲಕ್ಷ್ಮಿಯರʼ ʼಶಕ್ತಿ’
* ಸಿಪಿವೈ ವೈಯಕ್ತಿಕ ವರ್ಚಸ್ಸು – 2 ಸೋಲಿನ ಅನುಕಂಪ
* ಬಿಜೆಪಿಯ `ವಕ್ಫ್’ ವಿರೋಧಿ ನೀತಿ-ನಿಖಿಲ್‌ಗೆ ಹೊಡೆತ
* ಕಾಂಗ್ರೆಸ್‌ಗೆ ಪ್ಲಸ್ ಆದ ಜಮೀರ್ ವಿವಾದಿತ ಮಾತು
* ಕೈಗೂಡದ ದೇವೇಗೌಡರು- ಹೆಚ್‌ಡಿಕೆ ರಣತಂತ್ರ
ʼಸೈನಿಕʼನ ಕಲರ್‌ಫುಲ್ ಜರ್ನಿ
1999 – ಚನ್ನಪಟ್ಟಣದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು
2004 – ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯ
2008 – ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜಯ
2009 – ಉಪಚುನಾವಣೆಯಲ್ಲಿ ಜೆಡಿಎಸ್ ವಿರುದ್ಧ ಯೋಗೇಶ್ವರ್ ಸೋಲು
2011 – ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು
2013 – ಸಮಾಜವಾದಿ ಅಭ್ಯರ್ಥಿಯಾಗಿ ಗೆಲುವು
2018 – ಬಿಜೆಪಿ ಅಭ್ಯರ್ಥಿಯಾಗಿ ಸೋಲು
2023 – ಬಿಜೆಪಿ ಅಭ್ಯರ್ಥಿಯಾಗಿ ಸೋಲು, ಬಿಜೆಪಿ MLC ಆಗಿ ಆಯ್ಕೆ
2024 – ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು