ಬೆಂಗಳೂರು: ಎನ್‌ಡಿಎ ಮೈತ್ರಿಕೂಟ ಉಳಿಯಬೇಕು. ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ (H.D.Devegowda) ಅವರು ಮೊಮ್ಮಗನ ಸ್ಪರ್ಧೆಯನ್ನು ಖಚಿತಪಡಿಸಿದರು.
ಚನ್ನಪಟ್ಟಣ (Channapatna Bypolls) ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಡೆದ ಸಭೆಯಲ್ಲಿ ದೇವೇಗೌಡರು ಮಾತನಾಡಿ, ಎನ್‌ಡಿಎ ಮೈತ್ರಿ ಕೂಟ ಉಳಿಯಬೇಕು. ನಿಖಿಲ್ ಕಾರ್ಯಕರ್ತರಿಗೆ ಟಿಕೆಟ್ ಕೊಡೋಣ ಅಂತ ಹೇಳಿದ್ರು. ಆದರೆ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರಿಗೆ ಕುಮಾರಸ್ವಾಮಿಯನ್ನ ಹೇಗಾದ್ರು ಮುಗಿಸಬೇಕು ಅಂತಾ ಇದೆ. ಚನ್ನಪಟ್ಟಣದ ಕಾರ್ಯಕರ್ತರು, ಜನರು ಇದಕ್ಕೆ ಉತ್ತರ ಕೊಡಬೇಕು ಎಂದು ಹೇಳಿದರು. ಇದನ್ನೂ ಓದಿ: ಚನ್ನಪಟ್ಟಣಕ್ಕೆ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ
ನಾನೇ ಚನ್ನಪಟ್ಟಣಕ್ಕೆ ಬಂದು ಪ್ರಚಾರ ಮಾಡ್ತೀನಿ. ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಎಂದು ಸಭೆಯಲ್ಲಿ ನಾಯಕರಿಗೆ ದೇವೇಗೌಡರು ಸೂಚನೆ ನೀಡಿದರು.
ನಿಖಿಲ್ ಅಭ್ಯರ್ಥಿ ಆಗ್ತಾರೆ. ನಾಳೆ ನಾಮಪತ್ರ ಸಲ್ಲಿಕೆ ಮಾಡ್ತಾರೆ. ನಾನು ನಾಳೆ ಹೋಗ್ತೀನಿ. ಚುನಾವಣೆ ಪ್ರಚಾರದಲ್ಲಿ ಚನ್ನಪಟ್ಟಣದಲ್ಲಿ ನಾನು ಇರುತ್ತೇನೆ. ನಿಖಿಲ್ ಕಾರ್ಯಕರ್ತರ ಒತ್ತಡದಿಂದ ಸ್ಪರ್ಧೆ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪಕ್ಷದ ಉಳಿವಿಗಾಗಿ ನಿಖಿಲ್ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಬೇಕು: ಸಾ.ರಾ ಮಹೇಶ್
ನಮ್ಮ ಎನ್‌ಡಿಎ ಅಭ್ಯರ್ಥಿಯನ್ನ ಏಕೆ ಕರೆದುಕೊಂಡು ಹೋದ್ರು? ಈಗ ಡಿಕೆ ಬ್ರದರ್ಸ್ ಮಾತಾಡ್ತಾರೆ. ನಿಖಿಲ್ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿಲ್ಲ. ಆದರೆ, ಅವರೇ ನಿಲ್ಲಬೇಕು ಅಂತಾ ಕಾರ್ಯಕರ್ತರು ಹೇಳಿದ್ದಾರೆ. ಯಡಿಯೂರಪ್ಪ ಭೇಟಿ ಬಳಿಕ ಘೋಷಣೆ ಮಾಡಲಾಗುವುದು ಎಂದರು.
ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎನ್‌ಡಿಎ ನಾಯಕರ ಜೊತೆ ಕುಳಿತು ಚರ್ಚೆ ಮಾಡಬೇಕು. ಯಡಿಯೂರಪ್ಪ ಅವರ ಜೊತೆ ಮಾತನಾಡ್ತಾರೆ. ಆ ಬಳಿಕ ತೀರ್ಮಾನ ಮಾಡಿ ಅಭ್ಯರ್ಥಿ ಘೋಷಣೆ ಮಾಡ್ತಾರೆ. ನನಗೆ ಅರ್ಧಗಂಟೆ ಸಮಯ ಕೊಡಿ. ಎಲ್ಲ ಮಾತಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.