ಬೆಳಗಾವಿ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹಿಟ್ಲರ್ ಆಡಳಿತ ನಡೆಸುತ್ತಿದೆ ಎಂದು ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಆರೋಪಿಸಿದ್ದಾರೆ.
Advertisement
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹಿಟ್ಲರ್ ಆಡಳಿತ ನಡೆಸುತ್ತಿದೆ. ಎಲ್ಲ ವಿಚಾರಗಳಲ್ಲೂ ಬಿಜೆಪಿ ಸರ್ಕಾರ ವಿಫಲವಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಜನರು ರೋಸಿ ಹೋಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸಲಿದೆ. ಜನರಿಗಾಗಿ ಮೇಕೆದಾಟು ಯೋಜನೆ ಜಾರಿಗೆ ತರುವಂತೆ ಆಗ್ರಹಿಸಿ ಪಾದಯಾತ್ರೆ ಮಾಡಲಾಗುತ್ತಿದೆ. ಬಿಜೆಪಿಯವರ ಅಸಹಾಯಕ ಧೋರಣೆಯೇ ಯೋಜನೆಯ ಹಿನ್ನೆಡೆಗೆ ಕಾರಣವಾಗಿದೆ. ಮೇಕೆದಾಟು ಯೋಜನೆ ಜಾರಿಗೆ ತರಲು ಬಿಜೆಪಿ ಸಂಸದರು ಶ್ರಮಿಸುತ್ತಿಲ್ಲ. ಕಾಂಗ್ರೆಸ್ ಪಾದಯಾತ್ರೆಯಿಂದ ಬಿಜೆಪಿ ನಾಯಕರು ಹೆದರಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ನಿಧನ
Advertisement
Advertisement
ಪಂಚಾಯತ್ ಸದಸ್ಯರ ಗೌರವಧನದ ಹೆಚ್ಚಳಕ್ಕೆ ಆದ್ಯತೆ ಮೇರೆಗೆ ಹೋರಾಟ ಮಾಡುತ್ತೇವೆ. ನೆರೆಯ ರಾಜ್ಯಗಳಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಗೌರವ ಧನ ಹೆಚ್ಚಿದೆ. ನಮ್ಮ ರಾಜ್ಯದ ಸದಸ್ಯರ ಗೌರವ ಧನ ಹೆಚ್ಚಳಕ್ಕೆ ಕ್ರಮ ವಹಿಸುತ್ತೇನೆ. ಪ್ರವಾಹದ ಸಮಯದಲ್ಲಿ ಸಾಕಷ್ಟು ಮನೆಗಳು ಹಾಳಾಗಿವೆ. ಮನೆಗಳ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಗಮನ ಹರಿಸುತ್ತಿಲ್ಲ. ಸರ್ಕಾರದ ಗಮನ ಸೆಳೆಯಲು ಪ್ರಯತ್ನ ಮಾಡುತ್ತೇನೆ. ಬೆಳಗಾವಿ ಜಿಲ್ಲೆ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಗ್ರಾಪಂ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡುವ ಕೆಲಸ ಮಾಡಬೇಕಿದೆ. ಗ್ರಾ.ಪಂ.ಗಳಿಗೆ ಹೆಚ್ಚಿನ ಅನುದಾನ ತರಲು ಪ್ರಯತ್ನ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದರು. ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ಭಾರತದ ನೆರವು – ಇರಾನ್ ಸಹಾಯ
Advertisement
ಪ್ರಸ್ತುತ ಪರಿಷತ್ ಸದಸ್ಯರ ಅನುದಾನ ಕೇವಲ 2 ಕೋಟಿ ಇದೆ. 4 ಕೋಟಿ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ನಾಳೆಯಿಂದಲೇ ನಾನು ನನ್ನ ಕೆಲಸ ಆರಂಭಿಸುತ್ತೇನೆ. ಬೆಳಗಾವಿ ತಾಲೂಕಿನ ಪಿಡಿಓಗಳ ಸಭೆ ಮಾಡುತ್ತೇನೆ. ಪಿಡಿಓಗಳು ಕಮರ್ಷಿಯಲ್ ಆಗಿದ್ದಾರೆ ಅವರಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇನೆ. ಎಲ್ಲ ಪಂಚಾಯ್ತಿಗೂ ಭೇಟಿ ನೀಡಿ, ಸದಸ್ಯರ ಸಮಸ್ಯೆ ಆಲಿಸುತ್ತೇನೆ. ಭೇಟಿ ನೀಡಲ್ಲ ಎಂಬ ಕಳಂಕ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.
ಕಾಂಗ್ರೆಸ್‍ನಿಂದ ಪರಿಷತ್ ಚುನಾವಣೆಯಲ್ಲಿ ಗೆದ್ದಿದ್ದು ಹೆಮ್ಮೆಯ ವಿಷಯವಾಗಿದೆ. ನನ್ನ ಮೇಲೆ ವಿಶ್ವಾಸ ಇಟ್ಟು ಗೆಲ್ಲಿಸಿದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. 13 ಶಾಸಕರು, 2 ಸಂಸದರು, ಓರ್ವ ರಾಜ್ಯಸಭೆ ಸದಸ್ಯರು ಬಿಜೆಪಿಯವರಿದ್ದಾರೆ. ಈ ಚುನಾವಣೆಯನ್ನು ನಮ್ಮ ನಾಯಕರು ಸವಾಲಾಗಿ ಸ್ವೀಕರಿಸಿದ್ದರು. ಸಂಘಟನಾತ್ಮಕ ಪ್ರಯತ್ನ ಮಾಡಿ ಕೈ ಮುಖಂಡರು ನನ್ನನ್ನು ಗೆಲ್ಲಿಸಿದ್ದಾರೆ. ಪಂಚಾಯತ್ ರಾಜ್ಯ ಇಲಾಖೆಯಲ್ಲಿ ಹಲವು ಕೆಲಸ ಮಾಡಬೇಕಿದೆ. ಸತೀಶ್ ಜಾರಕಿಹೊಳಿ ಕೂಡ 2 ಸಲ ಪರಿಷತ್ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಸತೀಶ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾಂಬಿನೇಶನ್‍ನಲ್ಲಿ ದೊಡ್ಡ ಪ್ರಮಾಣದ ಗೆಲುವು ನನ್ನದಾಗಿದೆ. ಸತೀಶ್ ಅವರ ಅನುಭವ ನನಗೆ ಕೆಲಸ ಮಾಡಲು ಅನುಕೂಲ ಆಗಲಿದೆ ಎಂದು ನುಡಿದರು.