ಚೆನ್ನೈ: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ವಿಶ್ವಕಪ್ ಕ್ರಿಕೆಟ್ (World Cup Cricket) ಪಂದ್ಯದ ವೇಳೆ ಪಾಕಿಸ್ತಾನದ (Pakistan) ಆಟಗಾರರಿಗೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವುದು ಸ್ವೀಕಾರಾರ್ಹವಲ್ಲ ಎಂದು ತಮಿಳುನಾಡು ಕ್ರೀಡಾ ಮತ್ತು ಯುವಜನ ವ್ಯವಹಾರಗಳ ಸಚಿವ ಮತ್ತು ಡಿಎಂಕೆ (DMK) ಹಿರಿಯ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಹೇಳಿದ್ದಾರೆ.
ಪಾಕಿಸ್ತಾನದ ಆಟಗಾರರು ಪಂದ್ಯದಲ್ಲಿ ಔಟಾದಾಗ ಪ್ರೇಕ್ಷಕರು ಜೈ ಶ್ರೀ ರಾಮ್ (Jai Shri Ram) ಎಂದು ಘೋಷಣೆ ಕೂಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹೈವೋಲ್ಟೇಜ್ ಪಂದ್ಯದ ಬಳಿಕ ಪಾಕ್ ನಾಯಕನಿಗೆ ಜೆರ್ಸಿ ಗಿಫ್ಟ್ ಮಾಡಿದ ಕೊಹ್ಲಿ: ವಾಸಿಂ ಅಕ್ರಮ್ ಗರಂ
India is renowned for its sportsmanship and hospitality. However, the treatment meted out to Pakistan players at Narendra Modi Stadium in Ahmedabad is unacceptable and a new low. Sports should be a unifying force between countries, fostering true brotherhood. Using it as a tool… pic.twitter.com/MJnPJsERyK
— Udhay (@Udhaystalin) October 14, 2023
ಭಾರತವು (Team India) ತನ್ನ ಕ್ರೀಡಾ ಮನೋಭಾವ ಮತ್ತು ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಆದಾಗ್ಯೂ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಆಟಗಾರರಿಗೆ ಈ ರೀತಿಯ ಘೋಷಣೆ ಕೂಗಿದ್ದು ಸರಿಯಲ್ಲ. ಕ್ರೀಡೆಗಳು ದೇಶಗಳ ನಡುವೆ ಒಗ್ಗೂಡಿಸುವ ಶಕ್ತಿಯಾಗಬೇಕು. ನಿಜವಾದ ಸಹೋದರತ್ವವನ್ನು ಬೆಳೆಸಬೇಕು. ದ್ವೇಷವನ್ನು ಹರಡುವ ಸಾಧನವಾಗಿ ಬಳಸುವುದು ಸ್ವೀಕಾರಾರ್ಹವಲ್ಲ ಎಂದು ಬರೆದುಕೊಂಡಿದ್ದಾರೆ.
ಈ ಅಭಿಪ್ರಾಯಕ್ಕೆ ನೆಟ್ಟಿಗರೊಬ್ಬರು, ಐಪಿಎಲ್‌ನಲ್ಲಿ ಲಂಕಾ ಆಟಗಾರರಿಗೆ ತಮಿಳುನಾಡಿನಲ್ಲಿ ಆಡಲು ಬಿಡದ ವ್ಯಕ್ತಿಗಳಿಂದ ಈ ಮಾತು ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
Web Stories