ಕೋಲಾರ: ನಗರದ ಹೊರವಲಯದ ನಂದಿನಿ ಪ್ಯಾಲೆಸ್‌ನಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ (Congress) ಸಭೆಯಲ್ಲಿ ಗದ್ದಲ ಹಾಗೂ ಮಾರಾಮಾರಿ ನಡೆದಿದ್ದು, ಕಾಂಗ್ರೆಸ್ ಮುಖಂಡರು ಪರಸ್ಪರ ಕೈ ಮಿಲಾಯಿಸಿದ್ದಾರೆ.
ರಮೇಶ್ ಕುಮಾರ್ ಸೇರಿದಂತೆ ಕೆಲವರಿಗೆ ಸಭೆಗೆ ಆಹ್ವಾನ ಇಲ್ಲ. ಕೆಲ ಮುಖಂಡರಿಗೆ ಆಹ್ವಾನ ನೀಡಿಲ್ಲ ಎಂದು ಗಲಾಟೆ ಆರಂಭವಾಗಿದ್ದು, ಕಾಂಗ್ರೆಸ್ ಶಾಸಕರ ಎದುರೇ ಪರಸ್ಪರ ತಳ್ಳಾಟ ನೂಕಾಟ ನಡೆದಿದೆ. ಪರಸ್ಪರ ಗುಂಪುಗಳ ಮಧ್ಯೆ ಮುಖಂಡರು ಕೈ ಕೈ ಮಿಲಾಯಿಸಿದ್ದಾರೆ. ಗುಂಪುಗಳ ಗಲಾಟೆ ಮಧ್ಯೆ ಶಾಸಕರು ಸುಮ್ಮನಾಗಿದ್ದಾರೆ. ಇದನ್ನೂ ಓದಿ: ಅ.2 ರಂದು ರಾಜ್ಯಾದ್ಯಂತ `ಗಾಂಧಿ ನಡಿಗೆ’; ಒಂದು ವರ್ಷ ಕಾರ್ಯಕ್ರಮ ಆಯೋಜನೆ – ಡಿಕೆಶಿ
Advertisement
Advertisement
ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ರಂ.ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ನಜೀರ್ ಅಹ್ಮದ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಪರಿಷತ್ ಸದಸ್ಯ ಅನಿಲ್ ಕುಮಾರ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿದವರಿಗೂ ಮಣೆ ಹಾಕಿದ್ದಾರೆ ಎಂದು ಆರೋಪಿಸಿ ಗಲಾಟೆ ಆರಂಭವಾಗಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಅವ್ರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಪ್ರದೀಪ್ ಈಶ್ವರ್
Advertisement
ಕೆಹೆಚ್ ಮುನಿಯಪ್ಪ ಹಾಗೂ ಕೆಲವು ಶಾಸಕರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಸಮಾವೇಶ ಆರಂಭಕ್ಕೂ ಮೊದಲೇ ಗಲಾಟೆ ಶುರುವಾಗಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ಕೆಲಸ ಮಾಡಿದವರನ್ನು ವೇದಿಕೆ ಮೇಲೆ ಕೂರಿಸಿದ್ದೀರಿ ಎಂದು ಗಲಾಟೆ ಆರಂಭವಾಗಿದ್ದು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್ ಮೇಲೆ ಕೈ ಮಾಡಿದ ಕೆಲ ಕಾರ್ಯಕರ್ತರು ಅವರನ್ನು ಸಭೆಯಿಂದ ಹೊರ ತಳ್ಳಿದ್ದಾರೆ. ಬಳಿಕ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಸಭೆಯನ್ನು ಸಮಾಧಾನ ಪಡಿಸಿದ್ದು, ಕಾಂಗ್ರೆಸ್ ಉಸ್ತುವಾರಿ ಎಂ.ನಾರಾಯಣಸ್ವಾಮಿ ಸಭೆಯನ್ನು ಆರಂಭಿಸಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್
Advertisement
ಕೋಲಾರ ಕಾಂಗ್ರೆಸ್ ಉಸ್ತುವಾರಿ ನಾರಾಯಣಸ್ವಾಮಿ ಈ ಬಗ್ಗೆ ಮಾತನಾಡಿ, ಕೆಲವು ಕಾರಣಾಂತರಗಳಿಂದ ಗೊಂದಲಗಳು ಇದೆ. ಸೂಕ್ತ ಪರಿಹಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಳಿ ವರದಿ ನೀಡುತ್ತೇವೆ. ಜಿಲ್ಲಾಧ್ಯಕ್ಷರ ಮೇಲೆ ಕೈ ಮಾಡೋದು ತಪ್ಪು. ಅವರನ್ನು ಕರೆಸಿ ವಿಚಾರಣೆ ಮಾಡುತ್ತೇವೆ. ನಾನೆ ಖುದ್ದಾಗಿ ಎಲ್ಲಾ ಹಿರಿಯ ನಾಯಕರನ್ನು ಕಾರ್ಯಕ್ರಮಕ್ಕೆ ಕರೆದಿದ್ದೇನೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ಇದನ್ನೂ ಓದಿ: ಬೆಳ್ಳಂದೂರು ರಸ್ತೆ ನಿರ್ಮಾಣಕ್ಕಾಗಿ ಬಿಬಿಎಂಪಿಗೆ ಭೂಮಿ ನೀಡಲು ರಕ್ಷಣಾ ಇಲಾಖೆ ಒಪ್ಪಿಗೆ: ಡಿಕೆಶಿ
ಇನ್ನು ಈ ಸಂಬಂಧ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಪ್ರತಿಕ್ರಿಯಿಸಿ, ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಅಲ್ಲ, ಬಿಜೆಪಿ ಪಕ್ಷದಲ್ಲೂ ಗಲಾಟೆ ಇದೆ. ಇದು ನಮ್ಮ ಕುಟುಂಬದ ಜಗಳ. ಎಲ್ಲವೂ ಸರಿ ಹೋಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಶೀಘ್ರವೇ ಗೃಹಲಕ್ಷ್ಮಿ ಹಣ, ಯೋಜನೆ ನಿಲ್ಲುವ ಮಾತೇ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
ಬಳಿಕ ಮಾತನಾಡಿದ ಹಲ್ಲೆಗೊಳಗಾದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀ ನಾರಾಯಣ್, ತಳ್ಳಾಟ ಯಾಕೆ ಆಯ್ತು ಗೊತ್ತಿಲ್ಲ. ನನ್ನ ಮೇಲೆ ಹಲ್ಲೆ ಆಗಿಲ್ಲ. ನಾನು ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ್ದಕ್ಕೆ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನ ಗೆದ್ದಿದೆ. ಜಗಳ ಶುರುವಾಗಿದ್ದು ಹೇಗೆ ಅನ್ನೋದು ನನಗೆ ಗೊತ್ತಿಲ್ಲ. ಏನು ಅಸಮಾಧಾನ ಇದೆ ಅನ್ನೋದು ಗೊತ್ತಿಲ್ಲ. ಅವರನ್ನು ಕರೆಸಿ ವಿಚಾರಣೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹತ್ಯೆ – ಇಸ್ರೇಲ್ ಸೇನೆಯಿಂದ ಘೋಷಣೆ