Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ರಿಮಿನಲ್ ಕೇಸಲ್ಲಿ ಜನಪ್ರತಿನಿಧಿಗಳ ಬಂಧನವಾದ್ರೆ ಹುದ್ದೆಯಿಂದ ವಜಾ – ಮಸೂದೆ ಮಂಡನೆ, ಲೋಕಸಭೆಯಲ್ಲಿ ಕೋಲಾಹಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕ್ರಿಮಿನಲ್ ಕೇಸಲ್ಲಿ ಜನಪ್ರತಿನಿಧಿಗಳ ಬಂಧನವಾದ್ರೆ ಹುದ್ದೆಯಿಂದ ವಜಾ – ಮಸೂದೆ ಮಂಡನೆ, ಲೋಕಸಭೆಯಲ್ಲಿ ಕೋಲಾಹಲ

Latest

ಕ್ರಿಮಿನಲ್ ಕೇಸಲ್ಲಿ ಜನಪ್ರತಿನಿಧಿಗಳ ಬಂಧನವಾದ್ರೆ ಹುದ್ದೆಯಿಂದ ವಜಾ – ಮಸೂದೆ ಮಂಡನೆ, ಲೋಕಸಭೆಯಲ್ಲಿ ಕೋಲಾಹಲ

Public TV
Last updated: August 20, 2025 4:35 pm
Public TV
Share
2 Min Read
Amit Shah Lok Sabha
SHARE

– 3 ಪ್ರಮುಖ ಹೈವೊಲ್ಟೇಜ್ ಬಿಲ್ ಮಂಡನೆ
– ಮಸೂದೆ ಹರಿದು ಅಮಿತ್ ಶಾ ಕಡೆಗೆ ಎಸೆದ ವಿಪಕ್ಷ ನಾಯಕರು

ನವದೆಹಲಿ: ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯ ಸಚಿವರು ಬಂಧನಕ್ಕೊಳಗಾದರೆ, ಅವರನ್ನು ಪದಚ್ಯುತಗೊಳಿಸುವ ಮಸೂದೆಗಳನ್ನು (Criminal MP’s Removal Bill) ಲೋಕಸಭೆಯಲ್ಲಿ ಮಂಡಿಸಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಸಂವಿಧಾನ (130ನೇ ತಿದ್ದುಪಡಿ) ಮಸೂದೆ 2025, ಕೇಂದ್ರಾಡಳಿತ ಸರ್ಕಾರ (ತಿದ್ದುಪಡಿ) ಮಸೂದೆ ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ರಚನೆ (ತಿದ್ದುಪಡಿ) ಮಸೂದೆ- 2025 ಅನ್ನು ಮಂಡಿಸಿ ಈ ಮೂರೂ ಮಸೂದೆಗಳನ್ನು ಹೆಚ್ಚಿನ ಪರಿಶೀಲನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಒಪ್ಪಿಸಬೇಕು ಎಂದು ಮನವಿ ಮಾಡಿದರು.

ಮೂರು ಮಸೂದೆಗಳ ಮಂಡನೆ ಬೆನ್ನಲ್ಲೇ ಲೋಕಸಭೆಯಲ್ಲಿ (Lok Sabha) ಕೋಲಾಹಲ ಸೃಷ್ಟಿಯಾಯಿತು. ವಿರೋಧ ಪಕ್ಷದ ನಾಯಕರು ಮಸೂದೆಯ ಪ್ರತಿಗಳನ್ನು ಹರಿದು ಅಮಿತ್ ಶಾ ಕಡೆಗೆ ಎಸೆದರು. ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ವಿರೋಧ ಪಕ್ಷಗಳ ವರ್ತನೆಗೆ ಸ್ಪೀಕರ್ ಓಂ ಬಿರ್ಲಾ ಆಕ್ರೋಶ ಹೊರ ಹಾಕಿದರು.

ಅಮಿತ್ ಶಾ ಅವರನ್ನು ಬಂಧಿಸಿದಾಗ ಅವರು ತಮ್ಮ ನೈತಿಕತೆಯನ್ನು ಪ್ರದರ್ಶಿಸಿದ್ದಾರೆಯೇ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನನ್ನ ವಿರುದ್ಧ ಆರೋಪಗಳು ಕೇಳಿ ಬಂದಾಗ, ಬಂಧನಕ್ಕೂ ಮುನ್ನ ನಾನು ನೈತಿಕವಾಗಿ ರಾಜೀನಾಮೆ ನೀಡಿದ್ದೇನೆ. ನ್ಯಾಯಾಲಯದಿಂದ ನಾನು ನಿರಪರಾಧಿ ಎಂದು ಸಾಬೀತಾಗುವವರೆಗೆ ನಾನು ಯಾವುದೇ ಸಾಂವಿಧಾನಿಕ ಹುದ್ದೆಯನ್ನು ವಹಿಸಿಕೊಂಡಿಲ್ಲ ಎಂದು ಹೇಳಿದರು.

ಮಸೂದೆಯಲ್ಲಿ ಏನಿದೆ?
* ಗಂಭೀರ ಸ್ವರೂಪದ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಅಥವಾ ರಾಜ್ಯಗಳ ಸಚಿವರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿದಾಗ ಅಂಥಹವರನ್ನು ಹುದ್ದೆಗಳಿಂದ ಪದಚ್ಯುತಗೊಳಿಸುವ ಪ್ರಕ್ರಿಯೆಗೆ ಕಾನೂನು ಚೌಕಟ್ಟು ವಿಧಿಸಲು ಈ ಮಸೂದೆಗಳನ್ನು ರೂಪಿಸಲಾಗಿದೆ
* 30 ದಿನಗಳ ಕಾಲ ನಿರಂತರ ಬಂಧನದಲ್ಲಿದ್ದವರನ್ನು 31ನೇ ದಿನ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸಲಾಗುತ್ತದೆ.
* ಬಂಧನದಿಂದ ಬಿಡುಗಡೆ ಆದವರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿ ಅಥವಾ ಸಚಿವರನ್ನಾಗಿ ನೇಮಿಸಲು ಯಾವುದೇ ನಿರ್ಬಂಧ ಇರುವುದಿಲ್ಲ
* ಇದಕ್ಕಾಗಿ ಸಂವಿಧಾನದ 75ನೇ ವಿಧಿಗೆ ಸೆಕ್ಷನ್ 5(ಎ) ಅನ್ನು ಸೇರ್ಪಡೆ ಮಾಡಲಾಗುತ್ತಿದೆ
* ಈ ನಿಯಮದ ಪ್ರಕಾರ, ಹಾಲಿ ಜಾರಿಯಲ್ಲಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾದ ಅಪರಾಧಕ್ಕಾಗಿ ಸತತ 30 ದಿನಗಳಿಂದ ಬಂಧನದಲ್ಲಿರುವ ಅಥವಾ ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಒಳಗಾದ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಪ್ರಧಾನಿಯು 31ನೇ ದಿನದಂದು ರಾಷ್ಟ್ರಪತಿಯವರಿಗೆ ಶಿಫಾರಸು ಮಾಡಬೇಕು.
* ಪ್ರಧಾನಿಯು, ಶಿಫಾರಸು ಮಾಡದಿದ್ದರೂ ಅಂಥಹ ಸಚಿವರು 31ನೇ ದಿನದಂದು ಅಧಿಕಾರ ಕಳೆದುಕೊಳ್ಳುತ್ತಾರೆ.
* ಇದೇ ನಿಯಮ ರಾಜ್ಯಗಳಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಅನ್ವಯಿಸಲಿದೆ.
* ರಾಜ್ಯಗಳಲ್ಲಿ ರಾಜ್ಯಪಾಲರು ಪದಚ್ಯುತಗೊಳಿಸುವ ಅಧಿಕಾರ ಹೊಂದಿರುತ್ತಾರೆ.
* ದೆಹಲಿ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ ರಾಷ್ಟ್ರಪತಿಯವರು ಹಾಗೂ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಅವರು ಸಕ್ಷಮ ಪ್ರಾಧಿಕಾರಿಗಳಾಗಿರುತ್ತಾರೆ.
* ಹಾಲಿ ಇರುವ ನಿಯಮಗಳ ಅನ್ವಯ, ಯಾವುದೇ ಜನಪ್ರತಿನಿಧಿ ಕ್ರಿಮಿನಲ್ ಪ್ರಕರಣಗಳಲ್ಲಿ 2 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಗೆ ಗುರಿಯಾದರೆ ಮಾತ್ರವೇ ತಮ್ಮ ಜನಪ್ರತಿನಿಧಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ. ಜೊತೆಗೆ ಶಿಕ್ಷೆ ಮುಗಿದ ಬಳಿಕ ಮತ್ತೆ 5 ವರ್ಷ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಇಲ್ಲ.

TAGGED:Amit ShahCriminal Mps Removal Billlok sabhaNew Delhiಅಮಿತ್ ಶಾಕ್ರಿಮಿನಲ್ ಕೇಸ್ನವದೆಹಲಿಲೋಕಸಭೆ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
1 hour ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
2 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
2 hours ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
2 hours ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
3 hours ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?