ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪೇಂದ್ರ ಸಿಂಗ್ ಹನಿ ಅವರನ್ನು ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.
ತಡರಾತ್ರಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ)ಯ ನಿಬಂಧನೆಗಳ ಅಡಿಯಲ್ಲಿ ತನಿಖಾ ಸಂಸ್ಥೆ ಭೂಪೇಂದ್ರ ಸಿಂಗ್ ಹನಿ ಅವರನ್ನು ಬಂಧಿಸಿದೆ. ಇಂದು ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ. ಪಂಜಾಬ್ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ ಈ ಘಟನೆ ನಡೆದಿದೆ. ಫೆಬ್ರವರಿ 20ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ. ಇದನ್ನೂ ಓದಿ: 18 ವರ್ಷದಲ್ಲಿಯೇ ಮೊದಲು- ಫೇಸ್‍ಬುಕ್‍ಗೆ ಒಂದೇ ದಿನ 16 ಲಕ್ಷ ಕೋಟಿ ರೂ. ನಷ್ಟ
Advertisement
Advertisement
ಪಂಜಾಬ್‍ನಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಕಳೆದ ತಿಂಗಳು ಭೋಪೇಂದ್ರ ಸಿಂಗ್ ಹನಿ ಅವರ ನಿವಾಸ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿತ್ತು. ಈ ವೇಳೆ 8 ಕೋಟಿ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಜೊತೆಗೆ ಆಸ್ತಿ ವಹಿವಾಟಿಗೆ ಸಂಬಂಧಿಸಿದ ದೋಷಪೂರಿತ ದಾಖಲೆಗಳು ಮೊಬೈಲ್ ಫೋನ್‍ಗಳು, 21 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನ ಮತ್ತು 12 ಲಕ್ಷ ಮೌಲ್ಯದ ರೋಲೆಕ್ಸ್ ವಾಚ್ ವಶಪಡಿಸಿಕೊಳ್ಳಲಾಗಿದೆ.
Advertisement
ED arrests Punjab CM’s nephew Bhupinder Singh Honey in sand mining case
Read @ANI Story | https://t.co/hyw5D3DvnS#ED #Punjab #SandMiningCase pic.twitter.com/lAEnsHLGsc
— ANI Digital (@ani_digital) February 4, 2022
Advertisement
ವಿಧಾನಸಭೆ ಚುನಾವಣೆ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಂಬಂಧಿಕರ ಮೇಲೂ ಸಹ ದಾಳಿ ನಡೆಸಲಾಗಿತ್ತು. ಅದೇ ರೀತಿ ನನ್ನ ಮೇಲೆ ಒತ್ತಡ ಹೇರಲು ಪಂಜಾಬ್‍ನಲ್ಲಿ ಇಡಿ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಸದಸ್ಯರ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಈ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ. ಒತ್ತಡವನ್ನು ನಿಭಾಯಿಸಲು ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚೀನಾ ಒಲಿಂಪಿಕ್ಸ್‌ಗೆ ಭಾರತ ಬಹಿಷ್ಕಾರ – ದಿಟ್ಟ ನಿರ್ಧಾರ ತೆಗೆದುಕೊಂಡ ಭಾರತೀಯ ವಿದೇಶಾಂಗ ಇಲಾಖೆ