LatestLeading NewsMain PostNational

ಚುನಾವಣೆಯಲ್ಲಿ ಸೋಲು- ಪಂಜಾಬ್, ಮಣಿಪುರ ಸಿಎಂ ರಾಜೀನಾಮೆ

ಚಂಡೀಗಢ: ಪಂಜಾಬ್‍ನಲ್ಲಿ ಹೀನಾಯ ಸೋಲನುಭವಿಸಿದ ಕಾರಣ ಚರಣ್‍ಜಿತ್ ಸಿಂಗ್ ಚನ್ನಿ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸಿದೆ. ಅಲ್ಲದೇ ತಾವೂ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಚರಣ್‍ಜಿತ್ ಸಿಂಗ್ ಚನ್ನಿ ರಾಜೀನಾಮೆ ನೀಡಿದ್ದಾರೆ. ಇಂದು ಚನ್ನಿ ಅವರು ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ರಾಜೀನಾಮೆ ಸಲ್ಲಿಸಿದ್ದಾರೆ.

ಪಂಜಾಬ್ ಚುನಾವಣೆ: ಸಿಎಂ ಚನ್ನಿ ಎರಡು ಕ್ಷೇತ್ರಗಳಿಂದ ಕಣಕ್ಕೆ | Punjab Poll: Chief Minister Channi To Contest From 2 Seats - Kannada Oneindia

ರಾಜೀನಾಮೆ ನೀಡಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಜನರ ನಡುವೆಯೇ ಇದ್ದು, ದುಡಿಯುತ್ತಲೇ ಇರುತ್ತೇನೆ. ಈ ವೇಳೆ ತಮ್ಮ ಸರ್ಕಾರ ಕೈಗೊಂಡಿರುವ ನಿರ್ಧಾರಗಳನ್ನು ಮುಂದೆ ಬರುವ ಸರ್ಕಾರ ನಡೆಸಿಕೊಂಡು ಹೋಗಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸೋಲಿನ ನಂತರ, ಪಂಜಾಬ್‍ನ ಉನ್ನತ ಸರ್ಕಾರಿ ವಕೀಲರು ರಾಜೀನಾಮೆ! 

ಪಂಜಾಬ್‍ನ ಜನರು ಬದಲಾವಣೆಯನ್ನು ಬಯಸಿದ್ದು, ಬೇರೆ ಪಕ್ಷಕ್ಕೆ ಮತ ಹಾಕಿದ್ದಾರೆ. ಆಮ್ ಆದ್ಮಿ ಪಕ್ಷದ ಸರ್ಕಾರ ರಚನೆಯಾಗಲಿದೆ. ಅವರ ಸರ್ಕಾರವನ್ನು ನಾವು ಬೆಂಬಲಿಸುತ್ತೇವೆ. 111 ದಿನಗಳ ನಮ್ಮ ಕೆಲಸ, ನಿರ್ಧಾರಗಳನ್ನು ಹೊಸ ಸರ್ಕಾರ ಮುಂದುವರಿಸಲಿ ಎಂದಿದ್ದಾರೆ.

N. Biren Singh

ಮಣಿಪುರ ಸಿಎಂ ರಾಜೀನಾಮೆ
ಮಣಿಪುರದಲ್ಲಿ ಬಿಜೆಪಿ ಸತತವಾಗಿ ಎರಡನೇ ಬಾರಿಗೆ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಆದರೆ ಸೋಲನುಭವಿಸಿದ ಎನ್.ಬಿರೇನ್ ಸಿಂಗ್ ಅವರು ಸಿಎಂ ಸ್ಥಾನಕ್ಕೆ ಶುಕ್ರವಾರ ರಾಜ್ಯಪಾಲ ಲಾ ಗಣೇಶನ್ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಿದರು. ಆದರೆ ರಾಜ್ಯಪಾಲರು, ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂದು ಕೇಳಿಕೊಂಡಿದ್ದು, ಅದಕ್ಕೆ ಬಿರೇನ್ ಸಿಂಗ್ ಅವರು ಒಪ್ಪಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಕೆಲಸ ಬಿಟ್ಟು ಬಿರಿಯಾನಿ ಸ್ಟಾಲ್ ತೆರೆದ ಇಂಜಿನಿಯರಿಂಗ್ ಯುವಕರು

Leave a Reply

Your email address will not be published.

Back to top button