ಚಂಡೀಗಢ: ವಿಧಾನಸಭೆ ಚುನಾವಣೆಗೆ ಒಂದು ತಿಂಗಳು ಬಾಕಿ ಇರುವಾಗಲೇ ಮುಂದಿನ ಸಿಎಂ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಪಂಜಾಬ್‍ನ ಹಾಲಿ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿರುವ ಅವರು, ಚುನಾವಣಾ ದೃಷ್ಟಿಯಿಂದ ಸಿಎಂ ಅಭ್ಯರ್ಥಿ ಘೋಷಣೆ ಸೂಕ್ತ ಎಂದು ಮನವಿ ಮಾಡಿದ್ದಾರೆ.
ಪ್ರತಿಸ್ಪರ್ಧಿಯಾಗಿರುವ ಆಮ್ ಆದ್ಮಿಯಲ್ಲಿ ಸಿಎಂ ಅಭ್ಯರ್ಥಿಯನ್ನು ಮುಂದಿನ ವಾರ ಘೋಷಣೆ ಮಾಡಲಾಗುವುದು ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕೇಜ್ರಿವಾಲ್ ಅವರೇ ಪಂಜಾಬ್‍ನಲ್ಲಿ ಸಿಎಂ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಈ ಗೊಂದಲಗಳಿಗೆ ತೆರೆ ಎಳೆಯುವ ದೃಷ್ಟಿಯಿಂದ ಅರವಿಂದ್ ಕೇಜ್ರಿವಾಲ್ ಸಿಎಂ ಅಭ್ಯರ್ಥಿಯನ್ನು ಘೋಷಿಸಲು ಮುಂದಾಗಿದ್ದಾರೆ.
Advertisement
Advertisement
ಮೂಲಗಳ ಪ್ರಕಾರ ಸಂಸದ ಭಗವಂತ್ ಮಾನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬಹುದು ಎಂದು ಹೇಳಲಾಗುತ್ತಿದೆ. ಹಿರಿಯ ನಾಯಕರು ಮತ್ತು ವರ್ಚಸ್ಸು ಹೊಂದಿರುವ ನಾಯಕರಾಗಿರುವ ಹಿನ್ನೆಲೆ ಅವರ ಆಯ್ಕೆ ಬಹುತೇಕ ಖಚಿತ ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: ಯುಪಿಯಲ್ಲಿ 50-100 ಕ್ಷೇತ್ರಗಳಲ್ಲಿ ಶಿವಸೇನೆ ಸ್ಪರ್ಧೆ- ಮೈತ್ರಿ ಮಾಡಲ್ಲ ಎಂದ ರಾವತ್
Advertisement
Advertisement
ಆಮ್ ಆದ್ಮಿಯಲ್ಲಿ ಸಿಎಂ ಅಭ್ಯರ್ಥಿ ಘೋಷಣೆ ಸುದ್ದಿ ಖಚಿತವಾಗುತ್ತಿದ್ದಂತೆ ಇತ್ತ ಚನ್ನಿ ಕೂಡಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಲು ಒತ್ತಡ ಹಾಕುತ್ತಿದ್ದಾರೆ. ಇದರಿಂದ ಆಮ್ ಆದ್ಮಿಗೆ ತಿರುಗೇಟು ನೀಡಬಹುದು. ಕಾಂಗ್ರೆಸ್‍ನಲ್ಲಿ ಭಿನ್ನಾಭಿಪ್ರಾಯಗಳಿದೆ. ಕಾಂಗ್ರೆಸ್ ಅಧ್ಯಕ್ಷ ನವಜೋತು ಸಿಂಗ್ ಸಿಧು ಕೂಡಾ ಸಿಎಂ ರೇಸ್‍ನಲ್ಲಿದ್ದು ಹಲವು ನಾಯಕರು ಆಕಾಂಕ್ಷಿಗಳಾಗಿದ್ದಾರೆ ಎಂದು ಆಮ್ ಆದ್ಮಿ ಪ್ರಚಾರ ಮಾಡುತ್ತಿದೆ. ಇವುಗಳಿಗೆ ತೆರೆ ಎಳೆಯಲು ಸಿಎಂ ಅಭ್ಯರ್ಥಿ ಘೋಷಣೆಯಾಗಬೇಕು ಎಂದು ಚನ್ನಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಾದಯಾತ್ರೆ ಕೈ ಬಿಡುವಂತೆ ಸಿದ್ದರಾಮಯ್ಯ, ಡಿಕೆಶಿಗೆ ಸಿಎಂ ಬೊಮ್ಮಾಯಿ ಪತ್ರ