ಶ್ರವಣಬೆಳಗೊಳದ ಚಿಕ್ಕಬೆಟ್ಟದ ತಪ್ಪಲಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯ ಅಂತ್ಯಕ್ರಿಯೆ

Public TV
1 Min Read
CHARUKEERTHI SWAMIJI 2

ಹಾಸನ: ಶ್ರವಣಬೆಳಗೊಳದ (Shravanabelagola) ಖ್ಯಾತ ಜೈನ ಮುನಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (Charukeerthi Bhattaraka Swamiji)  ಅವರ ಅಂತ್ಯಕ್ರಿಯೆ ಚಿಕ್ಕಬೆಟ್ಟದ ತಪ್ಪಲಿನಲ್ಲಿ ಜೈನ ಸಂಪ್ರದಾಯದ ಅನುಸಾರ ಕಿರಿಯ ಸ್ವಾಮೀಜಿ ಸಮ್ಮುಖದಲ್ಲಿ ನಡೆಯಿತು.

ಜೈನ ಮುನಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಗುರುವಾರ ನಸುಕಿನ ಜಾವ ಜೀನೈಕ್ಯರಾಗಿದ್ದಾರೆ. ಸ್ವಾಮೀಜಿ ಗುರುವಾರ ಬೆಳಗ್ಗೆ ನಿತ್ಯಕರ್ಮಗಳಿಗೆ ಎದ್ದಂತಹ ಸಮಯದಲ್ಲಿ ಕಾಲುಜಾರಿ ಕೆಳಗೆ ಬಿದ್ದು, ತಲೆಗೆ ಗಂಭೀರ ಸ್ವರೂಪದ ಪೆಟ್ಟು ಮಾಡಿಕೊಂಡಿದ್ದರು. ಕೂಡಲೇ ಸ್ವಾಮೀಜಿಯನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.

CHARUKEERTHI SWAMIJI 3

73 ವರ್ಷದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜೀನೈಕ್ಯರಾಗಿರುವುದಾದಕ್ಕೆ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ, ಆದಿಚುಂಚನಗಿರಿ ಸ್ವಾಮೀಜಿ, ಸುತ್ತೂರು ಶ್ರೀಗಳು ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ. ಶ್ರೀಮಠದ ಆವರಣದಲ್ಲಿ ಸ್ವಾಮೀಜಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಭಕ್ತರು ಅಂತಿಮ ನಮನ ಸಲ್ಲಿಸಿದರು. ಶ್ರೀಗಳ ಗೌರವಾರ್ಥ ಶ್ರವಣಬೆಳಗೊಳದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿ ಸ್ವಯಂಪ್ರೇರಿತವಾಗಿ ಬಂದ್ ಆಚರಿಸಲಾಯಾಯಿತು.

1949 ಮೇ 3 ರಂದು ರತ್ನವರ್ಮರಾಗಿ ಕಾರ್ಕಳದ (Karkala) ವರಂಗ ಗ್ರಾಮದಲ್ಲಿ ಜನಿಸಿದ್ದ ಸ್ವಾಮೀಜಿಯವರಿಗೆ 74 ವರ್ಷವಾಗಿತ್ತು. ಸಂಸ್ಕೃತ, ಪ್ರಾಕೃತ, ಕನ್ನಡದಲ್ಲಿ ಪಾಂಡಿತ್ಯ ಹೊಂದಿದ್ದ ಇವರು ಜೈನ ತತ್ವಶಾಸ್ತ್ರದಲ್ಲಿ ಪಾಂಡಿತ್ಯ ಹೊಂದಿದ್ದರು. ಅಲ್ಲದೇ ಮೈಸೂರು ವಿಶ್ವವಿದ್ಯಾಲಯದಿಂದ (Mysuru University) ಇತಿಹಾಸದಲ್ಲಿ ಎಂಎ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದಿಂದ (Bengaluru University) ತತ್ವಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದರು. 1969 ಡಿ.12 ರಂದು ಸ್ವಾಮೀಜಿಗಳಾದರು. ಇದನ್ನೂ ಓದಿ: ಶ್ರವಣಬೆಳಗೊಳ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ

Svasthishree shree Charukeerthi Bhattaraka Swamiji 1

1970 ರಲ್ಲಿ ಶ್ರವಣಬೆಳಗೊಳದ ಮಠದ ಪೀಠಾಧಿಪತಿಗಳಾದರು. ಹೊಯ್ಸಳ ವಂಶದಿಂದ ನೀಡಿದ ಚಾರುಕೀರ್ತಿ ಸ್ವಾಮೀಜಿ ಎಂಬ ಪಟ್ಟವನ್ನು ಇವರಿಗೂ ನೀಡಲಾಯಿತು. ಜೈನರ ಪ್ರಸಿದ್ಧ ಪುಣ್ಯ ಕ್ಷೇತ್ರವಾದ ಶ್ರವಣಬೆಳಗೊಳದಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಾಭಿಷೇಕವು ಇವರ ಸಮ್ಮುಖದಲ್ಲಿ ಯಶಸ್ವಿಯಾಗಿ ನಡೆದಿದೆ. 1981,1993, 2006 ಹಾಗೂ 2018 ರ ಮಹಾಮಸ್ತಾಭಿಷೇಕವನ್ನು ಯಶಸ್ವಿಯಾಗಿ ನೆರವೇರಿಸಿದ ಕೀರ್ತಿ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಗೆ ಸಲ್ಲುತ್ತದೆ. ಇದನ್ನೂ ಓದಿ: ತಲೆಗೆ ಪೆಟ್ಟುಬಿದ್ದು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸಾವು – ಹಾಸನ ಡಿಸಿ

Share This Article
Leave a Comment

Leave a Reply

Your email address will not be published. Required fields are marked *