ರಾಯ್ಪುರ: ಟ್ರಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ, 9 ಮಹಿಳೆಯರು, ಮೂರು ಮಕ್ಕಳು ಹಾಗೂ 6 ತಿಂಗಳ ಮಗು ಸೇರಿ 13 ಮಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಸೋಮವಾರ ಬೆಳಗ್ಗಿನ ಜಾವ ಈ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಭಾರತ-ಪಾಕ್ ಮಧ್ಯಸ್ಥಿಕೆಗೆ ಟ್ರಂಪ್ ಏನು ಹೆಡ್‌ಮಾಸ್ಟ್ರಾ? ನಾವೇನು ಸ್ಕೂಲ್ ಮಕ್ಕಳಾ?: ಕೃಷ್ಣ ಬೈರೇಗೌಡ
ಚಟೌಡ್ ಗ್ರಾಮದ ಕುಟುಂಬವೊಂದು ಬನ್ಸಾರಿಗೆ ಮದುವೆ ಸಮಾರಂಭಕ್ಕೆ ತೆರಳಿತ್ತು. ಸುಮಾರು 50 ಜನರು ಟ್ರಕ್ಕೊಂದರಲ್ಲಿ ಸಮಾರಂಭದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಸರಗಾಂವ್ ಬಳಿ ಬನ್ಸಾರಿಯಿಂದ ಬರುತ್ತಿದ್ದ ಟ್ರಕ್‌ಗೆ ಇನ್ನೊಂದು ಟ್ರಕ್ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಧಾರಾಕಾರ ಮಳೆಗೆ ತತ್ತರಿಸಿದ ಕೀನ್ಯಾ – ರಸ್ತೆಗಳು ಸಂಪೂರ್ಣ ಜಲಾವೃತ
ಡಿಕ್ಕಿಯ ರಭಸಕ್ಕೆ ಟ್ರಕ್‌ನಲ್ಲಿದ್ದ 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 9 ಮಹಿಳೆಯರು, ಇಬ್ಬರು ಹೆಣ್ಣುಮಕ್ಕಳು, ಓರ್ವ ಗಂಡುಮಗು ಹಾಗೂ 6 ತಿಂಗಳ ಮಗು ಸೇರಿ 13 ಮಂದಿ ಅಸುನೀಗಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿಗೆ ಯುದ್ಧಕ್ಕಿಂತ ಬಿಹಾರ ಚುನಾವಣೆ ಮುಖ್ಯ: ಪ್ರಿಯಾಂಕ್ ಖರ್ಗೆ ಕಿಡಿ
ಘಟನಾ ಸ್ಥಳಕ್ಕೆ ರಾಯ್ಪುರ ಜಿಲ್ಲಾಧಿಕಾರಿ ಗೌರವ್ ಸಿಂಗ್ ಭೇಟಿ ನೀಡಿದರು. ರಾಯ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.