Belgaum
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ ಅಪ್ಪುಗೋಳ್ ಅರೆಸ್ಟ್

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಹಕಾರಿ ಬ್ಯಾಂಕ್ ದಿವಾಳಿ ಪ್ರಕರಣದ ಹಿನ್ನೆಯಲ್ಲಿ ತಲೆಮರೆಸಿಕೊಂಡಿದ್ದ ಖ್ಯಾತ ನಿರ್ಮಾಪಕ ಆನಂದ ಅಪ್ಪುಗೋಳ್ ಅವರನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸಾರ್ವಜನಿಕರ ಠೇವಣಿ ಹಣವನ್ನ ಸಕಾಲಕ್ಕೆ ಪಾವತಿಸಿಲ್ಲ. ಹೀಗಾಗಿ ಠೇವಣಿದಾರರಿಗೆ ನಂಬಿಕೆ ದ್ರೋಹ, ಮೋಸ, ವಂಚನೆ ಮಾಡಿದ ಆರೋಪದಲ್ಲಿ ಸೆ. 4ರಂದು ಸಹಕಾರಿ ಸಂಘಗಳ ಸಹಾಯಕ ನಿಬಂಧಕರಿಂದ ಬ್ಯಾಂಕ್ ಅಧ್ಯಕ್ಷರು, ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ್ ಸೇರಿ ಆಡಳಿತ ಮಂಡಳಿ ಸದಸ್ಯರು ತಲೆ ಮರೆಸಿಕೊಂಡಿದ್ದಾರೆ ಅಂತಾ ದೂರು ದಾಖಲಿಸಿದ್ದರು.
ಕೆಲವು ದಿನಗಳ ಕಾಲ ತಲೆಮರೆಸಿಕೊಂಡಿದ್ದ ನಿರ್ಮಾಪಕ ಆನಂದ ಅಪ್ಪುಗೋಳ್ ಅವರನ್ನು ಮುಂಬೈನಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
