ಶಿವಮೊಗ್ಗ ಏರ್ಪೋರ್ಟ್ ರನ್‌ವೇ ನಿರ್ಮಾಣದ ಅಕ್ರಮದ ಬಗ್ಗೆ ಪರಿಶೀಲಿಸಿ ಕ್ರಮ: ಎಂ.ಬಿ ಪಾಟೀಲ್

Public TV
1 Min Read
MB Patil

ಬೆಂಗಳೂರು: ರನ್‌ವೇ (Runway) ನಿರ್ಮಾಣ ಅಕ್ರಮದಲ್ಲಿ ಆರೋಪ ಆಗಿದೆ ಎಂದು ಸದಸ್ಯರು ಆರೋಪ ಮಾಡಿದ್ದಾರೆ. ಇಲಾಖೆ ಅಧಿಕಾರಿಗಳಿಂದ ಮಾಹಿತಿ ತರಿಸಿ ಅದರ ಬಗ್ಗೆ ಮಾಹಿತಿ ನೀಡುತ್ತೇನೆ. ಅದಕ್ಕೂ ಸದಸ್ಯರು ತೃಪ್ತರಾಗದೇ ಹೋದರೆ ತನಿಖೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಮೂಲಭೂತ ಸೌಕರ್ಯಗಳ ಸಚಿವ ಎಂ.ಬಿ ಪಾಟೀಲ್ (M.B.Patil) ಹೇಳಿದರು.

ಶಿವಮೊಗ್ಗ (Shivamogga) ವಿಮಾನ ನಿಲ್ದಾಣದ ಹೊಸ ರನ್‌ವೇ ನಿರ್ಮಾಣಕ್ಕೆ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ರನ್‌ವೇ ನಿರ್ಮಾಣದಲ್ಲಿ ದೊಡ್ಡ ಅಕ್ರಮ ಆಗಿದೆ. ಈ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಸದಸ್ಯ ಮಂಜುನಾಥ್ ಭಂಡಾರಿ ಆಗ್ರಹ ಮಾಡಿದರು. ಶಿವಮೊಗ್ಗ ವಿಮಾನ ನಿಲ್ದಾಣದ ಹೊಸ ರನ್‌ವೇ ನಿರ್ಮಾಣದಲ್ಲಿ ಅಕ್ರಮ ಆಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಂಜುನಾಥ್ ಭಂಡಾರಿ ಒತ್ತಾಯಿಸಿದರು. ಇದನ್ನೂ ಓದಿ: ಪ್ರಾಥಮಿಕ ಶಾಲಾ ಹಂತದಲ್ಲಿ NEP ಜಾರಿ ಮಾಡೋದಿಲ್ಲ: ಮಧು ಬಂಗಾರಪ್ಪ

ಇದಕ್ಕೆ ಉತ್ತರ ನೀಡಿದ ಮೂಲಭೂತ ಸೌಕರ್ಯಗಳ ಸಚಿವ ಎಂಬಿ ಪಾಟೀಲ್, ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣದ ಪ್ರಾರಂಭಿಕ ಅಂದಾಜು ಮೊತ್ತ 220 ಕೋಟಿ ರೂ. ಇತ್ತು. ಎರಡು ಬಾರಿ ಇದು ಪರಿಷ್ಕರಣೆ ಆಗಿದೆ. ಪರಿಷ್ಕೃತ ಅಂದಾಜು ಮೊತ್ತ 449.22 ಕೋಟಿ ರೂ.ಗೆ ಅನುಮೋದನೆ ನೀಡಲಾಗಿದೆ. ಹಳೇ ಮತ್ತು ಹೊಸ ರನ್‌ವೇ ನಿರ್ಮಾಣಕ್ಕೆ 247.98 ಕೋಟಿ ರೂ. ವೆಚ್ಚ ಮಾಡಲಾಗಿದೆ. ಸುಮಾರು 21.85 ಕೋಟಿ ರೂ. ಮಾತ್ರ ಪಾವತಿ ಬಾಕಿ ಇದೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಡಿಸಿ, ಸಿಇಓ, ಕಮಿಷನರ್‌ಗಳಿಗೆ ರೇಟ್ ಫಿಕ್ಸ್ ಆಗಿದೆ: ಕಟೀಲ್ ಗಂಭೀರ ಆರೋಪ

Web Stories

Share This Article