ಬೆಳಗಾವಿ: ಸಿಸಿ ಪಾಟೀಲ್ರ (CC Patil) ಮನೆಯಲ್ಲಿ ದಿನಾಲೂ ಬೊಮ್ಮಾಯಿ (Basavaraj Bommai) ಏನು ಮಾಡುತ್ತಾರೆ ಚೆಕ್ ಮಾಡಬೇಕು. ಅಪಹಾಸ್ಯವಾಗಿ ಮಾತನಾಡುವುದು ಯಾವುದೇ ನಾಯಕರಿಗೆ ಗೌರವ ತರುವಂತದಲ್ಲ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ (Vijayananda Kashappanavar) ವಾಗ್ದಾಳಿ ನಡೆಸಿದ್ದಾರೆ.
ಪಂಚಮಸಾಲಿ (Panchamasali) ಸಮಾಜದಿಂದ 2ಡಿ ಮೀಸಲಾತಿ (2D Reservation) ವಿರೋಧ ವ್ಯಕ್ತವಾಗಿದ್ದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ನೇತೃತ್ವದಲ್ಲಿ ನಗರದ ಗಾಂಧಿಭವನದಲ್ಲಿ ನಡೆದ ಪಂಚಮಸಾಲಿ ಸಮುದಾಯದ ಕಾರ್ಯಕಾರಣಿ ಸಭೆ ತೀವ್ರ ವಿರೋಧ ವ್ಯಕ್ತವಾಗಿದೆ.
Advertisement
Advertisement
ಸಭೆಯಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಮಾಜಿ ಶಾಸಕ ಎಬಿ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದ್ದು ಸಭೆಯಲ್ಲಿ ಮಾರ್ಚ್ 27 ರಂದು ಸರ್ಕಾರದ ಸುತ್ತೋಲೆ ಬಗ್ಗೆ ಚರ್ಚೆ ಮಾಡಿದರು. ಬಳಿಕ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ಯಾವುದೇ ಕಾರಣಕ್ಕೂ ಸರ್ಕಾರದ ಆದೇಶವನ್ನು ನಾವು ಒಪ್ಪೋದಿಲ್ಲ. ಬಿಜೆಪಿ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಇದನ್ನು ನಾವೆಲ್ಲರೂ ಖಂಡಿಸಬೇಕು ಮುಂದೆ ಸರ್ಕಾರ ಬದಲಾಗುತ್ತೆ ನಮಗೆ ನ್ಯಾಯ ಸಿಗುತ್ತದೆ ಎಂದರು. ಇದನ್ನೂ ಓದಿ: ಅತ್ಯಾಚಾರಿಗಳಿಗೆ ಲಡ್ಡು ತಿನ್ನಿಸುತ್ತೀರಿ: ಗೂಂಡಾಗಳನ್ನ ತಲೆಕೆಳಗೆ ನೇತಾಕ್ತೀವಿ ಎಂದಿದ್ದ ಶಾಗೆ ಮಹುವಾ ತಿರುಗೇಟು
Advertisement
ಕಳೆದ ಎರಡೂವರೆ ವರ್ಷಗಳಿಂದ ಹೋರಾಟ ಮಾಡಿದ್ರೂ ನಮಗೆ ಸೂಕ್ತ ನ್ಯಾಯ ಸಿಕ್ಕಿಲ್ಲ. 2023ರ ಮಾರ್ಚ್ 27 ರಂದು 2 ಸುತ್ತೋಲೆ ಹೊರಡಿಸಿದ್ದಾರೆ, ಇದು ಖಂಡನೀಯ. 2ಡಿ ಮೀಸಲಾತಿಯಲ್ಲಿ 52 ಜಾತಿಗಳಿವೆ. ಎಲ್ಲರಿಗೂ ಸೇರಿಸಿ ಘೋಷಣೆ ಮಾಡಿದ್ದಾರೆ. ಪಂಚಮಸಾಲಿ ಲಿಂಗಾಯತರಿಗೆ ಪ್ರತ್ಯೇಕ ಮೀಸಲಾತಿ ಕೇಳಿದ್ದೇವೆ. ಕೇವಲ 2 ಪರ್ಸೆಂಟ್ ಮೀಸಲಾತಿ ಹೆಚ್ಚಳ ಮಾಡುವ ನಾಟಕ ಮಾಡಿದ್ದಾರೆ. ಮತ್ತೊಬ್ಬರ ಮೀಸಲಾತಿ ಕಸಿದುಕೊಳ್ಳುವಂತಹ ಕೆಟ್ಟವರು ಲಿಂಗಾಯತರಲ್ಲ. ಕೆಲವು ರಾಜಕೀಯ ಕುತಂತ್ರಿಗಳು ನಾಟಕ ಮಾಡಿದ್ದಾರೆ. ವಿಜಯೋತ್ಸವ ಆಚರಣೆ ಮಾಡುತ್ತೇವೆ ಎನ್ನುತ್ತಾರೆ. ನಾವಿದನ್ನು ಒಪ್ಪೋದಿಲ್ಲ. ವಿಜಯೋತ್ಸವ ಮಾಡುವುದಿಲ್ಲ. ಸ್ವಾಮೀಜಿ ದುಃಖದಿಂದ ಕಣ್ಣೀರು ಹಾಕಿದ್ದಾರೆ. ಅವರಿಗೆ ಸಂತೋಷ ಆಗಿಲ್ಲ. ಸ್ವಾಮೀಜಿ ನಮ್ಮ ಜೊತೆ ಇದ್ದಾರೆ. ಮುಂದೆ ನಾವು ಹೋರಾಟ ಮಾಡುತ್ತೇವೆ ಎಂದರು.
Advertisement
ಕುಲಕರ್ಣಿ, ಕಾಶಪ್ಪನವರ್ ಕುಡಿದು ಸ್ವಾಮೀಜಿ ಬಗ್ಗೆ ಮಾತನಾಡಿದ್ದಾರೆ ಎಂಬ ಸಿಸಿ ಪಾಟೀಲ್ ಹೇಳಿಕೆ ವಿಚಾರಕ್ಕೆ ವಾಗ್ದಾಳಿ ನಡೆಸಿದ ವಿಜಯಾನಂದ ಕಾಶಪ್ಪನವರ್, ಸಿಸಿ ಪಾಟೀಲ್ರ ಮನೆಯಲ್ಲಿ ದಿನಾಲೂ ಬೊಮ್ಮಾಯಿ ಏನು ಮಾಡುತ್ತಾರೆ ಚೆಕ್ ಮಾಡಬೇಕು. ಅಪಹಾಸ್ಯವಾಗಿ ಮಾತನಾಡುವುದು ಯಾವುದೇ ನಾಯಕರಿಗೆ ಗೌರವ ತರುವಂತದಲ್ಲ. ಬಿಜೆಪಿ ಸರ್ಕಾರ ಮೀಸಲಾತಿ ವಿಚಾರದಲ್ಲಿ ಚೆಲ್ಲಾಟ ಆಡುತ್ತಿದೆ. ಈ ಮೀಸಲಾತಿ ಚುನಾವಣೆ ಸಲುವಾಗಿ ಮಾಡಿರುವ ಕುತಂತ್ರವಾಗಿದೆ. ನಾವು ವಿಜಯೋತ್ಸವ ಆಚರಣೆ ಮಾಡುವುದಿಲ್ಲ ಇದನ್ನು ತಿರಸ್ಕರಿಸುತ್ತೇವೆ ಎಂದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಮಾನಸಿಕ ಚಿಂತನೆಗೆ ಒಳಗಾಗಿ ನಿಮ್ಮ ಪ್ರಾಣ ಹೋಗಬಾರದು: ಎಚ್ಡಿಡಿ ಬಗ್ಗೆ ಎಚ್ಡಿಕೆ ಭಾವುಕ