ಭೋಪಾಲ್: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ತೆರೆದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದ್ದ ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದ ಚೀತಾಗಳ (Cheetah) ನಡುವೆ ರೋಚಕ ಕಾದಾಟ ನಡೆದಿದೆ. ಕಾಡಿನಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿದ್ದ ಚೀತಾಗಳ ಎರಡು ಗುಂಪಿನ ನಡುವೆ ಸಂಘರ್ಷ ನಡೆದಿದ್ದು, ಪರಿಣಾಮ ಆಫ್ರಿಕಾದ ಗಂಡು ಚೀತಾ ʻಅಗ್ನಿʼ ಗಾಯಗೊಂಡಿದೆ.
Advertisement
ಅಗ್ನಿ ಚೀತಾ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಚೀತಾ ಆರೋಗ್ಯವಾಗಿದ್ದು ಆತಂಕ ಪಡಬೇಕಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ತನ್ನ 15 ಎಕರೆ ಆಸ್ತಿಯನ್ನು ಮೋದಿ ಹೆಸರಿಗೆ ಬರೆದುಕೊಡುವುದಾಗಿ 100ರ ವೃದ್ಧೆ ಘೋಷಣೆ
Advertisement
ನಮೀಬಿಯಾದಿಂದ ತಂದಿದ್ದ ಗೌರವ್ ಮತ್ತು ಶೌರ್ಯ, ದಕ್ಷಿಣ ಆಫ್ರಿಕಾದಿಂದ (South Africa) ತಂದಿದ್ದ ಅಗ್ನಿ ಮತ್ತು ವಾಯು ಚೀತಾಗಳ ನಡುವೆ ಕಾದಾಟ ನಡೆದಿತ್ತು. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ 4 ಚೀತಾಗಳ ನಡುವೆ ರೋಚಕ ಕಾದಾಟ ನಡೆದಿತ್ತು. ಈ ವೇಳೆ ಅಧಿಕಾರಿಗಳು ಸೈರನ್ ಹಾಗೂ ಪಟಾಕಿ ಸಿಡಿಸಿ ಕಾದಾಟ ನಿಲ್ಲಿಸಿದರು.
Advertisement
Advertisement
ಈ ವೇಳೆ ಗಾಯಗೊಂಡ ಸ್ಥಿತಿಯಲ್ಲಿದ್ದ ಅಗ್ನಿಯನ್ನು ಚೀತಾ ʻಅಗ್ನಿʼ ಕಂಡು ತಜ್ಞರೊಂದಿಗೆ ಸ್ಥಳಕ್ಕಾಮಿಸಿದ ಸಿಬ್ಬಂದಿ, ಚಿಕಿತ್ಸೆಗಾಗಿ ಕುನೋದಲ್ಲಿನ ಆಸ್ಪತ್ರೆಗೆ ಕರೆತರಲಾಯಿತು. ಚಿಕಿತ್ಸೆ ಬಳಿಕ ಅಗ್ನಿ ಸ್ಥಿತಿ ಸುಧಾರಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಸ್ಥಳಾಂತರಿಸಿದ್ದ ಮತ್ತೊಂದು ಚೀತಾ ಸಾವು
ಮಚ್ಚೆ ಗುರುತಿನ ಚೀತಾಗಳ ಸಂತತಿಯನ್ನು 1952ರಲ್ಲಿ ಭಾರತದಲ್ಲಿ ಅಳಿದುಹೋದ ಸಂತತಿ ಎಂದು ಘೋಷಣೆ ಮಾಡಲಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 2009ರಲ್ಲಿ ಆಫ್ರಿಕನ್ ಚಿರತೆ ಯೋಜನೆ ಮಾಡಲಾಗಿತ್ತು, ಆದರೆ ಕಾರಣಾಂತರಗಳಿಂದ ಅನುಷ್ಠಾನವಾಗಿರಲಿಲ್ಲ. ಅದಾದ 75 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ ಚೀತಾಗಳಿಗೆ ಕುನೊ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಅಲ್ಲಿನ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಯಿತು. 8 ಚೀತಾಗಳ ಸ್ಥಳಾಂತರಕ್ಕೆ 75 ಕೋಟಿ ರೂ. ಖರ್ಚು ಮಾಡಲಾಯಿತು. ಕಳೆದ ವರ್ಷದ ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದಂದೇ ಕುನೋ ಪಾರ್ಕ್‌ಗೆ ಚೀತಾಗಳನ್ನು ಬಿಡಲಾಗಿತ್ತು.
ನಮೀಬಿಯಾದಿಂದ 8 ಚೀತಾಗಳನ್ನು ತರಿಸಿದ ಕೆಲ ತಿಂಗಳ ನಂತರ ದಕ್ಷಿಣ ಆಫ್ರಿಕಾದಿಂದಲೂ 12 ಚೀತಾಗಳನ್ನ ತರಿಸಲಾಗಿತ್ತು. ಅವುಗಳನ್ನು ಕ್ವಾರಂಟೈನ್ ಮಾಡಿ, ಪ್ರದೇಶಲ್ಲೇ ಒಗ್ಗಿಕೊಂಡ ನಂತರ ತೆರೆದ ಅರಣ್ಯ ಪ್ರದೇಶಕ್ಕೆ ಬಿಡಲಾಗಿತ್ತು. ಅವುಗಳಲ್ಲಿ ದಕ್ಷಿಣ ಆಫ್ರಿಕಾದಿಂದ ತಂದಿದ್ದ ಚೀತಾಗಳ ಪೈಕಿ ಉದಯ್ ಹೆಸರಿನ ಗಂಡು ಚೀತಾ ಹೃದಯ-ಶ್ವಾಸಕೋಶ ವೈಫಲ್ಯದಿಂದ ಮೃತಪಟ್ಟರೆ, ದಕ್ಷ ಹೆಸರಿನ ಗಂಡು ಚೀತಾ ಗಾಯಗೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿತ್ತು.