ಭೋಪಾಲ್: ಕಳೆದ 7 ದಶಕಗಳ ಹಿಂದೆ ಭಾರತದಲ್ಲಿ(India) ನಶಿಸಿ ಹೋಗಿದ್ದ ಚೀತಾಗಳನ್ನು(Cheetah) ಶನಿವಾರ ನಮೀಬಿಯಾದಿಂದ(Namibia) ಭಾರತಕ್ಕೆ ತರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು(Narendra Modi) ತಮ್ಮ 72ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದರೊಂದಿಗೆ 8 ಚೀತಾಗಳನ್ನು ಮಧ್ಯಪ್ರದೇಶದ(Madhya Pradesh) ಕುನ್ಹೋ ರಾಷ್ಟ್ರೀಯ ಉದ್ಯಾನವನದಲ್ಲಿ(Kuno National Park) ಬಿಡುಗಡೆ ಮಾಡಿದ್ದಾರೆ.
Advertisement
ಇಂದು ಬೆಳಗ್ಗೆ ನಮೀಬಿಯಾದಿಂದ ವಿಶೇಷ ವಿಮಾನದಲ್ಲಿ ತರಲಾದ 8 ವನ್ಯಜೀವಿ ಅತಿಥಿಗಳನ್ನು ಭಾರತೀಯ ವಾಯುಪಡೆ ಹೆಲಿಕಾಪ್ಟರ್ ಗ್ವಾಲಿಯರ್ ಏರ್ ಫೋರ್ಸ್ ಸ್ಟೇಷನ್‌ನಿಂದ ಕುನ್ಹೋ ರಾಷ್ಟ್ರೀ ಯ ಉದ್ಯಾನವನಕ್ಕೆ ತರಲಾಗಿದೆ.
Advertisement
Advertisement
ಚೀತಾ ವಿಶೇಷತೆಯೇನು?
ನಮೀಬಿಯಾದಿಂದ ತರಲಾದ 8 ಚೀತಾಗಳಲ್ಲಿ 3 ಗಂಡು ಹಾಗೂ 5 ಹೆಣ್ಣು ಚೀತಾಗಳಿವೆ. ಇವು 2 ರಿಂದ 6 ವರ್ಷ ಆಸುಪಾಸಿನದ್ದಾಗಿವೆ. ಇದನ್ನೂ ಓದಿ: ವಿಮಾನದಲ್ಲಿ ಭಾರತಕ್ಕೆ ಬರುತ್ತಿದೆ 8 ಚೀತಾ – ವಿಶೇಷತೆ ಏನು? ತಯಾರಿ ಹೇಗೆ?
Advertisement
Welcome to India! pic.twitter.com/HmbMtmFQhY
— Mann Ki Baat Updates मन की बात अपडेट्स (@mannkibaat) September 17, 2022
ಮಚ್ಚೆ ಗುರುತಿನ ಚೀತಾಗಳ ಸಂತತಿ ಭಾರತದಲ್ಲಿ 70 ವರ್ಷ ಹಿಂದೆಯೇ ನಾಶವಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 1952ರಲ್ಲಿ ಈ ಪ್ರಭೇದ ಭಾರತದಲ್ಲಿ ಇಲ್ಲ ಎಂದು ಘೋಷಣೆ ಮಾಡಲಾಗಿತ್ತು.
ಇದೀಗ 75 ವರ್ಷಗಳ ಬಳಿಕ ಭಾರತಕ್ಕೆ ಚೀತಾಗಳು ಬಂದಿವೆ. ಈ ಚೀತಾಗಳಿಗೆ ಕುನ್ಹೋ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಅಲ್ಲಿನ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಗಿದೆ. 8 ಚೀತಾಗಳ ಸ್ಥಳಾಂತರಕ್ಕೆ 75 ಕೋಟಿ ರೂ. ಖರ್ಚು ಮಾಡಲಾಗಿದೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಬೊಮ್ಮಾಯಿಗೆ ಕಪ್ಪುಪಟ್ಟಿ ಪ್ರದರ್ಶನ