– ಅರಣ್ಯ ಇಲಾಖೆ ವಿರುದ್ಧ ಜನಾಕ್ರೋಶ
ಬಳ್ಳಾರಿ: ಚಿರತೆ ದಾಳಿಗೆ ಮೂರು ವರ್ಷದ ಮಗುವೊಂದು ಬಲಿಯಾದ ಹೃದಯವಿದ್ರಾವಕ ಪ್ರಕರಣವೊಂದು ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ನಡೆದಿದೆ.
ದಿ.ನಾಡೋಜ ಬುರ್ರಕಥಾ ಈರಮ್ಮ ಅವರ ಮರಿಮೊಮ್ಮಗ ಮೂರು ವರ್ಷದ ವೆಂಕಟರಾಜು ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಮಂಗಳವಾರ ಸಂಜೆ ಆಟವಾಡುವಾಗ ಮನೆಯವರು ನೋಡ ನೋಡುತ್ತಿದ್ದಂತೆಯೇ ಚಿರತೆ ಬಾಲಕನನ್ನು ಎಳೆದೊಯ್ದಿದೆ. ಬಳಿಕ ಆತನ ಪೋಷಕರು ಹಾಗೂ ಗ್ರಾಮಸ್ಥರು ಬಾಲಕನನ್ನ ಹುಡುಕಾಡಿದ್ದಾರೆ.
ಗ್ರಾಮದ ಹೊರವಲಯದಲ್ಲಿ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಬೆಳೆದು ನಿಂತ ಕುಡಿಯನ್ನು ಶವವಾಗಿ ನೋಡಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿರತೆಯನ್ನು ಹಿಡಿಯುವಂತೆ ಹಲವು ಬಾರಿ ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಇಲಾಖೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಅಂತಾ ಸೋಮಲಾಪುರ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶಿತರಾಗಿದ್ದಾರೆ.
ಚಿರತೆ ಮಗುವನ್ನು ಹೊತ್ತೊಯ್ದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಬೀಡು ಬಿಟ್ಟು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಇಂದು ಬೋನಿಟ್ಟು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv