ಹುಬ್ಬಳ್ಳಿ: ನಗರದ ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯೇಕ್ಷವಾಗಿದ್ದು ಸಾರ್ವಜನಿಕರಿಗೆ ಬೆಟ್ಟದ ಬಳಿ ವಾಯು ವಿಹಾರ ನಿಷೇಧ ಹೇರಲಾಗಿದೆ.
Advertisement
ಬುಧವಾರ ರಾತ್ರಿ ವಾಯುವಿಹಾರಕ್ಕೆ ಆಗಮಿಸಿದ ಸ್ಥಳೀಯರಿಗೆ ಚಿರತೆ ಕಂಡಿದ್ದು, ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಎಸ್ ಎಂ ತೆಗ್ಗಿನಮನಿ ನೇತೃತ್ವದಲ್ಲಿ ಸಿಬ್ಬಂದಿ ಬೆಟ್ಟಕ್ಕೆ ಭೇಟಿ ನೀಡಿ ಚಿರತೆ ಹೆಜ್ಜೆ ಗುರುತುಗಳ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ನಾಯಿ ಹಿಡಿಯಲು ಹೋಗಿ ಬೋನಿನಲ್ಲಿ ಲಾಕ್ ಆಯ್ತು ಚಿರತೆ!
Advertisement
Advertisement
ಚಿರತೆ ಪ್ರತ್ಯಕ್ಷವಾದ ಪರಿಣಾಮ ನೃಪತುಂಗ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಬರ್ಂಧಿಸಲಾಗಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯಲು ಬೋನ್ ವ್ಯವಸ್ಥೆ ಮಾಡಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ ಇದೀಗ ನೃಪತುಂಗ ಬೆಟ್ಟದ ಬಳಿ ಕಾಣಿಸಿಕೊಂಡ ಪರಿಣಾಮ ಬೆಟ್ಟದ ಸುತ್ತ ಮುತ್ತಲಿನ ಜನರು ಭಯಗೊಂಡಿದ್ದಾರೆ. ಇದನ್ನೂ ಓದಿ: ಕಬ್ಬಿನ ಗದ್ದೆಗೆ ಬೆಂಕಿ- ನೂರಾರು ಟನ್ ಕಬ್ಬು ಬೆಂಕಿಗಾಹುತಿ
Advertisement
ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳು ಆಹಾರ ಹುಡುಕಿ ಹೆಚ್ಚು ನಾಡಿನೊಳಗೆ ಕಾಣಿಸಿಕೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಪ್ರಾಣಿಗಳನ್ನು ಅರಣ್ಯ ಇಲಾಖೆಯವರು ರಕ್ಷಿಸಿ ಕಾಡಿಗೆ ಬಿಟ್ಟರೂ ಮತ್ತೆ ಮತ್ತೆ ನಾಡಿನೊಳಗೆ ಕಾಣಿಸಿಕೊಳ್ಳುತ್ತಿವೆ.