ಮಂಡ್ಯ: ಬಸ್ ದರ ಏರಿಕೆ ವಿಚಾರವಾಗಿ ರಾಷ್ಟ್ರೀಯ ನಾಯಕರು ಅಷ್ಟೊಂದು ತುಚ್ಛವಾಗಿ ಹೇಳಿರಲ್ಲ, ಮಾಧ್ಯಮದವರು ಉಪ್ಪು ಖಾರ ಸೇರಿಸಿ ಹೇಳಿದ್ದಾರೆ ಎಂದು ಟೀಕಿಸಿ ತೈಲ ಬೆಲೆ ಏರಿಕೆಯಾದರೆ ನೀರಲ್ಲಿ ಓಡಿಸಲಾಗುತ್ತಾ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ಮಾಜಿ ಸಚಿವ ಚಲುವರಾಯಸ್ವಾಮಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ತೈಲ ಬೆಲೆ ಏರಿಕೆ ವಿರೋಧಿಸಿ ಬಂದ್‍ನಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ವೇಳೆ ಮಾತನಾಡಿದ ಅವರು ತೈಲ ಬೆಲೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಬೆಂಗಳೂರು ಮೈಸೂರು ಹೆದ್ದಾರಿ ಸೇರಿದಂತೆ ಮಂಡ್ಯ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೇಂದ್ರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇದನ್ನು ಓದಿ: ದರ ಇಳಿಸಿ ಅಂದ್ರೆ ನೀರಲ್ಲಿ ಬಸ್ ಓಡಿಸುವುದಕ್ಕೆ ಸಾಧ್ಯವಾಗುತ್ತಾ..?- ಎಚ್‍ಡಿಡಿ
Advertisement
Advertisement
ಡಿಕೆ ಶಿವಕುಮಾರ್ ಅವರ ವಿಚಾರಕ್ಕೆ ಪ್ರತಿಕ್ರಿಯಿಸಿ ಕರ್ನಾಟಕದಲ್ಲಿ ಪ್ರಭಾವಿ ನಾಯಕರಾಗಿದ್ದು, ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರ ಮೇಲೆ ಐಟಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಐಟಿ ದಾಳಿ ಸರ್ಕಾರದ ಮೇಲೂ ಪರಿಣಾಮ ಬೀರಲ್ಲ. ಡಿಕೆ ಶಿವಕುಮಾರ್ ಮೇಲೂ ಪರಿಣಾಮ ಬೀರಲ್ಲ. ಬಿಜೆಪಿ ಅನೇಕ ಕಡೆ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಆತಂಕ ಬೇಡ. ನಾವೆಲ್ಲರೂ ಡಿಕೆ ಶಿವಕುಮಾರ್ ಜೊತೆ ಇದ್ದೇವೆ. ಅವರೂ ಕೂಡ ಐಟಿ ದಾಳಿಯನ್ನು ಸಮರ್ಥವಾಗಿ ಎದುರಿಸುತ್ತಾರೆ ಎಂದರು.
Advertisement
ಪ್ರಧಾನಿ ವಿರುದ್ಧವೂ ಹರಿಹಾಯ್ದ ಅವರು ಮೋದಿ ನೀಡಿದ ಒಂದೊಂದು ಭರವಸೆಯೂ ಹುಸಿಯಾಗಿದೆ. ಆರು ತಿಂಗಳಲ್ಲಿ ಚುನಾವಣೆ ಇರುವುದರಿಂದ ಇಲ್ಲದ್ದನ್ನು ಗಿಮಿಕ್ ಮಾಡುತ್ತಿದ್ದಾರೆ ಎಂದು ದೂರಿದರು.
Advertisement
ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕೆಲವೊಂದು ಅಂಗಡಿಗಳನ್ನು ಬಲವಂತವಾಗಿ ಬಾಗಿಲು ಹಾಕಿಸಿದ್ದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv