ಕೃಷಿ ಹೊಂಡದಲ್ಲಿ ಕೆಮಿಕಲ್ ಹಾಕಿ ಬ್ಲಾಸ್ಟ್ – ಡ್ರೋನ್ ಪ್ರತಾಪ್ ಅರೆಸ್ಟ್

Public TV
2 Min Read
drone prathap

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ (Sodium) ಹಾಕಿ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್‌ನನ್ನು (Drone Prathap) ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ.

ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ಈ ಸಂಬಂಧ ಇಂದು (ಗುರುವಾರ) ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಡ್ರೋನ್ ಪ್ರತಾಪ್‌ನನ್ನು ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಇದನ್ನೂ ಓದಿ: Haveri | ವರದಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

Drone Prathap Sodium Blast

ಪ್ರಕರಣ ಏನು?
ನೀರಿಗೆ ಕೆಮಿಕಲ್ ಹಾಕಿ ಡ್ರೋನ್ ಪ್ರತಾಪ್ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾರೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ. ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್ ಬಿಲ್ಡಪ್ ಬೇರೆ ಕೊಟ್ಟಿದ್ದಾರೆ. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಎಂದು ಪ್ರತಾಪ್ ಕೂಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್‌ ಆತ್ಮಹತ್ಯೆ ಕೇಸ್‌ – ಅತ್ತೆ, ಬಾಮೈದ ಪೊಲೀಸರ ವಶಕ್ಕೆ

ಈ ರೀತಿ ವಿಡಿಯೋ ಮಾಡೋದು ಕಾನೂನು ಬಾಹಿರ. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ. ಯಾವೆಲ್ಲ ಕೆಮಿಕಲ್ ಹಾಕಿದ್ರೇ ಬ್ಲಾಸ್ಟ್ ಆಗುತ್ತೆ ಅಂತಾನೂ ಲೈವ್‌ನಲ್ಲಿ ಹೇಳಿದ್ದು, ಇದನ್ನು ಕಿಡಿಗೇಡಿಗಳು ಕುಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಅಂತಾ ಪರಿಸತವಾದಿ ವಿಜಯ್ ನಿಶಾಂತ್ ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ನೀಡಿ ಇತಿಹಾಸ ಸೃಷ್ಟಿಸಿದ ಕರ್ನಾಟಕ ಹೈಕೋರ್ಟ್

ಈ ರೀತಿಯ ಪ್ರಯೋಗ ಅಪಾಯಕಾರಿ ಮತ್ತು ಕಾನೂನು ಬಾಹಿರವಾದದ್ದು. ಈ ಬ್ಲಾಸ್ಟ್ ವಿಡಿಯೋ ಮಾಡುವ ಮುನ್ನ ಕನಿಷ್ಟ ಪಕ್ಷ ಡ್ರೋನ್ ಪ್ರತಾಪ್ ಯೋಚನೆ ಮಾಡಬೇಕಾಗಿತ್ತು ಇದ್ಯಾವ ಸೀಮೆ ವಿಜ್ಞಾನದ ಬಗ್ಗೆ ಮಾಹಿತಿ ಕೊಡ್ತಾ ಇರೋದು ಅವರಿಗೆ ಗೊತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.  ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ

Share This Article