ತುಮಕೂರು: ಸೋಡಿಯಂ ಮೆಟಲ್ (Chemical Blast) ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಖ್ಯಾತಿಯ ಡ್ರೋಣ್ ಪ್ರತಾಪ್‍ನನ್ನು (Drone Prathap) ಮಧುಗಿರಿಯ ಜೆಎಂಎಫ್‍ಸಿ ನ್ಯಾಯಾಲಯ (Court) ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪ್ರಕರಣ ಸಂಬಂಧ ಡ್ರೊಣ್ ಪ್ರತಾಪ್, ಜಮೀನಿನ ಮಾಲೀಕ ಸೇರಿದಂತೆ ಮೂವರ ಮೇಲೆ ಎಫ್‍ಐಆರ್ ದಾಖಲಾಗಿದೆ. ಮಿಡಿಗೇಶಿ ಪೊಲೀಸರಿಂದ ಸುಮೋಟೋ ಕೇಸ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪೊಲೀಸರು ಪ್ರತಾಪ್‌ನನ್ನ ಕರೆತಂದು ಸ್ಫೋಟ ನಡೆಸಿದ್ದ ಸ್ಥಳ ಮಹಜರು ನಡೆಸಿದ್ದಾರೆ.
Advertisement
ಏನಿದು ಪ್ರಕರಣ?
ನೀರಿಗೆ ಕೆಮಿಕಲ್ ಹಾಕಿ ಡ್ರೋನ್ ಪ್ರತಾಪ್ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾನೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ. ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್ ಬಿಲ್ಡಪ್ ಬೇರೆ ಕೊಟ್ಟಿದ್ದಾನೆ. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಎಂದು ಪ್ರತಾಪ್ ಕೂಗಿದ್ದಾನೆ.
Advertisement
Advertisement
ಈ ರೀತಿ ವಿಡಿಯೋ ಮಾಡೋದು ಕಾನೂನು ಬಾಹಿರ. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ. ಯಾವೆಲ್ಲ ಕೆಮಿಕಲ್ ಹಾಕಿದ್ರೇ ಬ್ಲಾಸ್ಟ್ ಆಗುತ್ತೆ ಅಂತಾನೂ ಲೈವ್‌ನಲ್ಲಿ ಹೇಳಿದ್ದ. ಇದನ್ನು ಕಿಡಿಗೇಡಿಗಳು ಕುಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಪರಿಸತವಾದಿ ವಿಜಯ್ ನಿಶಾಂತ್ ಕಿಡಿಕಾರಿದ್ದರು.
Advertisement
ಈ ರೀತಿಯ ಪ್ರಯೋಗ ಅಪಾಯಕಾರಿ ಮತ್ತು ಕಾನೂನು ಬಾಹಿರವಾದದ್ದು. ಈ ಬ್ಲಾಸ್ಟ್ ವಿಡಿಯೋ ಮಾಡುವ ಮುನ್ನ ಕನಿಷ್ಟ ಪಕ್ಷ ಡ್ರೋನ್ ಪ್ರತಾಪ್ ಯೋಚನೆ ಮಾಡಬೇಕಾಗಿತ್ತು ಇದ್ಯಾವ ಸೀಮೆ ವಿಜ್ಞಾನದ ಬಗ್ಗೆ ಮಾಹಿತಿ ಕೊಡ್ತಾ ಇರೋದು ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.