ಮುಂಬೈ: ಕೆಮಿಕಲ್ ಕಂಪನಿಯೊಂದರ (Chemical Company) ಬಾಯ್ಲರ್ ಸ್ಫೋಟಗೊಂಡು (Boiler Explosion) ಭಾರೀ ಬೆಂಕಿ (Fire) ಉದ್ಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra) ಪಾಲ್ಘರ್‌ನಲ್ಲಿ ಬುಧವಾರ ನಡೆದಿದೆ.
ಪಾಲ್ಘರ್ ಜಿಲ್ಲೆಯ ಬೋಯಿಸರ್ ಎಂಐಡಿಸಿ ಪ್ರದೇಶದಲ್ಲಿರುವ ರಾಸಾಯನಿಕ ಕಂಪನಿಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಇದರಿಂದ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. 12 ಜನರಿಗೆ ಗಾಯಗಳಾಗಿವೆ. ಇದನ್ನೂ ಓದಿ: ಖರ್ಗೆ ಅಭಿನಂದನಾ ಬ್ಯಾನರ್ ಹರಿದ ಕಿಡಿಗೇಡಿಗಳು – ಗ್ರಾಮಸ್ಥರಿಂದ ರಸ್ತೆ ತಡೆ
ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ. ಬೆಂಕಿಯನ್ನು ನಂದಿಸುವ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ತೊಡಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಟ್ಟಡದೊಳಗೆ ಇನ್ನೂ ಹಲವರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯ್ ಕೊಲೆ ಆರೋಪಿ ಸ್ಥಳ ಮಹಜರ್ ವೇಳೆ ಪೊಲೀಸರಿಗೆ ಹಲ್ಲೆ – ಗುಂಡು ಹೊಡೆದ ಇನ್ಸ್‌ಪೆಕ್ಟರ್