ಚೆನ್ನೈ: ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕುವ ಸಲುವಾಗಿ ತಮಿಳುನಾಡು ಪೊಲೀಸರು ಚೆನ್ನೈ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಿದ್ದಾರೆ. ಡಿಸೆಂಬರ್ 31ರ ಮಧ್ಯರಾತ್ರಿ 12 ಗಂಟೆಯಿಂದ ಜನವರಿ 1ರ ಬೆಳಗ್ಗೆ 5 ಗಂಟೆಯವರೆಗೆ ಈ ನಿರ್ಬಂಧ ಜಾರಿಯಲ್ಲಿರುತ್ತದೆ.
ಬೀಚ್‍ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷ ಆಚರಣೆಯನ್ನು ನಿಷೇಧಿಸುವ ಸಲುವಾಗಿ ಡಿಸೆಂಬರ್ 28 ರಂದು ಪ್ರಕಟಿಸಲಾದ ನಿಯಮಗಳಲ್ಲಿ ವಾಹನ ಸಂಚಾರ ನಿರ್ಬಂಧವನ್ನು ಸಹ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಕೋವಿಡ್ ಹೆಚ್ಚಾದ್ರೆ ಪಶ್ಚಿಮ ಬಂಗಾಳದಲ್ಲಿ ಶಾಲಾ-ಕಾಲೇಜ್ ಬಂದ್: ಮಮತಾ ಬ್ಯಾನರ್ಜಿ
Advertisement
Advertisement
ಡಿಸೆಂಬರ್ 31 ರಂದು ಮಧ್ಯರಾತ್ರಿ 12 ಗಂಟೆಯೊಳಗೆ ನಾಗರಿಕರು ಮನೆಗೆ ತಲುಪಲು ಪೊಲೀಸರು ಸೂಚಿಸಿದ್ದು, ಈ ನಿಯಮದ ಅಡಿಯಲ್ಲಿ ಅಗತ್ಯ ಮತ್ತು ತುರ್ತು ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಇದನ್ನೂ ಓದಿ: ಭಾರತದ ರಫೇಲ್‌ಗಳಿಗೆ ಪೈಪೋಟಿ ನೀಡಲು ಚೀನಾದ ಜೆ-10ಸಿ ಸ್ಕ್ವಾಡ್ರನ್ ಖರೀದಿಗೆ ಮುಂದಾದ ಪಾಕ್
Advertisement
Advertisement
ಬೀಚ್ ಬಳಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದ್ದು, ಡಿಸೆಂಬರ್ 31 ರಂದು ರಾತ್ರಿ 9 ಗಂಟೆಯಿಂದ ಬೀಚ್ ರಸ್ತೆಗಳಲ್ಲಿ ವಾಹನಗಳ ಸಂಚಾರವನ್ನು ಸಹ ನಿಷೇಧಿಸಲಾಗಿದೆ. ಹೊಸ ವರ್ಷದಂದು ನಗರದಲ್ಲಿ 10,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ನಿಯಮ ಉಲ್ಲಂಘನೆ ಕುರಿತಂತೆ ಪರಿಶೀಲನೆ ನಡೆಸಲಿದ್ದಾರೆ.